ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಇತರ ಧರ್ಮಗಳ ವ್ಯಾಪಾರಿಗಳಿಗೆ ಬಹಿಷ್ಕಾರ: ವಿಹಿಂಪ ನಡೆಯನ್ನು ಖಂಡಿಸಿದ ನಾಗರಿಕ ಸಂಘಟನೆಗಳು

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಇತರ ಧರ್ಮಗಳ ವ್ಯಾಪಾರಿಗಳಿಗೆ ಬಹಿಷ್ಕಾರ: ವಿಹಿಂಪ ನಡೆಯನ್ನು ಖಂಡಿಸಿದ ನಾಗರಿಕ ಸಂಘಟನೆಗಳು

ಮಂಗಳೂರು: ಜಿಲ್ಲೆಯ ಮಂಗಳಾದೇವಿ ದೇವಸ್ಥಾನದ ರಥಬೀದಿಯಲ್ಲಿ ಮುಸ್ಲಿಮರಿಗೆ ವ್ಯಾಪಾರಕ್ಕೆ ಸ್ಥಳ ನೀಡಬಾರದೆಂದು ರಚ್ಚೆ ಹಿಡಿದಿದ್ದ ವಿಶ್ವ ಹಿಂದೂ ಪರಿಷದ್‌ ಈಗ ಹೊಸದೊಂದು ವರಾತ ತೆಗೆದಿದ್ದು, ಜನರಿಗೆ ಅಂಗಡಿಯ ಮುಂದೆ ಕೇಸರಿ ಬಾವುಟ ಕಟ್ಟಿರುವ ಜನರ ಬಳಿಯಷ್ಟೇ ವ್ಯಾಪಾರ ಮಾಡುವಂತೆ ಅದು ಕರೆ ನೀಡಿದೆ.

ಈ ಕರೆಗೆ ವಿರೋಧ ವ್ಯಕ್ತಪಡಿಸಿರುವ ದಕ್ಷಿಣ ಕನ್ನಡ, ಮಂಗಳೂರಿನ ಜಾತ್ಯತೀತ ಪಕ್ಷಗಳು ಮತ್ತು ಸಂಘಟನೆಗಳ ಜಂಟಿ ವೇದಿಕೆಯು ಈ ಕರೆ ನೀಡಿರುವ ನಾಯಕರ ವಿರುದ್ಧ ಸರಕಾರ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ವಿಎಚ್‌ಪಿ ಇತರ ಧರ್ಮದ ವ್ಯಾಪಾರಿಗಳನ್ನು ಬಹಿಷ್ಕರಿಸಲು ಕರೆ ನೀಡುವ ಮೂಲಕ ಜನರನ್ನು ವಿಭಜಿಸುತ್ತಿದೆ ಅದು ಹೇಳಿದೆ.

ವಿಎಚ್‌ಪಿ ದಕ್ಷಿಣ ಕನ್ನಡ ಘಟಕದ ಅಧ್ಯಕ್ಷ ಎಚ್.ಕೆ. ಪುರುಷೋತ್ತಮ್ ಅವರು ಹೇಳಿಕೆ ನೀಡಿ, 2002ರಲ್ಲಿ ಜಾರಿಗೆ ತಂದಿರುವ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ದತ್ತಿ ಕಾಯ್ದೆಯ ಪ್ರಕಾರ ಹಿಂದೂ ಧಾರ್ಮಿಕ ಸಂಸ್ಥೆಯ ಬಳಿ ಇರುವ ಜಾಗವನ್ನು ಅನ್ಯ ಧರ್ಮದ ವ್ಯಕ್ತಿಗೆ ಗುತ್ತಿಗೆ ನೀಡುವುದನ್ನು ನಿಷೇಧಿಸಲಾಗಿದೆ. ಆದರೆ ಮಂಗಳಾದೇವಿ ದೇವಿ ದೇವಸ್ಥಾನದ ಆಡಳಿತ ಮಂಡಳಿ ಇತರೆ ಧರ್ಮದ ಜನರಿಗೂ ಅವಕಾಶ ನೀಡಿದೆ ಎಂದು ಆರೋಪಿಸಿದ್ದಾರೆ.

ಆದರೆ ಈ ಹೇಳಿಕೆಯನ್ನು ಖಂಡಿಸಿರುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ಹಾಗೂ ಭಾರತ ಪ್ರಜಾಸತ್ತಾತ್ಮಕ ಯುವ ಒಕ್ಕೂಟದ (ಡಿವೈಎಫ್‌ಐ) ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ “ಈ ಹೇಳಿಕೆಯನ್ನು ಖಂಡಿಸಿದ ಮಾತನಾಡಿ, ಶತಮಾನಗಳಿಂದಲೂ ಮಂಗಳಾದೇವಿ ದೇವಸ್ಥಾನದ ನವರಾತ್ರಿ ಆಚರಣೆಯಲ್ಲಿ ಎಲ್ಲಾ ಧರ್ಮದ ಜನರು ಸೇರುತ್ತಿದ್ದರು. ದೇವಸ್ಥಾನದ ಆಸುಪಾಸಿನಲ್ಲಿ ಎಲ್ಲಾ ಧರ್ಮದ ಜನರು ನಿಂತು ದಸರಾ ಹುಲಿ ಕುಣಿತವನ್ನು ನೋಡಿ ಆನಂದಿಸುತ್ತಿದ್ದರು, ಜಾತ್ರೆಯ ಅಂಗಡಿಗಳಲ್ಲಿ ವ್ಯಾಪಾರ ಮಾಡುತ್ತಿದ್ದರು. ಎಲ್ಲಾ ಧರ್ಮದ ಜನರು ಒಟ್ಟಾಗಿ ಸೇರುವ ಮೂಲಕ ಜಾತಿ, ಮತ ಮತ್ತು ಧರ್ಮದ ಮಿತಿಗಳನ್ನು ಮೀರಿ ಬದುಕು ನಡೆಸುತ್ತಿದ್ದಾರೆ” ಎಂದು ಹೇಳಿದರು.

ದೇವಸ್ಥಾನದ ಮುಂಭಾಗದ ರಸ್ತೆ ಮಂಗಳೂರು ಮಹಾನಗರ ಪಾಲಿಕೆಗೆ (ಎಂಸಿಸಿ) ಸೇರಿದ್ದು, ಅದರ ಜಮೀನಿನಲ್ಲಿ ಮಳಿಗೆಗಳನ್ನು ಹಾಕಲಾಗಿದೆ ಎಂದು ಹೇಳಿದರು.

ದೇವಸ್ಥಾನದ ಜಾತ್ರೆಯಲ್ಲಿ ಅನ್ಯ ಧರ್ಮದ ವ್ಯಾಪಾರಿಗಳಿಗೆ ಬಹಿಷ್ಕಾರ ಹಾಕುವಂತೆ ಕರೆ ನೀಡುವುದು ಅಪರಾಧ ಎಂದು ವೇದಿಕೆ ಹೇಳಿದೆ. ಇದು ಸಂವಿಧಾನದ ಉಲ್ಲಂಘನೆಯಾಗಿದ್ದು, ಪೊಲೀಸರು ಹಾಗೂ ಜಿಲ್ಲಾಡಳಿತ ಇದನ್ನು ಗಂಭೀರವಾಗಿ ಪರಿಗಣಿಸಿ ಸಮಾಜದಲ್ಲಿ ಶಾಂತಿ ಕದಡುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅದು ಆಗ್ರಹಿಸಿದೆ.

ಮಂಗಳಾದೇವಿ ದೇವಸ್ಥಾನದ ದಸರಾ ಉತ್ಸವದಲ್ಲಿ ಬಿಜೆಪಿ ತನ್ನ ಕೋಮುವಾದಿ ತಂತ್ರ ಪ್ರಯೋಗ ಮಾಡುವ ಮೂಲಕ ಮುಂದಿನ ವರ್ಷದ ಲೋಕಸಭೆ ಚುನಾವಣೆಗೆ ಮುನ್ನ ಸಮಾಜವನ್ನು ಧ್ರುವೀಕರಣಗೊಳಿಸಲು ವಿಎಚ್‌ಪಿ ಮತ್ತು ಬಜರಂಗದಳವನ್ನು ಬಳಸಿಕೊಳ್ಳುತ್ತಿದೆ ಎಂದು ಮುನೀರ್ ಕಾಟಿಪಳ್ಳ ಆರೋಪಿಸಿದರು. ಕರಾವಳಿ ಭಾಗದ ಜನರು‌ ಇದಕ್ಕೆ ಮರುಳಾಗದೆ ಜಿಲ್ಲೆಯ ಒಗ್ಗಟ್ಟಿನ ಪರಂಪರೆಯನ್ನು ಪಾಲಿಸಬೇಕು ಎಂದು ಮನವಿ ಮಾಡಿದರು.

ಈ ನಡುವೆ ವಿಎಚ್‌ಪಿ ಕರೆಗೆ ಸ್ಪಂದಿಸಿರುವ ಕೆಲವು ವ್ಯಾಪಾರಿಗಳು ತಮ್ಮ ಸ್ಟಾಲ್‌ಗಳ ಮುಂದೆ ಕೇಸರಿ ಧ್ವಜವನ್ನು ಪ್ರದರ್ಶಿಸಿದ್ದಾರೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು