ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಯಾವ ಸರ್ಕಾರವಿದ್ದರೂ ಫೋನ್‌ ಟ್ಯಾಪಿಂಗ್‌ ಮಾಡುವುದು ಮಾಮೂಲಿ: ಸಚಿವ ಕುಮಾರಸ್ವಾಮಿ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಯಾವ ಸರ್ಕಾರವಿದ್ದರೂ ಫೋನ್‌ ಟ್ಯಾಪಿಂಗ್‌ ಮಾಡುವುದು ಮಾಮೂಲಿ: ಸಚಿವ ಕುಮಾರಸ್ವಾಮಿ
the news minut

ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಫೋನ್ ಕದ್ದಾಲಿಕೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೌನ ಮತ್ತು ಸಮರ್ಥನೆಯನ್ನು ಲೇವಡಿ ಮಾಡಿದರು. “ನಾನು ಈ ಕೆಲಸ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿಗಳು ವಾದಿಸಬಹುದು, ಆದರೆ ಅವರ ಅಧೀನದಲ್ಲಿರುವ ಗುಪ್ತಚರ ಇಲಾಖೆಯ ಅಧಿಕಾರಿಗಳು ಈ ಕಾರ್ಯದಲ್ಲಿ ತೊಡಗಿರಬಹುದು. ಸತ್ಯ ಹೇಳಿದಾಗ ಸಿದ್ದರಾಮಯ್ಯ ಅವರಿಗೆ ಯಾಕೆ ಅಷ್ಟೊಂದು ಅಸಹನೆ?” ಎಂದು ವ್ಯಂಗ್ಯವಾಡಿದರು.

ತಾವೂ ಕೂಡ ಎರಡು ಬಾರಿ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದ ಅನುಭವ ಹೊಂದಿದ್ದು, ಭದ್ರತಾ ದೃಷ್ಟಿಯಿಂದ ಅಥವಾ ಪ್ರಕರಣಗಳ ಮಾಹಿತಿ ಸಂಗ್ರಹಕ್ಕಾಗಿ ಅಧಿಕಾರಿಗಳು ಅನುಮತಿ ಪಡೆದು ಫೋನ್ ಟ್ಯಾಪಿಂಗ್ ಮಾಡುವುದು ಗುಪ್ತಚರ ವ್ಯವಸ್ಥೆಯಲ್ಲಿ ಸಾಮಾನ್ಯ ಎಂದು ಪ್ರತಿಪಾದಿಸಿದರು.

ಇದೇ ಸಂದರ್ಭದಲ್ಲಿ ಎಚ್.ಡಿ. ದೇವೇಗೌಡರ ಕುರಿತಾದ ಟೀಕೆಗಳಿಗೆ ತಿರುಗೇಟು ನೀಡಿದ ಅವರು, “ದೇವೇಗೌಡರು ಅಧಿಕಾರಕ್ಕಾಗಿ ಎಂದೂ ತಮ್ಮ ಸ್ವಯಂ ಗೌರವವನ್ನು ಅಡವಿಟ್ಟವರಲ್ಲ. ಫೋನ್ ಕದ್ದಾಲಿಕೆ ಆರೋಪದ ಮೇಲೆ ಅವರು ಅಧಿಕಾರ ತ್ಯಜಿಸಿದವರೂ ಅಲ್ಲ. ಕಾಂಗ್ರೆಸ್ ಪಕ್ಷದ ಆಂತರಿಕ ರಾಜಕೀಯ ಮತ್ತು ಅಧ್ಯಕ್ಷರ ಚುನಾವಣಾ ಸಮಯದಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ಸಿದ್ದರಾಮಯ್ಯ ಅವರು ಸರಿಯಾಗಿ ತಿಳಿದುಕೊಳ್ಳಲಿ. ದೇವೇಗೌಡರ ನೈತಿಕತೆಯ ಬಗ್ಗೆ ಮಾತನಾಡುವ ಹಕ್ಕು ಸಿಎಂಗೆ ಇಲ್ಲ” ಎಂದು ಗುಡುಗಿದರು.

ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುವುದು ವಿರೋಧ ಪಕ್ಷವಾಗಿ ನಮ್ಮ ಕರ್ತವ್ಯವೇ ಹೊರತು, ಇದರಲ್ಲಿ ಯಾವುದೇ ಅಸೂಯೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಗಾಳಿಯಲ್ಲಿ ಗುಂಡು ಹಾರಿಸಬೇಡಿ: ಕುಮಾರಸ್ವಾಮಿಗೆ ಪರಮೇಶ್ವರ್ ಪ್ರತಿ ಸವಾಲು

ಕೇಂದ್ರ ಸಚಿವರ ಈ ಗಂಭೀರ ಆರೋಪಗಳಿಗೆ ಪ್ರತ್ಯುತ್ತರ ನೀಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಕುಮಾರಸ್ವಾಮಿ ಅವರು ಆಧಾರರಹಿತ ಮಾತುಗಳನ್ನು ಆಡಬಾರದು ಎಂದು ಎಚ್ಚರಿಸಿದರು. “ಯಾರ ಫೋನ್ ಕದ್ದಾಲಿಕೆ ಆಗುತ್ತಿದೆ ಎಂಬುದನ್ನು ಸಾಕ್ಷಿ ಸಮೇತ ಅಥವಾ ನಿಖರವಾದ ಹೆಸರುಗಳೊಂದಿಗೆ ಬಹಿರಂಗಪಡಿಸಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಜನರನ್ನು ದಾರಿ ತಪ್ಪಿಸುವುದು ಬೇಡ. ರಾಜ್ಯದಲ್ಲಿ ಯಾವುದೇ ವ್ಯಕ್ತಿಯ ಅಥವಾ ರಾಜಕಾರಣಿಯ ಫೋನ್ ಕದ್ದಾಲಿಕೆ ನಡೆಯುತ್ತಿಲ್ಲ ಎಂದು ಸ್ವತಃ ಮುಖ್ಯಮಂತ್ರಿಗಳೇ ಸ್ಪಷ್ಟಪಡಿಸಿದ್ದಾರೆ” ಎಂದು ಅವರು ತಿಳಿಸಿದರು. ಮಾಹಿತಿಯ ಕೊರತೆಯಿಂದ ಕುಮಾರಸ್ವಾಮಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಪರಮೇಶ್ವರ್ ಆರೋಪಿಸಿದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು