ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪಾಯಕಾರಿ ದೆಹಲಿ ಗಾಳಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ – ಸುಪ್ರೀಂ ಕೋರ್ಟ್ ಕಡಕ್ ಸೂಚನೆಕರ್ರೆಗುಟ್ಟಾ ಬೆಟ್ಟದಲ್ಲಿ ಸ್ಫೋಟಕ ಪತ್ತೆ: 711 BGL ಶೆಲ್‌ಗಳು ವಶಕ್ಕೆಸ್ಟಿಂಗ್ ಕೇಂದ್ರಿತ ರಾಜಕಾರಣದ ಹಿಂದಿರುವ ಸಂಚು ವಂಚನೆಗಳ ಅನಾವರಣಸ್ಟಿಂಗ್ ಆಪರೇಷನ್ ನಲ್ಲಿ ಕುಮಾರಸ್ವಾಮಿ‌‌ ಪ್ರಯತ್ನ ಸಂಪೂರ್ಣ ವಿಫಲ – ಶಿವರಾಜ್ ಎಸ್. ತಂಗಡಗಿಕರ್ನಾಟಕದ ಪೆಟ್ರೋಲ್‌ನಲ್ಲಿ 31.2% ಎಥೆನಾಲ್! ವಾಹನ ಸವಾರರಿಗೆ ಆತಂಕ; E20 ಪ್ರಚಾರದ ಜಾಹೀರಾತುಗಳ ಹಿಂದಿನ ಹುನ್ನಾರವೇನು?ಬಯಲು ಸಂತೆಯ ಮೌನ – 3 : ಮೂರು ದಾರಿಯ ಖತ್ರಿಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ: 4 ಬೋಗಿಗಳಿಗೆ ಹಾನಿ, ಪ್ರಯಾಣಿಕರು ಸುರಕ್ಷಿತಪಂಜಾಬ್‌ನಲ್ಲಿ ಕರ್ಮಭೂಮಿ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳಿಗೆ ಬೆಂಕಿ: ಪ್ರಯಾಣಿಕರು ಸುರಕ್ಷಿತ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಟೀಸರ್ ವಿರುದ್ಧ ಆಕ್ರೋಶ: ಕೋಮು ಸಾಮರಸ್ಯಕ್ಕೆ ಧಕ್ಕೆ ಆರೋಪ, ಸಿನೆಮಾ ಬಿಡುಗಡೆ ಮಾಡದಂತೆ ಒತ್ತಾಯಗೃಹಲಕ್ಷ್ಮೀ ಫಲಾನುಭವಿಗಳ ಜೊತೆ ಡಿಕೆಶಿ ಸಂವಾದ – ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲರಾಜ್ಯದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗಾಗಿ 20,000 ಕೋಟಿ ರೂ –  ಈಶ್ವರ ಖಂಡ್ರೆಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮತಪತ್ರಗಳ ಬಳಕೆ – ಸಚಿವ ಈಶ್ವರ ಖಂಡ್ರೆKSRTC ಬಸ್ ಪಾಸ್ ದರವೂ ಭಾರಿ ಏರಿಕೆ – ಶೇಕಡಾ 23 ರಷ್ಟು ಏರಿಕೆಅಪರಾಧಗಳ ರಾಜಧಾನಿಯಾಗುತ್ತಿದೆಯೇ ಬೆಂಗಳೂರು?ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್‌ಗೆ ಇನ್ನು ಕಾನೂನು ರಕ್ಷಣೆ ಇಲ್ಲವೇ? ನಿಮ್ಮ ಒಂದು ಪೋಸ್ಟ್‌ಗೆ ಕಂಪನಿಗಳೇ ಹೊಣೆ!ಕುವೆಂಪು ಚಿಂತನೆಗಳು ಇಂದು: ವಿಷಯ ಮಂಡನೆ ಮತ್ತು ಸಂವಾದಹಿರಿಯ ಸಾಹಿತಿ, ಭಾಷಾಶಾಸ್ತ್ರಜ್ಞ ಪ್ರೊ. ಕೆ.ವಿ. ನಾರಾಯಣ ಇನ್ನಿಲ್ಲಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ: ನಂದಿಬೆಟ್ಟದ ತಪ್ಪಲಿನಲ್ಲಿ ಬಾಲಕನ ಮೃತದೇಹ ಪತ್ತೆ‘ಕನ್ನಡಿಗರಿಗೆ ಉದ್ಯೋಗ ಕೊಡಿ, ಕಂಪನಿಗಳಿಗೆ ಕಿರುಕುಳ ಕೊಡಬೇಡಿ’: ಸರಕಾರದ ಇಬ್ಬಗೆ ನೀತಿ & ಅಸಲಿ ಪರಿಹಾರ

ಜೆಡಿಎಸ್‌ ಕಚೇರಿ ಆವರಣದಲ್ಲಿ ʼವಿದ್ಯುತ್‌ ಕಳ್ಳ ಕುಮಾರಸ್ವಾಮಿʼ ಪೋಸ್ಟರ್!

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಜೆಡಿಎಸ್‌ ಕಚೇರಿ ಆವರಣದಲ್ಲಿ ʼವಿದ್ಯುತ್‌ ಕಳ್ಳ ಕುಮಾರಸ್ವಾಮಿʼ ಪೋಸ್ಟರ್!

ಬೆಂಗಳೂರು: ವಿದ್ಯುತ್ ಕಳ್ಳತನ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ವಿಜಿಲೆನ್ಸ್ ತಂಡ ಎಫ್‌ಐಆರ್ ದಾಖಲಿಸಿದ ಬೆನ್ನಲ್ಲೇ, ಕೆಲ ಕಿಡಿಗೇಡಿಗಳು ನಗರದ ಜೆಡಿಎಸ್ ಕಚೇರಿ ಆವರಣದಲ್ಲಿ ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಎಂಬ ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ. ಮಂಗಳವಾರ ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಶ್ರೀರಾಂಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪೋಸ್ಟರುಗಳನ್ನು ತೆಗೆದಿದ್ದಾರೆ.

ಮಂಗಳವಾರ ರಾತ್ರಿ, ಬೆಂಗಳೂರಿನ ಜೆಡಿಎಸ್ ಕೇಂದ್ರ ಕಚೇರಿಯ ಆವರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಎಂದು ಶಂಕಿಸಲಾದ ಕೆಲವು ಕಿಡಿಗೇಡಿಗಳು ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ. ವಿಷಯ ಬೆಳಕಿಗೆ ಬಂದ ನಂತರ ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪೋಸ್ಟರ್‌ಗಳನ್ನು ತೆಗೆದಿದ್ದಾರೆ. ಈ ಸಂಬಂಧ ಈವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.

ಮುಂಜಾಗ್ರತಾ ಕ್ರಮವಾಗಿ ಕುಮಾರಸ್ವಾಮಿ ಅವರ ಜೆಪಿ ನಗರದ ನಿವಾಸಕ್ಕೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಮಂಗಳವಾರ ಕರ್ನಾಟಕ ಕಾಂಗ್ರೆಸ್, ಕುಮಾರಸ್ವಾಮಿ ದೀಪಾವಳಿ ಸಂದರ್ಭದಲ್ಲಿ ತಮ್ಮ ಜೆಪಿ ನಗರದ ಮನೆಗೆ ದೀಪಾಲಂಕಾರ ಮಾಡಲು ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿದ್ದಾಗಿ ಆರೋಪಿಸಲಾಗಿತ್ತು.

ಇದಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಆರೋಪವನ್ನು ಒಪ್ಪಿಕೊಂಡರಾದರೂ, ಅದು ಮನೆಗೆ ದೀಪಾಲಂಕಾರ ಮಾಡಲು ಬಂದಿದ್ದ ಕೆಲಸಗಾರರ ಅಚಾತುರ್ಯ ಎಂದಿದ್ದರು. ತಪ್ಪಿಗೆ ದಂಡ ಕಟ್ಟಲು ಸಿದ್ಧ ಎಂದಿದ್ದರು.

ನಂತರ ಬೆಸ್ಕಾಂನ ವಿಜಿಲೆನ್ಸ್ ಅಧಿಕಾರಿಗಳ ತಂಡ ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ ನೀಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿದೆ. ಕುಮಾರಸ್ವಾಮಿಗೆ ಬೆಸ್ಕಾಂ ಅಧಿಕಾರಿಗಳು ದಂಡ ವಿಧಿಸುವ ಸಾಧ್ಯತೆಯಿದೆ.

ವಿದ್ಯುತ್ ಕಳ್ಳತನ ಅಕ್ರಮವಾಗಿದ್ದು, ಕುಮಾರಸ್ವಾಮಿ ವಿರುದ್ಧ ಬೆಸ್ಕಾಂ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು