ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಸ್ ನಿಲ್ದಾಣಗಳಲ್ಲಿ ಅವದಿ ಮೀರಿದ ಆಹಾರ ಪದಾರ್ಥ ವಿತರಣೆ ; ಪರಿಶೀಲಿಸಿ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸರ್ಕಾರ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಬಸ್ ನಿಲ್ದಾಣಗಳಲ್ಲಿ ಅವದಿ ಮೀರಿದ ಆಹಾರ ಪದಾರ್ಥ ವಿತರಣೆ ; ಪರಿಶೀಲಿಸಿ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸರ್ಕಾರ

ರಾಜ್ಯಾದ್ಯಂತ ಇರುವ ಬಸ್‌ ನಿಲ್ದಾಣಗಳಲ್ಲಿನ ವ್ಯಾಪಾರ ಮಳಿಗೆಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥ ಮಾರಾಟ ಮಾಡುತ್ತಿರುವ ದೂರುಗಳ ಹಿನ್ನೆಲೆಯಲ್ಲಿ ಅಂಗಡಿ ಮಾಲೀಕರು ಹಾಗೂ ಮಳಿಗೆಗಳ ನಿರ್ವಾಹಕರಿಗೆ ಸರ್ಕಾರದಿಂದ ಕಾನೂನು ಕ್ರಮದ ಎಚ್ಚರಿಕೆ ನೀಡಲಾಗಿದೆ.

ಸಾರ್ವಜನಿಕರು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಂದ ದೂರುಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ಮುಖ್ಯಮಂತ್ರಿಗಳ ಕಚೇರಿಯಿಂದ ಹೊರಡಿಸಿದ ಮಾಧ್ಯಮ ಪ್ರಕಟಣೆ ಪ್ರಕಾರ, ಬಸ್‌ ನಿಲ್ದಾಣಗಳಲ್ಲಿನ ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ ಮಾಡುವಿಕೆ, ನೈರ್ಮಲ್ಯದ ಕೊರತೆ ಮುಂತಾದ ವಿಷಯಗಳ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ವರದಿಗಳು ಬಿತ್ತರವಾಗಿವೆ. ಇದನ್ನು ಆಧರಿಸಿ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಅಗತ್ಯ ಕ್ರಮ ಕೈಗೊಂಡಿರುತ್ತಾರೆ ಎಂದು ತಿಳಿಸಿದೆ.

ವ್ಯಾಪಾರ ಮಳಿಗೆಗಳು ಹಾಗೂ ಆಹಾರ ಉದ್ದಿಮೆಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕಾಯ್ದೆ 2006 ಮತ್ತು ನಿಯಮಗಳು 2011 ಅನ್ನು ಪಾಲಿಸುತ್ತಿರುವ ಬಗ್ಗೆ ಪರಿಶೀಲನೆ ಮಾಡಲು 2024ರ ಜೂನ್‌ ತಿಂಗಳಲ್ಲಿ ವಿಶೇಷ ಅಭಿಯಾನವನ್ನು ಕೈಗೊಳ್ಳಲಾಗಿರುತ್ತದೆ. ಅದರಂತೆ ರಾಜ್ಯಾದ್ಯಂತ 201 ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ಕಚೇರಿ ಹಾಗೂ ಖಾಸಗಿ ಬಸ್‌ ನಿಲ್ದಾಣಗಳಲ್ಲಿ ಇರುವ 748 ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳನ್ನು ಪರಿಶೀಲನೆ ಮಾಡಲಾಗಿದ್ದು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಮತ್ತು ನಿಯಮಗಳು 2011 ಅನ್ನು ಪಾಲಿಸುವಂತೆ ಅರಿವು ಮೂಡಿಸಲಾಗಿರುತ್ತದೆ ಎಂದು ಸಾರ್ವಜನಿಕ ಕುಂದುಕೊರತೆ ವಿಭಾಗ ತಿಳಿಸಿದೆ.

ಅಷ್ಟೇ ಅಲ್ಲದೆ, ಮುಂದಿನ ದಿನಗಳಲ್ಲಿ ಪುನರ್‌ ಪರಿಶೀಲನೆ ಸಂದರ್ಭದಲ್ಲಿ ಲೋಪದೋಷಗಳನ್ನು ಸರಿಪಡಿಸಿಕೊಳ್ಳದೇ ಇದ್ದಲ್ಲಿ ನಿಯಾಮಾನುಸಾರ ಕಾನೂನು ರೀತಿಯ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಮಾಲೀಕರಿಗೆ ಎಚ್ಚರಿಕೆ ನೀಡಲಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು