ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮುಂದಿನ ಮೂರು ದಿನಗಳಲ್ಲಿ ಬಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ, ಶಾಲಾ ಕಾಲೇಜುಗಳಿಗೆ ರಜೆ ಸಾಧ್ಯತೆ

PPeepal Media Desk

Peepal Media Desk ದೇಶ, ರಾಜ್ಯ

• 1 ನಿಮಿಷದ ಓದು

ಮುಂದಿನ ಮೂರು ದಿನಗಳಲ್ಲಿ ಬಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ, ಶಾಲಾ ಕಾಲೇಜುಗಳಿಗೆ ರಜೆ ಸಾಧ್ಯತೆ

ರಾಜ್ಯಾದ್ಯಂತ ಮುಂಗಾರು ಮಳೆಯ ಅಬ್ಬರ ಜೋರಾಗಿದೆ ಕಳೆದ ವಾರ ಸಂಪೂರ್ಣ ನಿಂತಿದ್ದ ಮಳೆ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಏಕಾಏಕಿ ಶುರುವಾಗಿದೆ. ಮುಂದಿನ ಮೂರು ದಿನಗಳಲ್ಲಿ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಬಾರಿ ಮಳೆ ಮುನ್ಸೂಚನೆ ಎದುರಾಗಿದೆ. ಭಾಗಶಃ ಸುಮಾರು 8 ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವ ಸಾಧ್ಯತೆಗಳು ದಟ್ಟವಾಗಿವೆ.

ಹವಾಮಾನ ಇಲಾಖೆ ಮುನ್ಸೂಚನೆಯಂತೆ ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗದಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿರುವ ಪರಿಣಾಮ ಈಗ ಈ ಮಳೆ ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಸುರಿಯುವ ಮುನ್ಸೂಚನೆ ಎದುರಾಗಿದೆ. ಮುಂದಿನ ಎರಡ್ಮೂರು ದಿನಗಳಲ್ಲಿ ಅಂದರೆ ಶನಿವಾರದಿಂದ ಸೋಮವಾರದ ವರೆಗೂ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಭಾಗದಲ್ಲಿ ಬಾರಿ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಮುಂದಿನ 2 ದಿನ ಭಾರಿ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಿಸಿದೆ. ಈ ವೇಳೆ 204 ಮಿಮೀವರೆಗೆ ಮಳೆಯಾಗುವ ಸಾಧ್ಯತೆ ಇದೆ. ಗಾಳಿ ಜೋರಾಗಿ ಬೀಸುವುದರಿಂದ ಸಮುದ್ರದಲ್ಲಿ ಮೀನುಗಾರಿಕೆ ನಡೆಸದಂತೆ ಮೀನುಗಾರರಿಗೂ ಎಚ್ಚರಿಕೆ ನೀಡಲಾಗಿದೆ.

ಬೆಳಗಾವಿ, ಧಾರವಾಡ, ಹಾವೇರಿ, ಹಾಸನ, ಮೈಸೂರಿನಲ್ಲಿ ಜೂ.14ರಿಂದ ಜೂ.15ರವರೆಗೆ ಬಿರುಸಾಗಿ ಮಳೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ 299 ಮಿ.ಮೀ ಬಾರಿ ಮಳೆಯಾಗಿದೆ. ನಂತರ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ 282 ಮಿ.ಮೀ ಮಳೆಯಾದ ಬಗ್ಗೆ ವರದಿಯಾಗಿದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು