ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸ್ಲಂ ಜನರ ಸಮಸ್ಯೆಗಳಿಗೆ ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಆದ್ಯತೆ ನೀಡಬೇಕು : ಎ.ನರಸಿಂಹಮೂರ್ತಿ 

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಸ್ಲಂ ಜನರ ಸಮಸ್ಯೆಗಳಿಗೆ ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಆದ್ಯತೆ ನೀಡಬೇಕು : ಎ.ನರಸಿಂಹಮೂರ್ತಿ 

ಪ್ರೆಸ್ ಕ್ಲಬ್‌ನಲ್ಲಿ ಇಂದು ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆಯು ಪತ್ರಿಕಾಗೋಷ್ಠಿ ನಡೆಸಿ ರಾಜ್ಯದ ಸ್ಲಂ ನಿವಾಸಿಗಳ ನಿರೀಕ್ಷೆಗಳಿಗೆ ಸಂಬಂಧಿಸಿದಂತೆ 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ “ಸ್ಲಂ ನಿವಾಸಿಗಳ ಪ್ರಣಾಳಿಕೆ” ಬಿಡುಗಡೆಯನ್ನು ಮಾಡಲಾಯಿತು.

ರಾಜ್ಯದ ಸ್ಲಂ‌ ನಿವಾಸಿಗಳ ನಿರೀಕ್ಷೆಗಳನ್ನು ರಾಜಕೀಯ ಪಕ್ಷಗಳು  ತಮ್ಮ ಪ್ರಣಾಳಿಕೆಯಲ್ಲಿ ಆದ್ಯತೆ ಮೇರೆಗೆ ಸೇರ್ಪಡೆ ಮಾಡಿಕೊಳ್ಳುವಂತೆ ರಾಜ್ಯ ಸಂಚಾಲಕರಾದ ಎ.ನರಸಿಂಹಮೂರ್ತಿ ಮನವಿ‌ಮಾಡಿದರು.

ರಾಜ್ಯದ ಸ್ಲಂ‌ ನಿವಾಸಿಗಳ ನಿರೀಕ್ಷೆಗಳು : 

೧. ಕೊಳಗೇರಿ ಮತ್ತು ಸ್ಲಂ ನಿವಾಸಿಗಳ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯವನ್ನು ಘೋಷಿಸಬೇಕು.

೨. ಸ್ಲಂ ಜನರ ಅಭಿವೃದ್ಧಿ ನಿಗಮ ಸ್ಥಾಪನೆಯಾಗಬೇಕು.

೩. ಸ್ಲಂ ನಿವಾಸಿಗಳಿಗೆ ನಗರ ಉದ್ಯೋಗ ಖಾತ್ರಿ ಯೋಜನೆ ಜಾರಿ ಮಾಡಬೇಕು.

೪. ರಾಜ್ಯದಲ್ಲಿ ವಸತಿ ಹಕ್ಕು ಕಾಯಿದೆ ಜಾರಿಯಾಗಬೇಕು.

೫. ರಾಜ್ಯದ 3.36 ಲಕ್ಷ ಸ್ಲಂ ಕುಟುಂಬಗಳಿಗೆ ಹಕ್ಕುಪತ್ರವನ್ನು ಕ್ರಯ ಮಾಡುವ ಮೂಲಕ ಭೂ ಮಾಲೀಕತ್ವ ನೀಡಬೇಕು.

೬. ಸ್ಲಂ ಜನರಿಗೆ ಉಚಿತವಾಗಿ ಮನೆ ‌ನಿರ್ಮಾಣ, ಸಬ್ಸಿಡಿ ಹೆಚ್ಚಳ ಮತ್ತು ಜನರೇ ನಿರ್ಮಿಸಿಕೊಳ್ಳುವಂತಹ ಯೋಜನೆಗಳು ಜಾರಿಯಾಗಬೇಕು.

೭. ರಾಜ್ಯದಲ್ಲಿರುವ ಖಾಸಗಿ ಮಾಲೀಕತ್ವದ ಕೊಳಚೆ ಪ್ರದೇಶಗಳಿಗೆ ಹಕ್ಕುಪತ್ರ ನೀಡಬೇಕು.

೮. ನಗರ ಲ್ಯಾಂಡ್ ಬ್ಯಾಂಕ್ ನೀತಿ ಜಾರಿಯಾಗಬೇಕು ಮತ್ತು ನೆಲಬಾಡಿಗೆ ಸ್ಲಂಗಳಿಗೆ ನೀತಿ ರೂಪಿಸಬೇಕು.

೯. ರಾಜ್ಯದಲ್ಲಿ ಸಾರ್ವಜನಿಕ ಪಡಿತರ ವ್ಯವಸ್ಥೆಯನ್ನು ಬಲಗೊಳಿಸಬೇಕು.

೧೦. ಸರ್ಕಾರಿ ಶಾಲೆಗಳ ಸಬಲೀಕರಣವಾಗಬೇಕು ಮತ್ತು ಜಿಲ್ಲಾ ಆಸ್ಪತ್ರೆಗಳ ಖಾಸಗೀಕರಣ ನಿಲ್ಲಬೇಕು.

೧೧. ಕರ್ನಾಟಕ ಸಮಗ್ರ ಸ್ಲಂ ಅಭಿವೃದ್ಧಿ ಕಾಯಿದೆ 2018ರ ಕರಡನ್ನು ಜಾರಿ‌ ಮಾಡಬೇಕು.

೧೨. ನಗರ ಬಡತನದ ಪ್ರಮಾಣವನ್ನು ಇಳಿಕೆ ಮಾಡಬೇಕು.

ಒಟ್ಟು 12 ಅಂಶಗಳನ್ನು ಆಯಾ ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಆದ್ಯತೆ ನೀಡುವ ಮೂಲಕ ಸ್ಲಂ ಜನರ ಸಮಸ್ಯೆಗಳಿಗೆ ಪರಿಹಾರ ನೀಡಬೇಕೆಂದು ನರಸಿಂಹಮೂರ್ತಿ ಮನವಿ ಮಾಡಿದರು.

ವಿಷಯಗಳು: #india #kannada #karnataka #peepal #peepalmedia
PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು