ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕುಪ್ಪಳಿ | ಅದ್ದೂರಿ ಮಂತ್ರ ಮಾಂಗಲ್ಯ ವಿವಾದ; ಪ್ರತಿಷ್ಠಾನದ ಸ್ಥಾನಕ್ಕೆ ಪ್ರಕಾಶ್‌ ಕಡಿದಾಳ್‌ ರಾಜೀನಾಮೆ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಕುಪ್ಪಳಿ | ಅದ್ದೂರಿ ಮಂತ್ರ ಮಾಂಗಲ್ಯ ವಿವಾದ; ಪ್ರತಿಷ್ಠಾನದ ಸ್ಥಾನಕ್ಕೆ ಪ್ರಕಾಶ್‌ ಕಡಿದಾಳ್‌ ರಾಜೀನಾಮೆ

ತೀರ್ಥಹಳ್ಳಿ: ರೈತರು ಮತ್ತು ಬಡವರು ಮದುವೆಯ ಹೆಸರಿನಲ್ಲಿ ಸಾಲದ ಹೊರೆಯಲ್ಲಿ ಮುಳುಗುವುದು ಮತ್ತು ಪುರೋಹಿತಶಾಹಿಯ ಕೈಯಲ್ಲಿ ಶೋಷಣೆಗೆ ಒಳಗಾಗುವುದನ್ನು ತಪ್ಪಿಸಲೆಂದು ಕುವೆಂಪು ಮಂತ್ರ ಮಾಂಗಲ್ಯ ಎನ್ನುವ ಹೊಸ ಬಗೆಯ ಮದುವೆ ಪರಿಕಲ್ಪನೆಯೊಂದನ್ನು ಕಳೆದ ಶತಮಾನದ ಆರನೇ ದಶಕದಲ್ಲಿ ಚಾಲ್ತಿಗೆ ತಂದಿದ್ದರು.

ಎಂಬತ್ತು ಮತ್ತು ತೊಂಬತ್ತರ ದಶಕದಲ್ಲಿ ಇಂತಹ ಮದುವೆಗಳು ಸಾಕಷ್ಟು ನಡೆಯುತ್ತಿದ್ದವು. ಹಿರಿಯರ ಹೆಜ್ಜೆಯನ್ನು ಅನುಕರಿಸಿ ಈಗಿನ ಕಿರಿಯರು ಸಹ ಆಗಾಗ ಮಂತ್ರ ಮಾಂಗಲ್ಯ ಪದ್ಧತಿಯಡಿ ಮದುವೆಯಾಗುವ ಮೂಲಕ ಈ ಪರಂಪರೆಯನ್ನು ಕಾಪಾಡಿಕೊಂಡು ಬಂದಿದ್ದಾರೆ.

ಆದರೆ ಇತ್ತೀಚೆಗೆ ಕುವೆಂಪು ಅವರ ಜನ್ಮಸ್ಥಳ ಕುಪ್ಪಳಿಯಲ್ಲಿ ನಡೆದ ಮಂತ್ರ ಮಾಂಗಲ್ಯದ ಅದ್ದೂರಿತನ ಬಾರೀ ಟೀಕೆಗೆ ಒಳಗಾಗಿತ್ತು. ಜೊತೆಗೆ ಅಲ್ಲಿನ ಆಡಳಿತ ನೋಡಿಕೊಳ್ಳುವ ಟ್ರಸ್ಟಿನ ಕುರಿತಾಗಿ ಟೀಕೆಗಳೂ ಎದ್ದಿದ್ದವು.

ಈ ಹಿನ್ನೆಲೆಯಲ್ಲಿ ಕುಪ್ಪಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಮ ಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ತಮ್ಮ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ.

ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಬಿ.ಎಲ್. ಶಂಕರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ಪ್ರತಿಷ್ಠಾನದ ಸಮ ಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ಅವರ ಕುಟುಂಬದವರೇ ಅದ್ದೂರಿಯಾಗಿ ಮಂತ್ರ ಮಾಂಗಲ್ಯ ಆಚರಿಸಿ ಕುವೆಂಪು ಆಶಯಕ್ಕೆ ಧಕ್ಕೆ ತಂದಿರುವುದಾಗಿ ವಿರೋಧ ವ್ಯಕ್ತವಾಗಿತ್ತು.

ತಮ್ಮ ಸಂಬಂಧಿಕರ ಮದುವೆ ಎಂಬುದನ್ನು ಒಪ್ಪಿಕೊಂಡಿದ್ದ ಕಡಿದಾಳ್ ಪ್ರಕಾಶ್, ಇಂತಹ ಮದುವೆಗಳಿಗೆ ಮುಂದೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದರು. ಇದೀಗ ಅವರು ರಾಜೀನಾಮೆ ನೀಡಿದ್ದಾರೆ.

ವಿಷಯಗಳು: #karnataka #news #peepal #peepalmedia #politics
PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು