ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ ಸರ್ಕಾರಕ್ಕೆ ಪೂರ್ಣ ಬದ್ಧತೆ ಇದೆ: ಸಿ ಎಂ ಸಿದ್ದರಾಮಯ್ಯ

P

Peepal Media • ರಾಜ್ಯ

• 1 ನಿಮಿಷದ ಓದು

ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ ಸರ್ಕಾರಕ್ಕೆ ಪೂರ್ಣ ಬದ್ಧತೆ ಇದೆ: ಸಿ ಎಂ ಸಿದ್ದರಾಮಯ್ಯ

ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ ಸರ್ಕಾರಕ್ಕೆ ಪೂರ್ಣ ಬದ್ಧತೆ ಇದ್ದು, ಪೂಜ್ಯರ ಬೇಡಿಕೆಗಳಲ್ಲಿ ಸಾಧ್ಯ ಇರುವವಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.‌

ಕಾವೇರಿ ನಿವಾಸದಲ್ಲಿ ತಮ್ಮನ್ನು ಭೇಟಿಯಾದ ಲಿಂಗಾಯತ ಸ್ವಾಮೀಜಿಗಳು, ಸಚಿವರು, ಶಾಸಕರು, ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿದರು.

ಮೊದಲ ಬಾರಿ ಮುಖ್ಯಮಂತ್ರಿ ಆದಾಗ ಬಸವ ಜಯಂತಿಯಂದೇ ಪ್ರಮಾಣವಚನ ಸ್ವೀಕರಿಸಿದೆ. ಬಸವಣ್ಣನವರ ಭಾವಚಿತ್ರ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯಗೊಳಿಸಿದ್ದು ನಮ್ಮದೇ ಕಾಂಗ್ರೆಸ್ ಸರ್ಕಾರ ಎಂದರು.

ಬಸವಣ್ಣನವರ ವಿಚಾರ ಮತ್ತು ಹೋರಾಟ ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಪೂರಕ. ಜಾತಿವಾದಿ ಪಟ್ಟಭದ್ರರಿಗೆ ಬಸವಣ್ಣನವರ ವಿಚಾರಗಳು ಹಿಡಿಸಲ್ಲ.
ಪಟ್ಟಭದ್ರರು ಬಹಿರಂಗವಾಗಿ ಬಸವಣ್ಣನವರನ್ನು ವಿರೋಧಿಸಲು ಸಾಧ್ಯವಿಲ್ಲ. ಅದಕ್ಕೇ ಆಂತರಿಕವಾಗಿ ವಿರೋಧಿಸುತ್ತಿದ್ದಾರೆ ಎಂದರು.

ಜಾತಿ ವ್ಯವಸ್ಥೆ ಬಹಳ ಗಟ್ಟಿಯಾಗಿ ಬೇರೂರಿದೆ. ಇದಕ್ಕೆ ಪಟ್ಟಭದ್ರರು ನೀರು ಗೊಬ್ಬರ ಹಾಕುತ್ತಿದ್ದಾರೆ. ಜಾತ್ಯತೀತ, ಸಮ ಸಮಾಜ ನಿರ್ಮಾಣ ಮಾಡಲು ಬಸವಣ್ಣನವರ ಹೋರಾಟ ಪೂರಕ.
ನಮ್ಮ ಜಾತಿ ವ್ಯವಸ್ಥೆಗೆ ಚಲನೆ ಇಲ್ಲ. ಜಾತಿ ಜಡತ್ವ, ಆರ್ಥಿಕ ಜಡತ್ವ ಇರುವ ಸಮಾಜದಲ್ಲಿ ಚಲನೆ ಸಾಧ್ಯವಿಲ್ಲ. ಬಸವಣ್ಣನವರ ವಿಚಾರಗಳೇ ಅಂಬೇಡ್ಕರ್ ವಿಚಾರಗಳಾಗಿದ್ದು ಇವೆಲ್ಲವೂ ಸಂವಿಧಾನದಲ್ಲಿ ಅಡಕವಾಗಿವೆ ಎಂದರು.

ಗೋರುಚ ಅಧ್ಯಕ್ಷತೆಯಲ್ಲಿ ಅನುಭವ ಮಂಟಪ ಪುನರುಜ್ಜೀವನಕ್ಕೆ ಮುಂದಾಗಿದ್ದು ನಾವು. ಅನುಭವ ಮಂಟಪ ಮೊದಲ ಪ್ರಜಾಪ್ರಭುತ್ವದ ವೇದಿಕೆ. ಯಾರ ಒತ್ತಾಯವೂ ಇಲ್ಲದ ವೇಳೆಯಲ್ಲೇ ನಮ್ಮ ಸರ್ಕಾರ ಅನುಭವ ಮಂಟಪ ಪುನರುಜ್ಜೀವನಕ್ಕೆ ಮುಂದಾಗಿತ್ತು.
ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ಕಾಂಗ್ರೆಸ್ ಸರ್ಕಾರ ಎಂದರು.

ನಿಯೋಗದ ಬೇಡಿಕೆಗಳು..

ನಾಡಿನ ಸಾಂಸ್ಕೃತಿಕ ನಾಯಕ ಎಂದು ಘೋಷಿತರಾಗಿರುವ ವಿಶ್ವಗುರು ಬಸವೇಶ್ವರರ ವಿಚಾರಧಾರೆಯನ್ನು ಪರಿಣಾಮಕಾರಿಯಾಗಿ ಜನಮಾನಸಕ್ಕೆ ತಲುಪಿಸುವ ನಿಟ್ಟಿನಲ್ಲಿ ಈ ವರ್ಷದ ಬಜೆಟ್ ನಲ್ಲಿ ರೂ 100 ಕೋಟಿ ನೀಡುವ ಜೊತೆಗೆ, ಮುಂದಿನ ನಾಲ್ಕು ವರ್ಷಗಳ ಬಜೆಟ್ ನಲ್ಲಿ ತಲಾ 100 ಕೋಟಿಯಂತೆ ಒಟ್ಟು ರೂ 500 ಕೋಟಿ ಅನುದಾನ ನೀಡಬೇಕು.

ಮುಖ್ಯಮಂತ್ರಿ ಭೇಟಿಗೂ ಮುನ್ನ ಈ ಸಂಬಂಧ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರ ರೇಸ್ ಕೋರ್ಸ್ ರಸ್ತೆಯ ಅಧಿಕೃತ ನಿವಾಸದಲ್ಲಿ ಬೆಳಿಗ್ಗೆ ಮಠಾಧೀಶರು, ಸಮುದಾಯದ ಸಚಿವರು, ಶಾಸಕರು ಸಭೆ ನಡೆಸಿದರು. ರಾಜ್ಯದೆಲ್ಲೆಡೆಯಿಂದ ಆಗಮಿಸಿದ್ದ ಸಮುದಾಯದ ಸ್ವಾಮೀಜಿಗಳು, ಶಾಸಕರು, ಮಾಜಿ ಶಾಸಕರು ಹಾಗೂ ಸಂಘ ಸಂಸ್ಥೆಗಳ ಪ್ರಮುಖರು ಸಭೆಯಲ್ಲಿ ಪಾಲ್ಗೊಂಡು ಚರ್ಚಿಸಿದರು. ನಂತರ, ಮುಖ್ಯಮಂತ್ರಿಯವರ ಅಧಿಕೃತ ನಿವಾಸ ‘ಕಾವೇರಿ’ಗೆ ತೆರಳಿ ಮನವಿ ಸಲ್ಲಿಸಿದರು.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version