ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸ್ವಾತಂತ್ರ್ಯ ಹಬ್ಬದ ಹಿನ್ನೆಲೆ: ಭದ್ರತೆ, ಸಂಚಾರ ನಿರ್ವಹಣೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಸ್ವಾತಂತ್ರ್ಯ ಹಬ್ಬದ ಹಿನ್ನೆಲೆ: ಭದ್ರತೆ, ಸಂಚಾರ ನಿರ್ವಹಣೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಆಗಸ್ಟ್ 15ರಂದು ಬೆಂಗಳೂರಿನ ಐತಿಹಾಸಿಕ ವಿಧಾನಸೌಧದ ಆವರಣದಲ್ಲಿ ನಡೆಯಲಿರುವ ರಾಜ್ಯದ ಮೊದಲ ಸಾರ್ವಜನಿಕ ‘ಸ್ವಾತಂತ್ರ್ಯ ಹಬ್ಬ–2026’ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ಅವರು ಪೊಲೀಸ್ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ)ದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸ್ವಾತಂತ್ರ್ಯ ಹಬ್ಬದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಭದ್ರತೆ, ಸಂಚಾರ ವ್ಯವಸ್ಥೆ, ಸಾರ್ವಜನಿಕರ ಪ್ರವೇಶ ಮತ್ತು ನಿರ್ಗಮನ, ವಾಹನ ನಿಲುಗಡೆ ಹಾಗೂ ಜನದಟ್ಟಣೆ ನಿರ್ವಹಣೆ ಸೇರಿದಂತೆ ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚಿಸಿದರು.

ವಿಧಾನಸೌಧದಲ್ಲಿ ಬೆಳಿಗ್ಗೆ 11 ಗಂಟೆಯಿಂದ ರಾತ್ರಿ 10ರವರೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ‘ದಿ ಪೀಪಲ್ಸ್ ಇಂಡಿಯಾ ಪೆರೇಡ್’, ವಿಧಾನಸೌಧದ ವಿಶೇಷ ಪ್ರವಾಸ, ಮಕ್ಕಳಿಗಾಗಿ ‘ಮಕ್ಕಳ ಮೇಳ’, ರಸಪ್ರಶ್ನೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಗೀತ ಕಚೇರಿ, ವಿವಿಧ ಜಿಲ್ಲೆಗಳ ಆಹಾರ ಮತ್ತು ಕರಕುಶಲ ಪ್ರದರ್ಶನಗಳು ಸೇರಿದಂತೆ ಹಲವು ಕಾರ್ಯಕ್ರಮಗಳು ನಡೆಯಲಿವೆ. ಸಂಜೆ ಸಂಗೀತ ಕಾರ್ಯಕ್ರಮ ಹಾಗೂ ರಾತ್ರಿ ಪಟಾಕಿ ಪ್ರದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವ ಸಾಧ್ಯತೆ ಇರುವುದರಿಂದ ವಿಶೇಷ ಗಮನಹರಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ಸುಗಮ ಸಂಚಾರ ವ್ಯವಸ್ಥೆ, ಪಾದಚಾರಿಗಳ ಸುರಕ್ಷತೆ, ತುರ್ತು ಸೇವೆಗಳಿಗೆ ಅಗತ್ಯ ವ್ಯವಸ್ಥೆ ಹಾಗೂ ಜನದಟ್ಟಣೆ ನಿಯಂತ್ರಣಕ್ಕೆ ಸಮರ್ಪಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದ ಸಚಿವರು, ಕಾರ್ಯಕ್ರಮದ ವೇಳೆ ಸಾರ್ವಜನಿಕರ ಸುರಕ್ಷತೆಗೆ ಯಾವುದೇ ರೀತಿಯ ಲೋಪವಾಗದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶಿಸಿದರು.

ಸಭೆಯಲ್ಲಿ ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಪೊಲೀಸ್ ಇಲಾಖೆ, ಜಿಬಿಎ ಹಾಗೂ ಸಂಬಂಧಿತ ಇಲಾಖೆಗಳ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು