ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಯಶಸ್ವಿಗೊಂಡ ವಿಶ್ವ ಕಲಾ ದಿನಾಚರಣೆಯ ಪ್ರಯುಕ್ತ ಚಿತ್ರಕಲಾ ಪ್ರದರ್ಶನ ಮತ್ತು ಚಿತ್ರಕಲಾ ಸ್ಪರ್ದೆ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಯಶಸ್ವಿಗೊಂಡ ವಿಶ್ವ ಕಲಾ ದಿನಾಚರಣೆಯ ಪ್ರಯುಕ್ತ ಚಿತ್ರಕಲಾ ಪ್ರದರ್ಶನ ಮತ್ತು ಚಿತ್ರಕಲಾ ಸ್ಪರ್ದೆ

ಹಾಸನ : ನಗರದ ಹಾಸನಾಂಬ ಕಲಾಕ್ಷೇತ್ರದ ಆವರಣದಲ್ಲಿ ಹೊಯ್ಸಳ ಚಿತ್ರಕಲಾ ಪರಿಷತ್, ಸಂಸ್ಕಾರ ಭಾರತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರದAದು ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ವಿಶ್ವ ಕಲಾ ದಿನಾಚರಣೆಯ ಪ್ರಯುಕ್ತ ಚಿತ್ರಕಲಾ ಪ್ರದರ್ಶನ ಮತ್ತು ಚಿತ್ರಕಲಾ ಸ್ಪರ್ದೆಯನ್ನು ಅಂತರಾಷ್ಟಿçÃಯ ಕಲಾವಿದ ಕೆ.ಟಿ. ಶಿವಪ್ರಸಾದ್ ಗಿಡಕ್ಕೆ ನೀರು ಹಾಕುವುದರ ಮೂಲಕ ಉದ್ಘಾಟಿಸಿದರುನಂತರ ಉದ್ದೇಶಿಸಿ ಮಾತನಾಡಿದ ಅವರು, ಪ್ರಕೃತಿಯ ಮಧ್ಯೆ ಇದ್ದರೇ ಕಲಾವಿದನಿಗೆ ತನ್ನದೆಯಾದ ಭಾವನೆಗಳು ಉಂಟಾಗಿ ಅದು ಚಿತ್ರದ ಮೂಲಕ ಹೊರ ಹಾಕುತ್ತದೆ. ಒಬ್ಬ ಕಲಾವಿದನಿಗೆ ಗಿಡ, ಮರಗಳು ಪ್ರೇರಣೆ ನೀಡುತ್ತದೆ. ಕಲಾಭವನ ನೋಡಿದರೇ ಸುತ್ತ ಮರಗಳು ಕಾಣುತ್ತಿದೆ. ಇದೆಲ್ಲಾ ನೋಡಿದರೇ ಮನಸ್ಸಿಗೆ ಆನಂದ ಉಂಟಾಗುತ್ತದೆ ಎಂದರು.


ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯದರ್ಶಿ ಬೊಮ್ಮೇಗೌಡ ಮಾತನಾಡಿ, ಮಕ್ಕಳಿಗೆ ಕಲೆ ಬಗ್ಗೆ ತಿಳಿಸಿಕೊಡುವ ನಿಟ್ಟಿನಲ್ಲಿ ಚಿತ್ರಕಲೆಯನ್ನು ಆಯೋಜನೆ ಮಾಡಲಾಗಿದೆ. ತೇಜಸ್ವಿಯವರು ಹೆಚ್ಚು ಪರಿಸರವನ್ನು ಇಷ್ಟು ಪಡುತ್ತಿದ್ದರು. ಅಂತಹ ಪುಣ್ಯ ಪರುಷರ ಜೊತೆ ಶಿವಪ್ರಸಾದ್ ಅವರು ಒಡನಾಟ ಇಟ್ಟುಕೊಂಡಿದ್ದಾರೆ ಎಂದರು. ಯಾವುದೆ ಮಹತ್ವದ ದಿನ ಇದ್ದರೇ ಅದನ್ನ ಕಿರಿಯರಿಗೆ ಹೇಳಿಕೊಡುತ್ತಾ ಹೋಗಬೇಕು. ಹಿಂದಿನವರು ಮಾಡುತ್ತಿದ್ದ ಹಲವಾರು ಆಚರಣೆಗಳು ಕಣ್ಮರೆ ಆಗುತ್ತಿದೆ. ಈಗ ಮೊಬೈಲ್ ಯುಗ ಆಗಿರುವುದರಿಂದ ಮೊಬೈಲ್ಗೆ ಮೊರೆ ಹೋಗುತ್ತಿದ್ದೇವೆ. ಮುಂದಿನ ದಿನಗಳನ್ನು ನೆನಪಿಸಿಕೊಂಡರೇ ಭಯವಾಗುತ್ತದೆ. ನಾವು ಬೆಳೆದ ರೀತಿಯಲ್ಲಿ ಮಕ್ಕಳು ಬೆಳೆಯುತ್ತಿಲ್ಲ. ನಮ್ಮ ತಂದೆತಾಯಿ ರೀತಿಯಲ್ಲಿ ನಾವು ಬೆಳೆದಿಲ್ಲ. ದಿನದಿಂದ ದಿನಕ್ಕೆ ಹೊಸ ಹೊಸ ತಂತ್ರ ಜ್ಞಾನ ಮುಂದುವರೆಯುತ್ತಿದೆ. ಇದರಿಂದ ಮಾನವಿಯ ಮೌಲ್ಯಗಳು ಮರೆಯಾಗುತ್ತದೆಯೂ ಎಂಬುದು ಒಂದು ಆತಂಕದ ಸನ್ನಿವೇಶವಾಗಿದೆ ಎಂದು ಬೇಸರವ್ಯಕ್ತಪಡಿಸಿದರು. ಪೋಷಕರು ತಮ್ಮ ಮಕ್ಕಳಿಗೆ ಹೆಚ್ಚು ಮೊಬೈಲ್ ಗೆ ಮಾರು ಹೋಗದಂತೆ ಇಂತಹ ಚಿತ್ರಕಲೆ ಸೇರಿದಂತೆ ಎಲ್ಲಾ ಕಲೆ ಬಗ್ಗೆ ಮೈಗೂಡಿಸುವಂತಹ ಕೆಲಸವನ್ನು ಬಾಲ್ಯದಿಂದಲೇ ಮಾಡಬೇಕು ಎಂದು ಕಿವಿಮಾತು ಹೇಳಿದರು. ಪ್ರಾರಂಭದಲ್ಲಿ ಇಂತಹ ಕಲೆಗೆ ಪೋಷಕರು ತಮ್ಮ ಮಕ್ಕಳನ್ನು ಬಿಡುತ್ತಾರೆ. ನಂತರದಲ್ಲಿ ಮಕ್ಕಳನ್ನು ಅಂಕಗಳಿಸುವ ರೇಸಿಗೆ ಕಳುಹಿಸುತ್ತಿದ್ದು, ದಯಮಾಡಿ ಅಂತಹ ಕೆಲಸವನ್ನು ಮಾಡಬೇಡಿ ಎಂದು ಸಲಹೆ ನೀಡಿದರು. ಮಕ್ಕಳಿಗೆ ಯಾವುದರಲ್ಲಿ ಆಸಕ್ತಿ ಇದೆ ಅದರಲ್ಲಿಯೇ ಹೆಚ್ಚೆಚ್ಚು ತೊಡಗಿಸಿಕೊಳ್ಳಲು ಅವಕಾಶ ನೀಡಿ ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಚನ್ನರಾಯಪಟ್ಟಣದ ಚಿತ್ರಕಲಾವಿದ ಹೆಚ್.ಎಸ್. ಮಂಜುನಾಥ್ ಸ್ಥಳದಲ್ಲಿಯೇ ಚಿತ್ರ ಬರೆಯುವುದರ ಮೂಲಕ ಪ್ರಾತ್ಯಕ್ಷಿಕೆ ಪ್ರದರ್ಶಿಸಿದರು. ನಂತರ ಚಿತ್ರಕಲಾ ಸ್ಪರ್ದೆಯಲ್ಲಿ ಭಾಗವಹಿಸಿದ ಶಾಲಾ ಮಕ್ಕಳಲ್ಲಿ ಅತ್ಯುತ್ತಮವಾಗಿ ಚಿತ್ರ ಬರೆದ ಮಕ್ಕಳಿಗೆ ಇದೆ ವೇಳೆ ಆಕರ್ಷಕ ಬಹುಮಾನ ವಿತರಣೆ ಮಾಡಿದರು.

ವಿಷಯಗಳು: #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು