ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪೊಲೀಸರು ತಮ್ಮ ಆರೋಗ್ಯ ಮತ್ತು ಕುಟುಂಬದ ಕಡೆಗೂ ಗಮನ ನೀಡಬೇಕು: ಜಿಲ್ಲಾಧಿಕಾರಿ ಕೆ ಲಕ್ಷ್ಮಿಪ್ರಿಯಾ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಪೊಲೀಸರು ತಮ್ಮ ಆರೋಗ್ಯ ಮತ್ತು ಕುಟುಂಬದ ಕಡೆಗೂ ಗಮನ ನೀಡಬೇಕು: ಜಿಲ್ಲಾಧಿಕಾರಿ ಕೆ ಲಕ್ಷ್ಮಿಪ್ರಿಯಾ

ಕಾರವಾರ, ಡಿ.3: ಪ್ರತೀ ದಿನ ಒತ್ತಡದಲ್ಲಿಯೇ ಕಾರ್ಯನಿರ್ವಹಿಸುವ ಪೊಲೀಸ್ ಸಿಬ್ಬಂದಿಗಳು, ಒತ್ತಡ ನಿವಾರಣೆ ಕ್ರಮಗಳನ್ನು ಅಳವಡಿಸಿಕೊಂಡು, ತಮ್ಮ ಅರೋಗ್ಯ ಮತ್ತು ಕುಟುಂಬದ ಕಡೆಯೂ ಗಮನ ನೀಡಬೇಕು ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಹೇಳಿದರು.

ಅವರು ಮಂಗಳವಾರ, ಕಾರವಾರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಜಿಲ್ಲೆಯಲ್ಲಿ ಯಾವುದೇ ಘಟನೆ ನಡೆದರೂ ಅದನ್ನು ನಿಭಾಯಿಸಲು ಪೊಲೀಸರು ಸದಾ ಸಿದ್ದರಿರುತ್ತಾರೆ, ಈ ಸಂದರ್ಭಗಳಲ್ಲಿ ಹಿರಿಯ ಅಧಿಕಾರಿಗಳು ನೀಡುವ ಆದೇಶಗಳನ್ನು ಯಥಾವತ್ತಾಗಿ ಪಾಲಿಸುವುದು ಅಗತ್ಯವಿದ್ದು, ಹಿರಿಯ ಅಧಿಕಾರಿಗಳು ನೀಡುವ ಎಲ್ಲಾ ಆದೇಶಗಳ ಹಿಂದೆ ಸಕಾರಣಗಳು ಮತ್ತು ಅದರದ್ದೇ ಆದ್ದ ಪ್ರಾಮುಖ್ಯತೆ ಇದ್ದು ಅವುಗಳನ್ನು ಅರ್ಥಮಾಡಿಕೊಂಡು ಕಾರ್ಯನಿರ್ವಹಿಸಬೇಕು. ಸಾರ್ವಜನಿಕರಿಂದ ಹಾಗೂ ಮತ್ತಿತರ ಕಡೆಗಳಿಂದ ಬರುವ ಒತ್ತಡಗಳನ್ನು ಸಮರ್ಥವಾಗಿ ನಿಭಾಯಿಸುವುದನ್ನು ಅರಿಯಬೇಕು ಎಂದರು.

ಪೊಲೀಸು ಸಿಬ್ಬಂದಿಗಳು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಒತ್ತಡ ನಿವಾರಣೆ ಮಾಡಿಕೊಳ್ಳಬಹುದಾಗಿದೆ, ಕೆಲಸದ ಒತ್ತಡದ ನಡುವೆಯೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ತಮ್ಮ ಕುಟುಂಬಕ್ಕಾಗಿ ಸಮಯ ಮೀಸಲಿಟ್ಟು ಕುಟುಂಬದೊಂದಿಗೆ ಬೆರೆಯುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್. ಎಂ ಮಾತನಾಡಿ, ಪೊಲೀಸರಿಗೆ ಕ್ರೀಡಾ ಮನೋಭಾವ ಇದ್ದಲ್ಲಿ ಕರ್ತವ್ಯ ನಿರ್ವಹಣೆಗೆ ನೆರವಾಗಲಿದೆ. ಜಿಲ್ಲೆಯಲ್ಲಿ ಪೊಲೀಸರ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು ಕಳೆದ ಬಾರಿ ವಲಯಮಟ್ಟದ ಕ್ರೀಡಾಕೂಟದಲ್ಲಿ ಜಿಲ್ಲೆಗೆ ಗರಿಷ್ಠ ಪ್ರಶಸ್ತಿಗಳು ಬಂದಿವೆ. ಜಿಲ್ಲೆಯ ಪೊಲೀಸರು ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ, ಇನ್ನೂ ಹೆಚ್ಚಿನ ಸಾಧನೆ ಮಾಡಬೇಕು ಎಂದರು.

ಕಾರವಾರ ನೇವಲ್ ಬೇಸ್ನ ಕಮಾಂಡಿಂಗ್ ಆಫೀಸರ್ ಕ್ಯಾ. ವಿ.ಎಸ್.ಗುರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ, ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್, ಲೋಕಾಯುಕ್ತ ಎಸ್ಪಿ ಕುಮಾರ ಚಂದ್ರ, ಕೈಗಾ ಅಣು ವಿದ್ಯುತ್ ಸ್ಥಾವರದ ಸೈಟ್ ಡೈರೆಕ್ಟರ್ ವಿನೋದ್ ಕುಮಾರ್, ಕೊಂಕಣ ರೈಲ್ವೆಯ ಪ್ರಾದೇಶಿಕ ಮೆನೇಜರ್ ಆಶಾ ಶೆಟ್ಟಿ, ಕೋಸ್ಟ್‌ಗಾರ್ಡ್ ಕಮಾಂಡಿಗ್ ಆಫೀಸರ್ ಕಿರಣ್ ಕುಮಾರ್ ಸಿನ್ಹಾ, ಕದ್ರಾದ ಅಧೀಕ್ಷಕ ಇಂಜಿನಿಯರ್ ಶ್ರೀಧರ್ ಕೋರಿ, ಕೈಗಾ ಸಿ.ಐ.ಎಸ್.ಎಫ್.ನ ಸೀನಿಯರ್ ಕಮಾಂಡೆಂಟ್ ಅಜಯ್ ಕುಮಾರ್ ಝಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು