ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

‘ಎರಡನೇ ಹಂತದ ನಗರಗಳಲ್ಲಿಯೂ ಹೂಡಿಕೆಗೆ ಅವಕಾಶ’ ; ಮುಖ್ಯಮಂತ್ರಿ ಭೇಟಿಯಾದ ಅಮೇರಿಕಾದ ಕಾನ್ಸಲ್ ಜನರಲ್

P

Peepal Media Desk • ರಾಜ್ಯ

• 1 ನಿಮಿಷದ ಓದು

‘ಎರಡನೇ ಹಂತದ ನಗರಗಳಲ್ಲಿಯೂ ಹೂಡಿಕೆಗೆ ಅವಕಾಶ’ ; ಮುಖ್ಯಮಂತ್ರಿ ಭೇಟಿಯಾದ ಅಮೇರಿಕಾದ ಕಾನ್ಸಲ್ ಜನರಲ್

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಹೂಡಿಕೆಗೆ ಪೂರಕ ವಾತಾವರಣ ಇದ್ದು, ತುಮಕೂರು, ದಾವಣಗೆರೆ ಮತ್ತಿತರ ಎರಡನೇ ಹಂತದ ನಗರಗಳಲ್ಲಿಯೂ ಹೂಡಿಕೆ ಮಾಡಲು ಅವಕಾಶವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಶುಕ್ರವಾರ ತಮ್ಮನ್ನು ಭೇಟಿಯಾದ ಚೆನ್ನೈನಲ್ಲಿನ ಅಮೇರಿಕ ದೂತಾವಾಸದ ಕಾನ್ಸಲ್‌ ಜನರಲ್‌ ಕ್ರಿಸ್ಟೊಫರ್‌ ಡಬ್ಲ್ಯು ಹಾಡ್ಜಸ್‌ ಅವರೊಂದಿಗೆ ವಿವಿಧ ವಿಷಯಗಳ ಕುರಿತು ಚರ್ಚಿಸಿ, ಕರ್ನಾಟಕ ರಾಜ್ಯ ದೇಶದಲ್ಲಿಯೇ ಎರಡನೇ ಅತಿ ಹೆಚ್ಚು ತೆರಿಗೆ ಪಾವತಿ ಮಾಡುವ ರಾಜ್ಯವಾಗಿದ್ದು, ಹೂಡಿಕೆದಾರ ಸ್ನೇಹಿ ವಾತಾವರಣವನ್ನು ಹೊಂದಿದೆ. ಕಾನೂನು ಮತ್ತು ಶಾಂತಿ ಸುವ್ಯವಸ್ಥೆ ಅತ್ಯುತ್ತಮವಾಗಿದ್ದು, ಕೌಶಲ್ಯಯುಕ್ತ ಮಾನವ ಸಂಪನ್ಮೂಲ ಲಭ್ಯವಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನಷ್ಟು ಹೂಡಿಕೆ ಮಾಡುವಂತೆ ಮುಖ್ಯಮಂತ್ರಿಯವರು ತಿಳಿಸಿದರು.

ಬೆಂಗಳೂರಿನಲ್ಲಿ ಅಮೆರಿಕಾ ದೂತಾವಾಸ ಕಚೇರಿ:
ಬೆಂಗಳೂರಿನಲ್ಲಿ ಅಮೆರಿಕಾ ದೂತಾವಾಸ ಕಚೇರಿ ಪ್ರಾರಂಭಿಸುವ ತೀರ್ಮಾನವನ್ನು ಸ್ವಾಗತಿಸಿದ ಮುಖ್ಯಮಂತ್ರಿಯವರು, ಇದಕ್ಕೆ ಎಲ್ಲ ಅಗತ್ಯ ಬೆಂಬಲ, ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕ್ರಿಸ್ಟೊಫರ್‌ ಹಾಡ್ಜಸ್‌ ಅವರು, “ಬೆಂಗಳೂರು ಪ್ರವಾಸ ಹಾಗೂ ಭಾರತ – ಅಮೆರಿಕಾ ಭಾಗೀದಾರಿಕೆಯ ಬಗ್ಗೆ ಇಲ್ಲಿರುವ ಉತ್ಸಾಹ, ಆಶಾವಾದ ಹೊಸ ಚೈತನ್ಯ ಮೂಡಿಸಿದೆ. ಇಲ್ಲಿರುವ ಸುಮಾರು 650 ಅಮೇರಿಕನ್‌ ಕಂಪನಿಗಳು ಮತ್ತು 30 ವರ್ಷಗಳಿಂದ ಅಮೇರಿಕದ ಕಚೇರಿ ಇಲ್ಲಿ ಕೆಲಸ ಮಾಡುತ್ತಿರುವುದು ನಮ್ಮ ಬದ್ಧತೆಗೆ ಸಾಕ್ಷಿ. ನಮ್ಮ ಸಹಭಾಗಿತ್ವವನ್ನು ಇನ್ನಷ್ಟು ಮುಂದೆ ಹೇಗೆ ಕೊಂಡೊಯ್ಯಬಹುದು ಎಂಬುದರ ಬಗ್ಗೆ ಚರ್ಚೆ ನಡೆಸಿದ್ದು ಖುಷಿ ತಂದಿದೆ” ಎಂದರು.

ಪೊಲಿಟಿಕಲ್‌/ಎಕನಾಮಿಕ್‌ ವಿಭಾಗದ ಮುಖ್ಯಸ್ಥೆ ವಿರ್ಸಾ ಪರ್ಕಿನ್ಸ್‌, ಪೊಲಿಟಿಕಲ್‌/ಎಕನಾಮಿಕ್‌ ಆಫೀಸರ್‌ ಜೇಸನ್‌ ಇವಾನ್ಸ್‌ , ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು ಹಾಗೂ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌ ಉಪಸ್ಥಿತರಿದ್ದರು.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version