ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಶಕ್ತಿ ಯೋಜನೆ ಪ್ರಶ್ನಿಸಿ ಅರ್ಜಿ:‌ ಅರ್ಜಿದಾರರಿಗೆ ಮಂಗಳಾರತಿ ಮಾಡಿದ ಹೈಕೋರ್ಟ್

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಶಕ್ತಿ ಯೋಜನೆ ಪ್ರಶ್ನಿಸಿ ಅರ್ಜಿ:‌ ಅರ್ಜಿದಾರರಿಗೆ ಮಂಗಳಾರತಿ ಮಾಡಿದ ಹೈಕೋರ್ಟ್

ಬೆಂಗಳೂರು:  ರಾಜ್ಯದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಸೌಲಭ್ಯ ಒದಗಿಸುವ ‘ಶಕ್ತಿ’ ಯೋಜನೆಯಿಂದ ಹಲವು ಸಮಸ್ಯೆಗಳು ಸೃಷ್ಟಿಯಾಗಿದೆ ಎಂದು ಆಕ್ಷೇಪಿಸಿ ಅರ್ಜಿ ಸಲ್ಲಿಸಿದ್ದ ಕಾನೂನು ವಿದ್ಯಾರ್ಥಿಗಳ ಬಗ್ಗೆ ಹೈಕೋರ್ಟ್‌ ಗುರುವಾರ ಅಸಮಾಧಾನ ವ್ಯಕ್ತಪಡಿಸಿದೆ.

ಬೆಂಗಳೂರಿನ ವಿವಿಧ ಕಾನೂನು ಕಾಲೇಜುಗಳ ಕಾನೂನು ವಿದ್ಯಾರ್ಥಿಗಳಾದ ಅಶ್ವಿನ್‌ ಶಂಕರ್‌ ಭಟ್‌, ನೇಹಾ ವೆಂಕಟೇಶ್‌ ಹಾಗೂ ಯಾಶಿಕಾ ಸರವಣ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ವಿಚಾರಣೆಗೆ ಕೈಗೆತ್ತಿಕೊಂಡಿತ್ತು.

ಕೆಲ ಕಾಲ ಅರ್ಜಿದಾರರ ವಾದ ಆಲಿಸಿದ ನಂತರ ಪ್ರತಿಕ್ರಿಯಿಸಿದ ನ್ಯಾಯಪೀಠ, “ಶಕ್ತಿ ಯೋಜನೆ ಜಾರಿಯಾದ ನಂತರ ಬಸ್‌ಗಳಲ್ಲಿ ದಟ್ಟಣೆ ಉಂಟಾಗಿದೆ ಎಂದು ಅರ್ಜಿದಾರರು ಹೇಳಿದ್ದಾರೆ, ಹಾಗಾದರೆ, ಯೋಜನೆ ಜಾರಿಯಾಗುವ ಮುನ್ನ ಬಸ್‌ಗಳಲ್ಲಿ ಪ್ರಯಾಣಿಕರ ದಟ್ಟಣೆ ಇರಲಿಲ್ಲವೇ, ಯೋಜನೆಯಿಂದಾಗಿಯೇ ಬಸ್‌ಗಳಲ್ಲಿ ದಟ್ಟಣೆ ಉಂಟಾಗಿದೆಯೇ, ಯಾವ ಮಾರ್ಗದಲ್ಲಿ ಪ್ರಯಾಣಿಕರ ದಟ್ಟಣೆ ಇದೆ, ಸರ್ಕಾರಿ ಬಸ್‌ಗಳಲ್ಲಿ ಇಷ್ಟೇ ಜನರಿರಬೇಕೆಂಬ ನಿಯಮ ಇದೆಯೇ, ಮೊದಲು ಸಂಚಾರ ಸುಗಮವಾಗಿತ್ತೆ” ಎಂದು ಖಾರವಾಗಿ ಪ್ರಶ್ನಿಸಿತು.

ʼಅರ್ಜಿ ಸಲ್ಲಿಸುವ ಮುನ್ನ ಅರ್ಜಿದಾರರು ಸಮರ್ಪಕ ಅಧ್ಯಯನ ನಡೆಸಿಲ್ಲʼ ಎಂದು ನುಡಿದ ನ್ಯಾಯಪೀಠ, ʼಏಕೆ ಸಾರಿಗೆ ನಿಯಮಗಳನ್ನು ಅಧ್ಯಯನ ನಡೆಸಿಲ್ಲ, ಸರ್ಕಾರ ದುರ್ಬಲ ವರ್ಗಗಳಿಗೆ ಉಚಿತ ಪ್ರಯಾಣದ ಸೌಲಭ್ಯ ನೀಡಿದೆಯಲ್ಲವೇ, ಹಾಗಾದರೆ, ಯೋಜನೆಯನ್ನು ಪ್ರಶ್ನಿಸಲಾಗಿದೆಯೇ? ದಟ್ಟಣೆ ಕುರಿತು ಪರಿಹಾರ ಕೋರಲಾಗಿದೆಯೇ, ಮುಂಬೈ ಲೋಕಲ್‌ ರೈಲುಗಳ ದಟ್ಟಣೆಯ ನಿಮಗೆ ಅರಿವಿದೆಯೇʼ ಎಂದು ಅರ್ಜಿದಾರರನ್ನು ಪ್ರಶ್ನಿಸಿದೆ.

ಸೂಕ್ತ ಅಧ್ಯಯನ ನಡೆಸಿದ ನಂತರ ಅಗತ್ಯ ದಾಖಲೆ ಹಾಗೂ ಸಿದ್ಧತೆಗಳೊಂದಿಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಬಹುದು ಎಂದು ಸಲಹೆ ನೀಡಿದ ನ್ಯಾಯಪೀಠ, ಅರ್ಜಿ ಹಿಂಪಡೆಯಲು ಆರ್ಜಿದಾರರಿಗೆ ಅನುಮತಿ ನೀಡಿ ಆದೇಶಿಸಿತು.

ಫ್ರೀ ಬಸ್ ಯೋಜನೆ ಜಾರಿ ಆದಾಗಿನಿಂದ ವಿದ್ಯಾರ್ಥಿಗಳು ಸೇರಿದಂತೆ ವಯೋವೃದ್ಧರೂ ಸಮಸ್ಯೆಗೀಡಾಗಿದ್ದಾರೆ ಎಂದು ದೂರಿರುವ ಕಾನೂನು ವಿದ್ಯಾರ್ಥಿಗಳು, ಇದಕ್ಕೆ ಪರಿಹಾರಕ್ಕೆ ಆಗ್ರಹಿಸಿದ್ದಾರೆ. ಪ್ರತಿನಿತ್ಯ ಬಸ್‌ಗಳಲ್ಲಿ ನಡೆಯುತ್ತಿರುವ ಗಲಾಟೆಗಳು ಬಸ್ ಪ್ರಯಾಣಿಕರ ನೆಮ್ಮದಿಯನ್ನು ಕೆಡಿಸುತ್ತಿದೆ. ಇದರಿಂದ ಇತರೆ ಪ್ರಯಾಣಿಕರಿಗೆ ತಲೆ ನೋವಾಗಿದೆ. ಶಕ್ತಿ ಯೋಜನೆಯಿಂದ‌ ಪ್ರತಿ ಬಸ್‌ಗಳಲ್ಲಿ ಜನದಟ್ಟಣೆ ಹೆಚ್ಚಾಗಿದೆ. ಸಾರಿಗೆ ಬಸ್‌ಗಳಲ್ಲಿ ಸೀಟಿಗಾಗಿ ಗಲಾಟೆಗಳು ನಡೆಯುತ್ತಿವೆ. ಹಿರಿಯ ನಾಗರಿಕರು, ಮಕ್ಕಳು ಬಸ್ ಹತ್ತಲಾಗದೆ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಪಿಐಎಲ್‌ನಲ್ಲಿ ತಿಳಿಸಲಾಗಿತ್ತು.

ಈ ಯೋಜನೆಗೆ ಒಂದೇ ವಾರದಲ್ಲಿ ತೆರಿಗೆದಾರರ 100 ಕೋಟಿ ಹಣವನ್ನು ಬಳಕೆ ಮಾಡಲಾಗಿದೆ. ಅಂದರೆ ವರ್ಷಕ್ಕೆ 3200ರಿಂದ 3400 ಕೋಟಿ ರೂಪಾಯಿ ಇದಕ್ಕಾಗಿ ನಷ್ಟವಾಗಲಿದೆ. ಅಲ್ಲದೆ, ದೂರದ ಊರಿಗೆ ನಿಂತು ಪ್ರಯಾಣ ಮಾಡಲು ಅವಕಾಶ ಕೊಡಬಾರದು. ಜೊತೆಗೆ ಟಿಕೆಟ್ ಖರೀದಿಸಿದವರಿಗೆ ಶೇ.50ರಷ್ಟು ಸೀಟ್ ಮೀಸಲಿಡಬೇಕು ಎಂದು ಪಿಐಎಲ್‌ನಲ್ಲಿ ಕೋರಲಾಗಿತ್ತು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು