ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪ್ರಧಾನಿ ನರೇಂದ್ರ ಮೋದಿ ಪುಢಾರಿಯ ರೀತಿ ಸುಳ್ಳು ಆರೋಪ ಮಾಡುತ್ತಿದ್ದಾರೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

P

Peepal Media • ರಾಜ್ಯ

• 2 ನಿಮಿಷದ ಓದು

ಪ್ರಧಾನಿ ನರೇಂದ್ರ ಮೋದಿ ಪುಢಾರಿಯ ರೀತಿ ಸುಳ್ಳು ಆರೋಪ ಮಾಡುತ್ತಿದ್ದಾರೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿನ ಯಶಸ್ಸು ಮತ್ತು ಇದರಿಂದಾಗಿ ಏರುಗತಿಯಲ್ಲಿ ಸಾಗುತ್ತಿರುವ ರಾಜ್ಯದ ಆರ್ಥಿಕತೆಯನ್ನು ಕಂಡು ಬೆನ್ನುತಟ್ಟಿ ಪ್ರೊತ್ಸಾಹ ನೀಡಬೇಕಾಗಿದ್ದ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬ ರಾಜಕೀಯ ಪುಡಾರಿಯ ರೀತಿಯಲ್ಲಿ ಸುಳ್ಳು ಆರೋಪಗಳ ಮೂಲಕ ಕರ್ನಾಟಕ ರಾಜ್ಯಕ್ಕೆ ಮತ್ತು ಕನ್ನಡಿಗರಿಗ ಅವಮಾನ ಮಾಡುತ್ತಿರುವುದು ವಿಷಾದನೀಯ ಬೆಳವಣಿಗೆ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು “ಪ್ರಧಾನಿ ನರೇಂದ್ರ ಮೋದಿ ಅವರೇ, ಇಂದು ಕನ್ನಡ ರಾಜ್ಯೋತ್ಸವದ ದಿನ. ““ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ…”” ಎಂದು ಸಾರಿದ ರಾಷ್ಟ್ರಕವಿ ಕುವೆಂಪು ಅವರ ಕಾವ್ಯವನ್ನು ನಾಡಗೀತೆಯಾಗಿ ಸ್ವೀಕರಿಸಿರುವ ಕರ್ನಾಟಕ, ಭಾರತಕ್ಕೆ ತಾಯಿಯ ಸ್ಥಾನವನ್ನು ನೀಡಿದೆ. ಇದೇ ಪ್ರೀತಿ ಮತ್ತು ಬದ್ಧತೆಯಿಂದ ಪ್ರಾಮಾಣಿಕವಾಗಿ ತಮ್ಮ ಬೆವರಗಳಿಕೆಯನ್ನು ತೆರಿಗೆಯಾಗಿ ನೀಡಿ ದೇಶದ ಬೊಕ್ಕಸವನ್ನು ತುಂಬಿದವರು ಕನ್ನಡಿಗರು. ದೇಶದಲ್ಲಿ ಮಹಾರಾಷ್ಟ್ರದ ನಂತರ ಅತ್ಯಂತ ಹೆಚ್ಚು ನೇರ ತೆರಿಗೆ (11.9%) ಪಾವತಿಯಾಗಿರುವುದು ಕರ್ನಾಟಕ ರಾಜ್ಯದಲ್ಲಿ ಎನ್ನುವುದನ್ನು ಭಾರತೀಯ ಸ್ಟೇಟ್ ಬ್ಯಾಂಕ್ ವರದಿ ಒಪ್ಪಿಕೊಂಡಿರುವುದನ್ನು ನೀವು ಗಮನಿಸಿರಬಹುದೆಂದು ಭಾವಿಸಿದ್ದೇನೆ” ಎಂದು ಹೇಳಿದ್ದಾರೆ.

ಎಲ್ಲವನ್ನೂ ಪಕ್ಷ, ರಾಜಕೀಯದ ಹಳದಿ ಕನ್ನಡಕದಿಂದ ನೋಡುವ ಅಭ್ಯಾಸವನ್ನು ಬಿಟ್ಟು ಒಬ್ಬ ಮುತ್ಸದ್ದಿ ರಾಜಕಾರಣಿಯಾಗಿ ಕರ್ನಾಟಕದ ಅಭಿವೃದ್ದಿ ಮಾದರಿಯನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ. ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದಾಗಿ ಬಡವರ ಕೈಗೆ ದುಡ್ಡು ಸಿಕ್ಕಿ ಅದು ಮಾರುಕಟ್ಟೆಗೆ ಹರಿದುಬಂದು ಅದರಿಂದ ತೆರಿಗೆ ಸಂಗ್ರಹವೂ ಹೆಚ್ಚಾಗಿ, ರಾಜ್ಯದ ಆರ್ಥಿಕತೆಗೆ ಬಲ ಬರಲಿದೆ ಎಂದು ಪ್ರಾರಂಭದಿಂದಲೂ ನಾನು ಹೇಳಿಕೊಂಡು ಬಂದಿದ್ದೇನೆ. ಅದು ಇಂದು ನಿಜವಾಗಿದೆ. ಇದಕ್ಕಾಗಿ ಕರ್ನಾಟಕಕ್ಕೆ ನೀವು ಶಹಾಬಾಸ್ ಗಿರಿ ಕೊಡಬೇಕಿತ್ತು, ಆದರೆ ನೀವು ಸುಳ್ಳಿನ ಬಾಣಗಳ ಮೂಲಕ ಕನ್ನಡಿಗರನ್ನು ಅವಮಾನಿಸುತ್ತಿದ್ದೀರಿ. ಇದು ಖಂಡನೀಯ, ಸಹಿಸಲು ಸಾಧ್ಯವಿಲ್ಲ.

ಸನ್ಮಾನ್ಯ ಮೋದಿ ಅವರೇ, ನಮ್ಮ ಸರ್ಕಾರದ ಕಡೆಗೆ ಬೆರಳು ಮಾಡುವ ಮುನ್ನ ಕರ್ನಾಟಕದ ಬಿಜೆಪಿ ಪಕ್ಷದ ವಿನಾಶಕಾರಿ ಇತಿಹಾಸದ ಮೇಲೊಮ್ಮೆ ಕಣ್ಣಾಯಿಸಿ. ನಾವು ಜನರಿಗೆ ನೀಡಿದ್ದ ಪ್ರತಿ ಭರವಸೆಯನ್ನು ಈಡೇರಿಸಿದ್ದೇವೆ – ನಮ್ಮ 5 ಗ್ಯಾರಂಟಿ ಯೋಜನೆಗಳನ್ನು ₹52,000 ಕೋಟಿಗೂ ಅಧಿಕ ಅನುದಾನದಲ್ಲಿ ಅನುಷ್ಠಾನಕ್ಕೆ ಕೊಟ್ಟಿದ್ದೇವೆ, ಇದರ ಜೊತೆಗೆ ನಾಡಿನ ಭವಿಷ್ಯ ರೂಪಿಸಲು ₹52,903 ಕೋಟಿ ಅನುದಾನ ಬಳಸಲಾಗುತ್ತಿದೆ.

ರಾಜ್ಯದಲ್ಲಿ ಅಧಿಕಾರದಲ್ಲಿದ್ದ ನಿಮ್ಮ ಪಕ್ಷದ ಸಾಧನೆ ಏನು? ಏಳು ಕೋಟಿ ಕನ್ನಡಿಗರ ಅಭಿವೃದ್ದಿಗಾಗಿ ವ್ಯಯವಾಗಬೇಕಾಗಿದ್ದ ಜನರ ಬೆವರ ಗಳಿಕೆಯ ತೆರಿಗೆ ಹಣವನ್ನು 40% ಕಮಿಷನ್ ರೂಪದಲ್ಲಿ ತಿಂದು ತೇಗಿದ್ದೇ? ಆದಾಯದ ಮೂಲಗಳನ್ನೆಲ್ಲ ಬರಿದು ಮಾಡಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿಯ ಅಂಚಿಗೆ ತಳ‍್ಳಿದ್ದೇ? ಈ ರೀತಿ ಲೂಟಿ ಮಾಡಿದ್ದ ಹಣದಲ್ಲಿ ನಿಮಗೂ ಪಾಲು ಸಂದಾಯವಾಗಿದೆ ಎಂದು ನಿಮ್ಮ ಪಕ್ಷದ ನಾಯಕರೇ ಮಾಡಿರುವ ಆರೋಪ ನಿಮ್ಮ ಗಮನಕ್ಕೂ ಬಂದಿರಬಹುದಲ್ಲವೇ?ಪ್ರಧಾನಿ ನರೇಂದ್ರ ಮೋದಿಯವರೇ, ನಿಮ್ಮ ನಾಯಕರು ಲೂಟಿ ಮಾಡುತ್ತಿದ್ದ 40% ಕಮಿಷನ್ ಹಣವನ್ನು ನಾವು ನೇರವಾಗಿ ಜನರಿಗೆ ತಲುಪಿಸುತ್ತಿದ್ದೇವೆ ಎಂದಿದ್ದಾರೆ.

ನಾವು ನುಡಿದಂತೆ ನಡೆದಿದ್ದೇವೆ, ನಿಮ್ಮ ಭರವಸೆಗಳೇನಾಯಿತು? ಪ್ರತಿಯೊಬ್ಬನ ಖಾತೆಗೆ ಹದಿನೈದು ಲಕ್ಷ ರೂಪಾಯಿ ಜಮೆ ಆಯಿತೇ? ಕಪ್ಪು ಹಣ ಮಾಯವಾಯಿತೇ? ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಯಾಯಿತೇ? ರೈತರ ಆದಾಯ ದುಪ್ಪಟ್ಟಾಯಿತೇ? ಎಲ್ಲಿದೆ ನಿಮ್ಮ ಸ್ಮಾರ್ಟ್ ಸಿಟಿ? ಎಲ್ಲಿದೆ ನಿಮ್ಮ ಮೇಕ್ ಇನ್ ಇಂಡಿಯಾ? ನಿಮ್ಮ ಸಾಧನೆಗಳಾದರೂ ಏನು? ನಾಡನ್ನು ಸಾಲದ ಕೂಪಕ್ಕೆ ತಳ್ಳಿದ್ದೆ? ಸುಳ್ಳು ಮತ್ತು ಅಪಪ್ರಚಾರದ ಮೂಲಕ ನಿಮ್ಮ ವೈಫಲ್ಯಗಳನ್ನು ಮುಚ್ಚಿಹಾಕಿದ್ದೇ?

ನಿಮ್ಮ ಅತ್ಯಂತ ಪ್ರಮುಖ ಸಾಧನೆ ಭಾರತವನ್ನು ಸಾಲಗಾರ ದೇಶವನ್ನಾಗಿ ಮಾಡಿದ್ದು. ನಿಮ್ಮ ಆಡಳಿತದಲ್ಲಿ 2024-25ರ ಆರ್ಥಿಕ ವರ್ಷದ ಅಂತ್ಯಕ್ಕೆ ದೇಶದ ಸಾಲ ₹185.27 ಲಕ್ಷ ಕೋಟಿಯ ಗಡಿ ಮುಟ್ಟಲಿದೆ ಎಂದು ಅಂದಾಜಿಸಲಾಗಿದೆ. ಇದು ಜಿಡಿಪಿ 56.8% ಆಗಲಿದೆ. ಇದು ನಿಮ್ಮ ದುರಾಡಳಿತ ಮಾತ್ರವಲ್ಲ, ನೀವು ಪ್ರತಿಯೊಬ್ಬ ಭಾರತೀಯನ ಮೇಲೆ ಹೊರಿಸುತ್ತಿರುವ ಸಾಲದ ಹೊರೆಯೂ ಹೌದು.

ಪ್ರಧಾನಿ ನರೇಂದ್ರ ಮೋದಿ ಅವರೇ, ಆಗಾಗ ನೀವು ಸುಳ್ಳು ಸಂಗತಿಗಳನ್ನು ಪೋಣಿಸಿಕೊಂಡು ಕರ್ನಾಟಕ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಾ ಬಂದಿದ್ದೀರಿ. ಈ “ ತೂ ತೂ ಮೈ ಮೈ..” ಚರ್ಚೆಗೆ ತಾರ್ಕಿಕವಾದ ಅಂತ್ಯ ಹಾಡಿ ಬಿಡೋಣ.


ಕಳೆದ ಎರಡು ಲೋಕಸಭಾ ಚುನಾವಣೆಯ ಮುನ್ನ ನಿಮ್ಮ ಪಕ್ಷ ಬಿಡುಗಡೆಗೊಳಿಸಿದ್ದ ಪ್ರಣಾಳಿಕೆಯನ್ನು ಇಟ್ಟುಕೊಂಡು ಒಂದು ಸಾರ್ವಜನಿಕ ಚರ್ಚೆಯನ್ನು ಹಮ್ಮಿಕೊಳ್ಳೋಣ. ಪ್ರಣಾಳಿಕೆಯಲ್ಲಿ ನೀವು ಕೊಟ್ಟಿರುವ ಭರವಸೆಗಳಲ್ಲಿ ಎಷ್ಟನ್ನು ನೀವು ಈಡೇರಿಸಿದ್ದೀರಿ? ಎನ್ನುವುದನ್ನು ಸಾರ್ವಜನಿಕವಾಗಿಯೇ ಚರ್ಚೆ ಮಾಡೋಣ. ದೇಶದ ಪ್ರಜ್ಞಾವಂತ ಜನರೇ ಯಾರದ್ದು ಎಷ್ಟು ಸತ್ಯ? ಎಷ್ಟು ಸುಳ್ಳು? ಎನ್ನುವುದನ್ನು ತೀರ್ಮಾನಿಸಲಿ ಎಂದು ಪ್ರಧಾನಿಯವರನ್ನು ಚರ್ಚೆಗೆ ಆಹ್ವಾನಿಸಿದ್ದಾರೆ.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version