ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪ್ರತಿ ತಿಂಗಳು ಮೋದಿ ಬರಬೇಕೆಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿ ಚಳವಳಿ : ಪೊಲೀಸರಿಂದ ಬಂಧನ

PPeepal Media Desk

Peepal Media Desk • ರಾಜ್ಯ

• 1 ನಿಮಿಷದ ಓದು

ಪ್ರತಿ ತಿಂಗಳು ಮೋದಿ ಬರಬೇಕೆಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿ ಚಳವಳಿ : ಪೊಲೀಸರಿಂದ ಬಂಧನ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಲು ಒಂದೆರಡು ದಿನಗಳಿರುವಾಗ ಮಾತ್ರ ರಸ್ತೆ ದುರಸ್ತಿ ಮಾಡಬೇಕೆಂದು ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ನಿರ್ಧರಿಸಿದೆ. ಆದ್ದರಿಂದ ಬೆಂಗಳೂರಿನ ರಸ್ತೆಗಳು ಸದಾ ಕಾಲ ಚೆನ್ನಾಗಿರಬೇಕೆಂದರೆ ಮೋದಿಯವರು ತಿಂಗಳಿಗೊಮ್ಮೆ ಬರುತ್ತಿರಬೇಕು ಎಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿಯು ವಿನೂತನ ಚಳವಳಿ ನಡೆಸಿತು.

ಬೆಂಗಳೂರಿಗೆ ಪ್ರಧಾನಿ ಆಗಮನದ ಹಿಂದಿನ ದಿನವಾದ ಗುರುವಾರದಂದು ಬೆಳಗ್ಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಎದುರಿನ ರಸ್ತೆಯಲ್ಲಿ ಹಾಗೂ ಮಧ್ಯಾಹ್ನ ಮಲ್ಲೇಶ್ವರಂನ ದತ್ತಾತ್ರೇಯ ದೇವಸ್ಥಾನ ರಸ್ತೆಯಲ್ಲಿ ಆಮ್‌ ಆದ್ಮಿ ಪಾರ್ಟಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಭಿತ್ತಿಪತ್ರಗಳನ್ನು ಹಿಡಿದು ಆಕ್ರೋಶ ವ್ಯಕ್ತಪಡಿಸಿದರು. ರೈಲು ನಿಲ್ದಾಣದ ಸಮೀಪ ಪ್ರತಿಭಟಿಸಿದ ಎಎಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ಮಾಧ್ಯಮಗಳ ಜೊತೆ ಮಾತನಾಡಿದ ಎಎಪಿ ಬೆಂಗಳೂರು ಅಧ್ಯಕ್ಷ ಮೋಹನ್‌ ದಾಸರಿ, “ಜನಸಾಮಾನ್ಯರ ಬಗ್ಗೆ ಸ್ವಲ್ಪವೂ ಕಾಳಜಿಯಿಲ್ಲದ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿದೆ. ಸಾಲುಸಾಲು ವಾಹನ ಸವಾರರು ರಸ್ತೆ ಗುಂಡಿಗಳಿಗೆ ಬಿದ್ದು ಕೈಕಾಲು ಮುರಿದುಕೊಂಡರೂ ಸರ್ಕಾರ ತಲೆಕೆಡಿಸಿಕೊಂಡಿರಲಿಲ್ಲ. ಈಗ ಮೋದಿಯವರು ಬರುತ್ತಾರೆಂಬ ಕಾರಣಕ್ಕೆ ತರಾತುರಿಯಲ್ಲಿ ರಸ್ತೆಗುಂಡಿಗಳನ್ನು ಮುಚ್ಚಲಾಗುತ್ತಿದೆ. ಅವರು ಸಂಚರಿಸುವ ರಸ್ತೆಗಳನ್ನು ಮಾತ್ರ ದುರಸ್ತಿ ಮಾಡಿ, ಉಳಿದ ರಸ್ತೆಗಳ ಬಗ್ಗೆ ನಿರ್ಲಕ್ಷ್ಯ ತೋರಲಾಗುತ್ತಿದೆ. ಮೋದಿಯವರನ್ನು ಮೆಚ್ಚಿಸಿ, ಮುಂದಿನ ಚುನಾವಣೆಯಲ್ಲಿ ಸಿಎಂ ಅಭ್ಯರ್ಥಿಯಾಗುವುದೇ ಬಸವರಾಜ ಬೊಮ್ಮಾಯಿಯವರ ಏಕೈಕ ಉದ್ದೇಶ ಎಂಬುದು ಇದರಿಂದ ಸ್ಪಷ್ಟವಾಗುತ್ತಿದೆ” ಎಂದು ಹೇಳಿದರು.

“ಮೋದಿಯವರು ಬರುತ್ತಾರೆಂದು ಮುಚ್ಚಿದ ಗುಂಡಿಗಳು ಅವರು ದೆಹಲಿಗೆ ವಾಪಸಾದ ಕೆಲವೇ ದಿನಗಳಲ್ಲಿ ಮತ್ತೆ ಬಾಯಿ ತೆರೆಯಲಿವೆ. ಗುಣಮಟ್ಟ ಕಾಯ್ದುಕೊಳ್ಳದೇ ಅವರಸರಲ್ಲಿ ಮಾಡಿದ ಕಾಮಗಾರಿಗಳು ಒಂದು ತಿಂಗಳು ಬಾಳಿಕೆ ಬರುವುದೂ ಅನುಮಾನ. ಮೋದಿಯವರು ಈ ಹಿಂದೆ ರಾಜ್ಯಕ್ಕೆ ಬಂದಾಗಲೂ ನಾವಿದನ್ನು ಗಮನಿಸಿದ್ದೇವೆ. ಆದ್ದರಿಂದ ಪ್ರಧಾನಿ ಮೋದಿಯವರು ತಿಂಗಳಿಗೊಮ್ಮೆ ಬೆಂಗಳೂರಿಗೆ ಬಂದು ಇಲ್ಲಿನ ಎಲ್ಲ ರಸ್ತೆಗಳಲ್ಲಿ ಸಂಚರಿಸಬೇಕು. ಇಲ್ಲದಿದ್ದರೆ ಇಲ್ಲಿನ ಸಿಎಂ, ಸಚಿವರು ಹಾಗೂ ಶಾಸಕರು ನಿದ್ರಾವಸ್ಥೆಯಲ್ಲಿ ಇರುತ್ತಾರೆ” ಎಂದು ಮೋಹನ್‌ ದಾಸರಿ ಹೇಳಿದರು.

“ಆದಾಯ ತೆರಿಗೆ, ಜಿಎಸ್‌ಟಿ, ಆಸ್ತಿ ತೆರಿಗೆ ಮುಂತಾದವುಗಳನ್ನು ಮಾತ್ರವಲ್ಲದೇ ಉತ್ತಮ ರಸ್ತೆಗಾಗಿ ವಾಹನ ನೋಂದಣಿ ಶುಲ್ಕ, ರಸ್ತೆ ತೆರಿಗೆಯನ್ನು ಜನಸಾಮಾನ್ಯರು ಪಾವತಿಸುತ್ತಾರೆ. ಆದರೆ ಸರ್ಕಾರವು ಜನರಿಗಾಗಿ ರಸ್ತೆ ದುರಸ್ತಿ ಮಾಡುವ ಬದಲು ಪ್ರಧಾನಿಗಾಗಿ ದುರಸ್ತಿ ಮಾಡುತ್ತಿದೆ. ಜನಸಾಮಾನ್ಯರನ್ನು ಕಸದಂತೆ ಕಂಡು, ಜನವಿರೋಧಿ ಆಡಳಿತ ನೀಡುತ್ತಿರುವ ಬಿಜೆಪಿಗೆ ಜನಸಾಮಾನ್ಯರೇ ತಕ್ಕ ಪಾಠ ಕಲಿಸಬೇಕು” ಎಂದು ಮೋಹನ್‌ ದಾಸರಿ ಹೇಳಿದರು.

ಪಕ್ಷದ ನಾಯಕರಾದ ಜಗದೀಶ್‌ ವಿ ಸದಂ, ಸುರೇಶ್‌ ರಾಥೋಡ್‌, ಅಂಜನಾ ಗೌಡ, ಅಶೋಕ್‌ ಮೃತ್ಯುಂಜಯ, ಗೋಪಿನಾಥ್‌ ಮತ್ತಿತರ ಅನೇಕ ಮುಖಂಡರು, ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು