ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹಿಂದುತ್ವ ಕಾರ್ಯಕರ್ತ ಪುನೀತ್‌ ಕೆರೆಹಳ್ಳಿ ವಿರುದ್ಧ ಮತ್ತೊಂದು ಕೇಸ್

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಹಿಂದುತ್ವ ಕಾರ್ಯಕರ್ತ ಪುನೀತ್‌ ಕೆರೆಹಳ್ಳಿ ವಿರುದ್ಧ ಮತ್ತೊಂದು ಕೇಸ್

ಬೆಂಗಳೂರು: ಹಿಂದುತ್ವ ಕಾರ್ಯಕರ್ತಹಾಗೂ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿರುವ ಪುನೀತ್‌ ಕೆರೆಹಳ್ಳಿ ವಿರುದ್ಧ ಇನ್ನೊಂದು ಪ್ರಕರಣ ದಾಖಲಾಗಿದೆ.

ಪುನೀತ್‌ ಕೆರೆಹಳ್ಳಿ ವಿರುದ್ಧ ಅಶ್ಲೀಲ ಪದಬಳಕೆ ಮಾಡಿ ನಿಂದಿಸಿದ್ದಕ್ಕಾಗಿ ತುಮಕೂರಿನ ಹೆಬ್ಬೂರು ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಮತ್ತು ಅಸಾಂವಿಧಾನಿಕ ಪದ ಬಳಸುವುದರಲ್ಲಿ ಕುಖ್ಯಾತಿ ಪಡೆದಿರುವ ಪುನೀತ್‌ ಕಾಂಗ್ರೆಸ್‌ ನಾಯಕರ ವಿರುದ್ಧ ನಾಲಗೆ ಹರಿಬಿಟ್ಟ ಕಾರಣಕ್ಕಾಗಿ ಈಗ ಪ್ರಕರಣ ದಾಖಲಿಸಲಾಗಿದೆ.

ತೇಜಸ್‌ ಗೌಡ ಎನ್ನುವವರು ನೀಡಿರುವ ದೂರಿನಲ್ಲಿ ”ಪುನೀತ್ ಕೆರೆಹಳ್ಳಿ ಎಂಬ ವ್ಯಕ್ತಿಯು ವಕೀಲರು ಮತ್ತು ಕೆಪಿಸಿಸಿ ವಕ್ತಾರರಾಗಿರುವ ಸೂರ್ಯ ಮುಕುಂದರಾಜ್ ಅವರನ್ನು ಮತ್ತು ಅವರ ಸಹೋದ್ಯೋಗಿಗಳ ಬಗ್ಗೆ ಅವಹೇಳನಕಾರಿಯಾಗಿ, ಅವಾಚ್ಯ ಪದಗಳನ್ನು ಬಳಸಿ ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದಾನೆ. ಪುನೀತ್ ಕೆರೆಹಳ್ಳಿಯ ಬೆಂಬಲಿಗರು ನಕಲಿ ಖಾತೆಗಳ ಮೂಲಕ ಬಂದು ಈ ಪೋಸ್‌ಗೆ ಕೆಟ್ಟದ್ದಾಗಿ ಕಮೆಂಟ್ ಮಾಡಿರುತ್ತಾರೆ. ಪುನೀತ್ ಕೆರೆಹಳ್ಳಿಯು ವಕೀಲಿ ವೃತ್ತಿಗೆ ಅವಮಾನ ಮಾಡಿದ್ದಾನೆ. ಆದ್ದರಿಂದ ಆತನ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು” ಎಂದು ಮನವಿ ಮಾಡಿದ್ದಾರೆ. ಜೊತೆಗೆ ಆತನ ಫೇಸ್ಬುಕ್‌ ಖಾತೆಯನ್ನು ಸ್ಥಗಿತಗೊಳಿಸುವುದುರ ಮೂಲಕ ನಮಗೆ ನ್ಯಾಯ ಒದಗಿಸಬೇಕು ಎಂದು ದೂರಿನಲ್ಲಿ ಕೇಳಿಕೊಳ್ಳಲಾಗಿದೆ.

ಸದರಿ ದೂರನ್ನಾಧರಿಸಿ ಪೊಲೀಸರು ಪುನೀತ್‌ ಕೆರೆಹಳ್ಳಿ ವಿರುದ್ಧ ಐಪಿಸಿ ಸೆಕ್ಷನ್ 504ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈಗಾಗಲೇ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿರುವ ಪುನೀತ್‌ ಜಾಮೀನಿನ ಮೇಲೆ ಹೊರಗಿದ್ದು, ಇತ್ತೀಚೆಗಷ್ಟೇ ಸರ್ಕಾರವು ಈತನ ವಿರುದ್ಧ ರೌಡಿ ಶೀಟ್‌ ತಯಾರಿ ಬಂಧಿಸಿತ್ತು. ಆದರೆ ಪುನೀತ್‌ ಸರ್ಕಾರದ ವಿರುದ್ಧ ಕೋರ್ಟಿಗೆ ಹೋಗಿ ಅದನ್ನು ರದ್ದುಪಡಿಸುವಂತೆ ಆದೇಶ ತಂದಿದ್ದನು. ರಾಮನಗರದಲ್ಲಿ ಇದ್ರಿಷ್‌ ಪಾಶಾ ಎಂಬುವವರ ಕೊಲೆ ಪ್ರಕರಣದಲ್ಲಿಯೂ ಈತ ಆರೋಪಿಯಾಗಿದ್ದಾನೆ

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು