ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪೊಲೀಸ್ ಕಾನ್ಸ್‌ಟೇಬಲ್ ಪುತ್ರ ಸೇರಿ 6 ಮಂದಿ ಬಂಧನ – ಹೈಡ್ರೋವೀಡ್ ಗಾಂಜಾ ವಶ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಪೊಲೀಸ್ ಕಾನ್ಸ್‌ಟೇಬಲ್ ಪುತ್ರ ಸೇರಿ 6 ಮಂದಿ ಬಂಧನ – ಹೈಡ್ರೋವೀಡ್ ಗಾಂಜಾ ವಶ

ತುಮಕೂರು : ತುಮಕೂರಿನಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಪುತ್ರ ಸೇರಿ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ₹44.30 ಲಕ್ಷ ಮೌಲ್ಯದ ಹೈಡ್ರೋವೀಡ್ ಗಾಂಜಾ, ಗಾಂಜಾ ಸೊಪ್ಪು, ಮಾದಕ ವಸ್ತುಗಳು ಹಾಗೂ ಸಾಗಾಣಿಕೆಗೆ ಬಳಸಲಾಗುತ್ತಿದ್ದ ಫಾರ್ಚೂನರ್ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ ದಾಳಿ

ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದರು. ಕಾರ್ಯಾಚರಣೆಯಲ್ಲಿ ಗಾಂಜಾ ಮಾರಾಟ ಮತ್ತು ಸಾಗಾಣಿಕೆಯಲ್ಲಿ ತೊಡಗಿದ್ದ ಆರು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರು ಯಾರು?

ಬಂಧಿತರನ್ನು ಸತೀಶ್, ಪ್ರಮೋದ್ ಕುಮಾರ್, ದಿಶಾಂತ್, ದರ್ಶನ್, ಅಮೋಘ ನಾಗಭೂಷಣ್ ಹಾಗೂ ಮಂಜುನಾಥ್ ಎಂದು ಗುರುತಿಸಲಾಗಿದೆ. ಇವರಲ್ಲಿ 21 ವರ್ಷದ ದಿಶಾಂತ್ ತುಮಕೂರಿನ ಸಮವಸ್ತ್ರ ಪಡೆಯ ಕಾನ್ಸ್‌ಟೇಬಲ್ ಒಬ್ಬರ ಪುತ್ರನಾಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಉಳಿದ ಆರೋಪಿಗಳಲ್ಲಿ ಕೆಲವರು ಕಾಲೇಜು ವಿದ್ಯಾರ್ಥಿಗಳಾಗಿದ್ದು, ಇನ್ನಷ್ಟು ಪೆಡ್ಲರ್‌ಗಳಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.

ಬೆಂಗಳೂರಿನಿಂದ ಗಾಂಜಾ ಸರಬರಾಜು

ಪ್ರಮುಖ ಆರೋಪಿ ಮಂಜುನಾಥ್ ಬೆಂಗಳೂರಿನ ನಿವಾಸಿಯಾಗಿದ್ದು, ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ತುಮಕೂರಿನಲ್ಲಿ ಹೈಡ್ರೋವೀಡ್ ಗಾಂಜಾ ಮತ್ತು ಇತರೆ ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದ ಎಂಬ ಮಾಹಿತಿ ತನಿಖೆಯಲ್ಲಿ ಬಹಿರಂಗವಾಗಿದೆ.

₹44.30 ಲಕ್ಷ ಮೌಲ್ಯದ ವಸ್ತುಗಳ ವಶ

ಇನ್ಸ್‌ಪೆಕ್ಟರ್ ನಧಾಪ್ ಹಾಗೂ ಪಿಎಸ್‌ಐ ಯೋಗೇಶ್ ನೇತೃತ್ವದ ತಂಡ ಆರೋಪಿಗಳಿಂದ:

  • 1 ಕೆಜಿ 655 ಗ್ರಾಂ ಗಾಂಜಾ ಸೊಪ್ಪು (ಸುಮಾರು ₹2 ಲಕ್ಷ ಮೌಲ್ಯ)
  • ಹೈಡ್ರೋವೀಡ್ ಗಾಂಜಾ (ಸುಮಾರು ₹2.30 ಲಕ್ಷ ಮೌಲ್ಯ)
  • ₹40 ಲಕ್ಷ ಮೌಲ್ಯದ ಫಾರ್ಚೂನರ್ ಕಾರು
  • ಇತರೆ ಮಾದಕ ವಸ್ತುಗಳು ಮತ್ತು ಕೃತ್ಯಕ್ಕೆ ಬಳಸಿದ ಸಾಮಗ್ರಿಗಳನ್ನು ವಶಪಡಿಸಿಕೊಂಡಿದೆ.

ಒಟ್ಟಾರೆ ಸುಮಾರು ₹44.30 ಲಕ್ಷ ಮೌಲ್ಯದ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು