ಶಾಸನಗಳ ಅಧ್ಯಯನಕ್ಕೆ ಶ್ರೀನಿವಾಸ್ ವೈ.ಸಿ.ಗೆ ಪಿಎಚ್ಡಿ ಪದವಿ
ಲಿಂಕ್ ನಕಲಿಸಲಾಗಿದೆ ✓
ಬೆಂಗಳೂರು: ಕನ್ನಡ ಸಾಹಿತ್ಯ ಮತ್ತು ಶಾಸನ ಅಧ್ಯಯನ ಕ್ಷೇತ್ರದಲ್ಲಿ ಸಂಶೋಧನೆ ನಡೆಸಿರುವ ವಿಜಯನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಸಂಶೋಧನಾರ್ಥಿ ಶ್ರೀನಿವಾಸ್ ವೈ.ಸಿ. ಅವರು ಪಿಎಚ್ಡಿ ಪದವಿಗೆ ಭಾಜನರಾಗಿದ್ದಾರೆ.
ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯವು ಕನ್ನಡ ವಿಷಯದಲ್ಲಿ ಅವರಿಗೆ ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ. ನಿವೃತ್ತ ಪ್ರಾಧ್ಯಾಪಕಿ ಡಾ. ಎನ್.ಆರ್. ಲಲಿತಾಂಬಾ ಅವರ ಮಾರ್ಗದರ್ಶನದಲ್ಲಿ ಅವರು ಸಂಶೋಧನೆ ಕೈಗೊಂಡಿದ್ದರು.
‘ಚಿಕ್ಕಬಳ್ಳಾಪುರ ಜಿಲ್ಲೆಯ ಶಾಸನಗಳಲ್ಲಿ ಗ್ರಾಮಾಭಿವೃದ್ಧಿ ಮತ್ತು ನಗರೀಕರಣ: ಬಹುಮುಖಿ ನೆಲೆಗಳ ಅಧ್ಯಯನ’ ಎಂಬ ವಿಷಯದ ಕುರಿತು ಅವರು ಸಿದ್ಧಪಡಿಸಿದ ಸಂಶೋಧನಾ ಪ್ರಬಂಧವನ್ನು ವಿಶ್ವವಿದ್ಯಾನಿಲಯವು ಅಂಗೀಕರಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಾಸನಗಳ ಮೂಲಕ ಗ್ರಾಮೀಣ ಅಭಿವೃದ್ಧಿ ಹಾಗೂ ನಗರೀಕರಣದ ವಿವಿಧ ಆಯಾಮಗಳನ್ನು ಅಧ್ಯಯನ ಮಾಡಿರುವುದು ಈ ಸಂಶೋಧನೆಯ ಪ್ರಮುಖ ಅಂಶವಾಗಿದೆ.
P
Peepal Media Desk
Peepal Media · ರಾಜ್ಯ ವಿಭಾಗ
ಹಿಂದಿನ ಸುದ್ದಿ