ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪ್ರಧಾನಿಗಳ ಚುನಾವಣಾ ಭಾಷಣಕ್ಕೆ ರಾಜ್ಯದ ಶಾಲಾ ಮಕ್ಕಳ ದುರ್ಬಳಕೆ ಯಾವುದೇ ಕಾರಣಕ್ಕೂ ಸಲ್ಲದು: ಎಎಪಿ

P

Peepal Media Desk • ರಾಜ್ಯ

• 1 ನಿಮಿಷದ ಓದು

ಪ್ರಧಾನಿಗಳ ಚುನಾವಣಾ ಭಾಷಣಕ್ಕೆ ರಾಜ್ಯದ ಶಾಲಾ ಮಕ್ಕಳ ದುರ್ಬಳಕೆ ಯಾವುದೇ ಕಾರಣಕ್ಕೂ ಸಲ್ಲದು: ಎಎಪಿ

ಬೆಂಗಳೂರು : ಅಧಿಕಾರದಲ್ಲಿರುವ ಬಿಜೆಪಿ ಪಕ್ಷವು ಕಳೆದ ಹಲವು ದಿವಸಗಳಿಂದ ಸರ್ಕಾರದ ಅಧಿಕೃತ ಕಾರ್ಯಕ್ರಮಗಳನ್ನು ತನ್ನ ಪಕ್ಷದ ಕಾರ್ಯಕ್ರಮವೆಂಬಂತೆ ಬಿಂಬಿಸುತ್ತ ಬಂದಿರುವುದು ಇತ್ತೀಚಿನ ದಿನಗಳಲ್ಲಿ ಸರ್ವೇಸಾಮಾನ್ಯವಾಗಿ ಕಂಡುಬರುತ್ತಿದೆ.

ಇದೇ ತಿಂಗಳ ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿಯವರು ದೇವನಹಳ್ಳಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ 2 ಹಾಗೂ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಪುತ್ಥಳಿಯನ್ನು ಉದ್ಘಾಟಿಸುವ ಕಾರ್ಯಕ್ರಮಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಯ ಮಕ್ಕಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಖಂಡನಾರ್ಹ ಸಂಗತಿ. ಈ ರೀತಿಯ ಬೆಳವಣಿಗೆಯನ್ನು ಆಮ್ ಆದ್ಮಿ ಪಕ್ಷವು ಯಾವುದೇ ರೀತಿಯಲ್ಲೂ ಸಹಿಸುವುದಿಲ್ಲ ಎಂದು ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ಅಧ್ಯಕ್ಷ ಮೋಹನ್‌ ದಾಸರಿ ಹೇಳಿದರು.

ಬಿಜೆಪಿ ಪಕ್ಷವು ದೇವನಹಳ್ಳಿ ಸಮೀಪದಲ್ಲಿ ರೈತರಿಂದ ಭೂಸ್ವಾಧೀನಪಡಿಸಿಕೊಂಡ ಕೆ ಎಸ್ ಎಫ್ ಐ ಡಿ ಸಿ ವಶದಲ್ಲಿರುವ 400 ಎಕರೆ ಜಮೀನಿನಲ್ಲಿ ಪಕ್ಷದ ಬೃಹತ್ ಸಮಾವೇಶವನ್ನು ಆಯೋಜಿಸಿ ತನ್ನೆಲ್ಲ ಪಕ್ಷದ ಕಾರ್ಯಕರ್ತರುಗಳನ್ನು ಕರೆತಂದು ಮುಂಬರುವ ವಿಧಾನಸಭಾ ಚುನಾವಣೆಯ ಪೂರ್ವ ತಯಾರಿ ಸಮ್ಮೇಳನವಾಗಿ ಪರಿವರ್ತಿಸುತ್ತಿದೆ. ಈ ರೀತಿಯ ಸರ್ಕಾರಿ ಕಾರ್ಯ ಕ್ರಮ ಗಳನ್ನು ದುರ್ಬಳಕೆ ಮಾಡಿಕೊಂಡು ಪಕ್ಷದ ಚುನಾವಣಾ ಭಾಷಣಗಳನ್ನು ಮಾಡಿಸಲೆಂದೇ ಪ್ರಧಾನಿಗಳನ್ನು ಆಹ್ವಾನಿಸುತ್ತಿರುವುದು ಇವರ ಮುಂಬರುವ ಚುನಾವಣೆಯಲ್ಲಿ ಸೋಲುತ್ತೇವೆಂಬ ಹತಾಶೆಯ ಸಂಕೇತ.

ಇದಲ್ಲದೆ ಸರ್ಕಾರವು ವಿರೋಧ ಪಕ್ಷಗಳನ್ನು ಆಹ್ವಾನಿಸುತ್ತಿಲ್ಲ ಹಾಗೂ ಆಮ್ ಆದ್ಮಿ ಪಕ್ಷಕ್ಕೂ ಸಹ ಇದುವರೆವಿಗೂ ಯಾವುದೇ ಅಧಿಕೃತ ಆಹ್ವಾನ ಪತ್ರಿಕೆಯೂ ಬಂದಿಲ್ಲ ಎಂದು ಮೋಹನ್‌ ದಾಸರಿ ಅಲವತ್ತುಕೊಂಡಿದ್ದಾರೆ.

ಆಡಳಿತ ಬಿಜೆಪಿ ಪಕ್ಷವು ಈಗಾಗಲೇ ಪಠ್ಯಪುಸ್ತಕ ಪರಿಷ್ಕರಣೆಯ ನೆಪದಲ್ಲಿ ರಾಜ್ಯದ ಮಕ್ಕಳಿಗೆ ವಿಷಬೀಜವನ್ನು ಬಿತ್ತಿ ಅಭ್ಯಸಿಸುತ್ತಿರುವ ಈ ಹಂತದಲ್ಲಿ ಈ ರೀತಿಯ ಬೆಳವಣಿಗೆ ತೀರಾ ಅಸಹ್ಯಕಾರಿ.

ಬೆಂಗಳೂರು ಗ್ರಾಮಾಂತರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಈ ಕ್ರಮವನ್ನು ಆಮ್ ಆದ್ಮಿ ಪಕ್ಷವು ಖಂಡಿಸುತ್ತ ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕೆಂದು ಸರಕಾರವನ್ನು ಆಗ್ರಹಿಸುತ್ತದೆ ಎಂದು ಮೋಹನ್‌ ದಾಸರಿ ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version