ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವದಂತಿಗಳಿಗೆ ಕಿವಿಗೊಡಬೇಡಿ, ಪ್ರಬುದ್ಧ ಯೋಜನೆ ಮುಂದುವರೆಯಲಿದೆ: ಸಚಿವ ಹೆಚ್.ಸಿ.ಮಹದೇವಪ್ಪ

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ವದಂತಿಗಳಿಗೆ ಕಿವಿಗೊಡಬೇಡಿ, ಪ್ರಬುದ್ಧ ಯೋಜನೆ ಮುಂದುವರೆಯಲಿದೆ: ಸಚಿವ ಹೆಚ್.ಸಿ.ಮಹದೇವಪ್ಪ

ಬೆಂಗಳೂರು : ಪ್ರಬುದ್ಧ ಯೋಜನೆಯಡಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ವಿದೇಶದಲ್ಲಿ ಪಿಹೆಚ್ ಡಿ ಅಧ್ಯಯನ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಕೆಲವು ಗೊಂದಲಗಳು ಉಂಟಾಗಿದ್ದು ಸರ್ಕಾರವು ಈ ಹಿಂದಿನ ರೀತಿಯಲ್ಲೇ ಈ ಯೋಜನೆಯನ್ನು ಮುಂದುವರೆಸಲಿದೆ ಎಂದು ಸಚಿವ ಹೆಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವರು, ಪರಿಶಿಷ್ಟ ಸಮುದಾಯದ ಜನರು ವಿದೇಶಗಳಲ್ಲಿ ಉನ್ನತ ವ್ಯಾಸಂಗ ಮಾಡಿದಾಗ ಮಾತ್ರ ಅವರು ಘನತೆಯುತ ಸ್ಥಾನಗಳಿಗೆ ಏರಲು ಸಾಧ್ಯ ಎಂಬ ಬಾಬಾ ಸಾಹೇಬರ ಆಶಯಗಳನ್ನು ಸಾಕಾರಗೊಳಿಸುವುದು ನಮ್ಮ ಜವಾಬ್ದಾರಿಯೇ ಆಗಿದೆ.

ಈ ಹಿನ್ನಲೆಯಲ್ಲಿ ಈ ಹಿಂದಿನಂತೆಯೇ ವಿಶ್ವದ ಅಗ್ರ 100 ವಿಶ್ವವಿದ್ಯಾಲಯಗಳಲ್ಲಿ ಪಿಹೆಚ್ ಡಿ ವ್ಯಾಸಂಗಕ್ಕೆ ಆಯ್ಕೆಯಾಗುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಈ ಯೋಜನೆಯ ಅನುಕೂಲ ಸಿಗಲಿದೆ.

ಈ ಯೋಜನೆಯನ್ನು ಮುಂದುವರೆಸುವ ಕುರಿತು ನಮ್ಮ ಇಲಾಖೆಯ ಅಧಿಕಾರಿಗಳಿಗೆ ನಾನು ಸೂಚನೆ ನೀಡಿದ್ದು, ಸಮುದಾಯದ ಬಂಧುಗಳು ಈ ವಿಷಯದಲ್ಲಿ ಗೊಂದಲಗಳಿಗೆ ಎಡೆ ಮಾಡಿಕೊಡಬಾರದೆಂದು ಈ ಮೂಲಕ ವಿನಂತಿಸಿದ್ದಾರೆ.

ಈ ವಿಷಯದ ಕುರಿತಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಈ ಕುರಿತು ನಡೆಯುತ್ತಿದ್ದ ಚರ್ಚೆಗಳ ಹಿನ್ನೆಲೆಯಲ್ಲಿ ಸಚಿವರು ಈ ಹೇಳಿಕೆಯನ್ನು ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ. ಈ ಕುರಿತು ಪತ್ರಿಕೆಗಳಲ್ಲೂ ವರದಿಯಾಗಿ, ಆಕಾಂಕ್ಷಿ ವಿದ್ಯಾರ್ಥಿಗಳಲ್ಲಿ ಆತಂಕಕ್ಕೆ ಕಾರಣವಾಗಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು