ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ತಮ್ಮನ ಬಂಧನದ ವಿಷಯದಲ್ಲಿ ಪ್ರತಾಪ ಸಿಂಹ ರಾಜಕೀಯ ಮಾಡುತ್ತಿದ್ದಾರೆ: ಡಿ ಕೆ ಶಿವಕುಮಾರ್

P

Peepal Media Desk • ರಾಜ್ಯ

• 1 ನಿಮಿಷದ ಓದು

ತಮ್ಮನ ಬಂಧನದ ವಿಷಯದಲ್ಲಿ ಪ್ರತಾಪ ಸಿಂಹ ರಾಜಕೀಯ ಮಾಡುತ್ತಿದ್ದಾರೆ: ಡಿ ಕೆ ಶಿವಕುಮಾರ್

ಬೆಂಗಳೂರು: ಅರಣ್ಯ ಪ್ರದೇಶದಲ್ಲಿ ಮರ ಕಡಿದ ಆರೋಪದಲ್ಲಿ ವಿಕ್ರಂ ಸಿಂಹ ಅವರ ಬಂಧನಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಸಂಸದ ಪ್ರತಾಪ ಸಿಂಹ ಅವರು ಈಗಾಗಲೇ ಮೆಲೋಡ್ರಾಮ ಆರಂಭಿಸಿದ್ದು, ಕೆಮೆರಾಗಳ ಮುಂದೆ ಕಣ್ಣೀರು ಸುರಿಸುತ್ತಾ ನನ್ನ ಕುಟುಂಬವನ್ನು ನಾಶಪಡಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಗೋಳಾಡಿದ್ದಾರೆ.

ಈ ಬಂಧನವು ಪ್ರಸ್ತುತ ರಾಜಕೀಯ ನಾಟಕಗಳಿಗೆ ದಾರಿ ಮಾಡಿಕೊಟ್ಟಿದ್ದು, ಈ ಕುರಿತು ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು “ನಾನು ಈ ವಿಷಯದ ಬಗ್ಗೆ ಕ್ರಾಸ್ ಚೆಕ್ ಮಾಡಿದ್ದೇನೆ ಮತ್ತು ಅಧಿಕಾರಿಗಳು ತಮ್ಮ ಕೆಲಸವನ್ನು ಮಾಡಿದ್ದಾರೆ. ಈ ವಿಷಯದಲ್ಲಿ ನಾವು ಮಧ್ಯಪ್ರವೇಶಿಸಲು ಬಯಸುವುದಿಲ್ಲ. ಯಾವುದೇ ಪರವಾನಗಿ ಇಲ್ಲದೇ ಹಲವು ಮರಗಳನ್ನು ಕಡಿಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ…” ಎಂದು ಹೇಳಿದ್ದಾರೆ.

ಮುಂದುವರೆದು ಮಾತನಾಡಿದ ಅವರು, “ನಾವು ಯಾರನ್ನೂ ಟಾರ್ಗೆಟ್‌ ಮಾಡುತ್ತಿಲ್ಲ. ಪ್ರತಾಪ್‌ ಸಿಂಹ ಅವರ ಸಹೋದರ ಮರ ಕಡಿಯುವ ಮೊದಲು ಅನುಮತಿ ಪಡೆದಿದ್ದರೆ ಈ ಸಮಸ್ಯೆ ಎದುರಾಗುತ್ತಿರಲಿಲ್ಲ. ಅವರು ಪರವಾನಗಿ ಪಡೆಯದೆ ಅರಣ್ಯ ಪ್ರದೇಶದಲ್ಲಿ ಕಡಿದಿರುವುದು ಅಪರಾಧ ಎಂದು ಅಧಿಕಾರಿಗಳು ಹೇಳಿದ್ದಾರೆ. ಹೀಗಿರುವಾಗ ನಾವು ಅವರ ಕೆಲಸದಲ್ಲಿ ಮಧ್ಯ ಪ್ರವೇಶಿಸುವುದಿಲ್ಲ” ಎಂದು ಹೇಳಿದರು.

ಇತ್ತ ಸಂಸದ ಪ್ರತಾಪ್‌ ಸಿಂಹ ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನು ಗುರಿಯಾಗಿಸಿಕೊಂಡು ಮೂದಲಿಸುವುದನ್ನು ಮುಂದುವರೆಸಿದ್ದು, “ಎರಡು ಕಾರಣಗಳಿಗಾಗಿ ನಾನು ಸಿದ್ದರಾಮಯ್ಯ ಸರ್ ಅವರನ್ನು ಹಾರ ಹಾಕಿ ಅಭಿನಂದಿಸಲು ಬಯಸುತ್ತೇನೆ. ತನ್ನ ಮಗನ ಭವಿಷ್ಯಕ್ಕಾಗಿ ಮತ್ತು ಅವನ ರಾಜಕೀಯ ಜೀವನಕ್ಕಾಗಿ, ಅವರು ಯಾವುದೇ ಹಂತಕ್ಕೆ ಹೋಗಬಲ್ಲರು. ಮೈಸೂರು-ಕೊಡಗಿನಿಂದ ತನ್ನ ಮಗನಿಗೆ ಲೋಕಸಭಾ ಸ್ಥಾನ ಕೊಡಿಸುವುದಕ್ಕಾಗಿ ಅವರು ಅಲ್ಲಿರುವ ಯಾರನ್ನೂ ಬೇಕಿದ್ದರೂ ಓಡಿಸಬಲ್ಲರು.” ಎಂದಿದ್ದಾರೆ.

ಅಲ್ಲದೆ ನನ್ನ ತಂಗಿ, ತಾಯಿ ಕೂಡಾ ಅದೇ ಮನೆಯಲ್ಲಿ ಇದ್ದಾರೆ ಅವರನ್ನೂ ಆರೆಸ್ಟ್‌ ಮಾಡಿಸಿಬಿಡಿ ಎಂದು ಅವರು ಮಾಧ್ಯಮಗಳೆದುರು ಅಸಹಾಯಕರಾಗಿ ಗೋಗರೆಯುತ್ತಿರುವ ವಿಡಿಯೋ ಒಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version