ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದ್ವೇಷ ಭಾಷಣ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ಮಾಹಿತಿ ಸಂಗ್ರಹ ಆರಂಭಿಸಿದ ಪೊಲೀಸರು

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ದ್ವೇಷ ಭಾಷಣ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ಮಾಹಿತಿ ಸಂಗ್ರಹ ಆರಂಭಿಸಿದ ಪೊಲೀಸರು

ಬೆಂಗಳೂರು: ತನ್ನ ದ್ವೇಷ ಭಾಷಣಗಳಿಂದ ಕುಖ್ಯಾತಿ ಗಳಿಸಿರುವ ಬಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಪೊಲೀಸರು ಮಾಹಿತಿ ಸಂಗ್ರಹಿಸಲು ಆರಂಭಿಸಿದ್ದಾರೆಂದು ಮಾಧ್ಯಮಗಳು ವರದಿ ಮಾಡಿವೆ.

ಯುವ ಬ್ರಿಗೇಡ್‌ನ‌ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಬೆಂಗಳೂರು ಸಹಿತ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಖಲಾಗಿರುವ ಎಫ್‌ಐಆರ್‌ಗಳ ಮಾಹಿತಿ ನೀಡುವಂತೆ ರಾಜ್ಯ ಪೊಲೀಸ್‌ ಇಲಾಖೆ ಎಲ್ಲ ಜಿಲ್ಲಾವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದೆ.

ಚಕ್ರವರ್ತಿ ಸೂಲಿಬೆಲೆ ವಿರುದ್ಧ 2022ರಿಂದ 2025ರ ಮೇ 31ರ ವರೆಗೆ ದಾಖಲಾಗಿರುವ ಎಫ್‌ಐಆರ್‌ ಪ್ರತಿ ಮತ್ತು ತೆಗೆದುಕೊಂಡ ಕ್ರಮ ಹಾಗೂ ಪ್ರಸ್ತುತ ಹಂತದ ಮಾಹಿತಿಯನ್ನು ಕನ್ನಡ ಭಾಷೆಯಲ್ಲಿ ಹಾಗೂ ಎಫ್‌ಐಆರ್‌ ಪ್ರತಿಯನ್ನು ssloco@ksp.gov.in ಗೆ ಒದಗಿಸುವಂತೆ ಸೂಚಿಸಲಾಗಿದೆ.

ರಾಜ್ಯದ ಅಲ್ಪಸಂಖ್ಯಾಕರ ಆಯೋಗದ ಅಧ್ಯಕ್ಷರು ಬರೆದಿರುವ ಪತ್ರದ ಪರಿಣಾಮವೇ ಈ ಕ್ರಮ ಎನ್ನಲಾಗಿದೆ. ರಾಜ್ಯ ಸರ್ಕಾರವು ಇತ್ತೀಚೆಗಷ್ಟೇ ಕೋಮು ಹಿಂಸೆ ನಿಗ್ರಹ ಪಡೆಯನ್ನು ಆರಂಭಿಸಿದ್ದು, ಅದು ಇನ್ನೇನು ತನ್ನ ಕೆಲಸ ಆರಂಭಿಸುವುದರಲ್ಲಿದೆ. ಈ ಹಿನ್ನಲೆಯಲ್ಲಿ ಸೂಲಿಬೆಲೆ ವಿರುದ್ಧ ಮಾಹಿತಿ ಸಂಗ್ರಹಿಸುತ್ತಿರುವುದು ಜನರ ಕುತೂಹಲ ಕೆರಳಿಸಿದೆ.

ಕರಾವಳಿ ಜಿಲ್ಲೆಗಳಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಕೋಮು ಗಲಭೆಗಳಿಗೆ ಕೋಮು ದ್ವೇಷದ ಭಾಷಣಗಳೂ ಕಾರಣವಾಗುತ್ತಿದ್ದು, ಹೇಟ್‌ ಸ್ಪೀಚ್‌ ವಿರುದ್ಧ ಕ್ರಮ ಕೈಗೊ‍ಳ್ಳಬೇಕೆಂದು ಪ್ರಜ್ಞಾವಂತರು ಆಗ್ರಹಿಸುತ್ತಲೇ ಇದ್ದರು. ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಕೆಲವು ಪ್ರಕರಣಗಳು ಸರ್ಕಾರ ಕೊನೆಗೂ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗುವಂತೆ ಮಾಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ, “ಸೂಲಿಬೆಲೆ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸಿ ಕಿರುಕುಳ ನೀಡಲು ಮುಂದಾದರೆ ಸುಮ್ಮನಿರುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ. ರಾಷ್ಟ್ರವಿದ್ರೋಹಿ ಮತೀಯ ಶಕ್ತಿಗಳನ್ನು ಓಲೈಸುವ ಸಲುವಾಗಿ ಸದ್ಯ ಕೋಮು ನಿಗ್ರಹ ದಳವನ್ನು ಅಸ್ತಿತ್ವಕ್ಕೆ ತರಲಾಗಿದೆ. ಈಗ ಸೂಲಿಬೆಲೆಯನ್ನು ಗುರಿಯಾಗಿಸಿ ಕೊಂಡು ಕಾರ್ಯಾ ಚರಣೆ ನಡೆಸುತ್ತಿರುವುದು ಬಹಿರಂಗಗೊಂಡಿದೆ” ಎಂದಿದ್ದಾರೆ.


PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು