ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಿಜೆಪಿ ಒತ್ತಡಕ್ಕೆ ಸರ್ಕಾರ ಮಣಿಯೋದಿಲ್ಲ; ಸಾರ್ವಜನಿಕ ಸ್ಥಳಗಳ ಬಳಕೆ ಮಸೂದೆಯನ್ನು ಮತ್ತೆ ಮಂಡಿಸುತ್ತೇವೆ: ಸಚಿವ ಪ್ರಿಯಾಂಕ್ ಖರ್ಗೆ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಬಿಜೆಪಿ ಒತ್ತಡಕ್ಕೆ ಸರ್ಕಾರ ಮಣಿಯೋದಿಲ್ಲ; ಸಾರ್ವಜನಿಕ ಸ್ಥಳಗಳ ಬಳಕೆ ಮಸೂದೆಯನ್ನು ಮತ್ತೆ ಮಂಡಿಸುತ್ತೇವೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬಿಜೆಪಿ ನಾಯಕರ ಬೆದರಿಕೆ ಅಥವಾ ಒತ್ತಡಕ್ಕೆ ಮಣಿದು ಕಾರ್ಯನಿರ್ವಹಿಸಲು ಈ ಸರ್ಕಾರ ಅವರ ಆಣತಿಯಂತೆ ನಡೆಯುತ್ತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರಿ ಮೂಲಸೌಕರ್ಯ ಯೋಜನೆಗಳಿಗಾಗಿ ಉದ್ಯಾನವನಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳ ಬಳಕೆಗೆ ಮಿತಿ ಹೇರುವ ಉದ್ದೇಶದ ವಿಧೇಯಕವನ್ನು ಸರ್ಕಾರ ಹಿಂಪಡೆದಿಲ್ಲ, ಬದಲಿಗೆ ಸದನದಲ್ಲಿ ಸಮಗ್ರ ಚರ್ಚೆಗೆ ಅವಕಾಶ ಕಲ್ಪಿಸಲು ಸಂಪುಟದ ಮೂಲಕ ಮರುಮಂಡನೆ ಮಾಡಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಹಿಂದಿನ ಸರ್ಕಾರಗಳ ಅವಧಿಯಲ್ಲೂ ಸಾರ್ವಜನಿಕ ಉದ್ದೇಶಕ್ಕಾಗಿ ಇಂತಹ ಜಾಗಗಳನ್ನು ಬಳಸಿಕೊಳ್ಳಲಾಗಿತ್ತು. ಇದೀಗ ಅದಕ್ಕೊಂದು ಸ್ಪಷ್ಟ ಮಿತಿ ಹೇರಲು ನಾವು ಈ ಮಸೂದೆಯನ್ನು ತಂದಿದ್ದೇವೆ. ಈ ಕುರಿತು ಸದನದಲ್ಲಿ ವಿಸ್ತೃತವಾಗಿ ಚರ್ಚಿಸಲು ನಾವು ಬಿಜೆಪಿಗೆ ಪದೇಪದೇ ಮನವಿ ಮಾಡಿದರೂ, ಅವರು ಸದನ ನಡೆಯಲು ಬಿಡದೆ ಕಲಾಪವನ್ನು ಬಹಿಷ್ಕರಿಸಿದರು” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ ನಾಯಕರ ಪ್ರತಿಭಟನೆ ಮತ್ತು ಕಲ್ಲು ಅಪ್ಪಿಕೊಳ್ಳುವ ನಾಟಕಗಳನ್ನು ಪ್ರಸ್ತಾಪಿಸಿದ ಸಚಿವರು, ಅವರ ಪ್ರತಿಭಟನೆಯಿಂದಾಗಿ ಸರ್ಕಾರ ಹೆದರಿ ಮಸೂದೆಯಿಂದ ಹಿಂದೆ ಸರಿದಿದೆ ಎಂದು ಅವರು ಭಾವಿಸಿದ್ದರೆ ಅದು ಅವರ ಭ್ರಮೆ ಎಂದರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೂ ಸೇರಿದಂತೆ ಸರ್ಕಾರವು ಈ ವಿಷಯದಲ್ಲಿ ಮುಕ್ತ ಚರ್ಚೆಯನ್ನು ಬಯಸಿದೆ. ಈ ಮಸೂದೆಯಲ್ಲಿ ಒಂದು ಪೂರ್ಣವಿರಾಮ ಅಥವಾ ಅಲ್ಪವಿರಾಮವನ್ನೂ ಬದಲಾಯಿಸದೆ, ಅಸೆಂಬ್ಲಿಯಲ್ಲಿ ಚರ್ಚೆಗೆ ಮತ್ತೆ ಮಂಡಿಸಲಾಗುವುದು.

ಸಾರ್ವಜನಿಕರು ಅಥವಾ ಪ್ರತಿಪಕ್ಷಗಳಿಂದ ಜನೋಪಯೋಗಿ ಸಲಹೆಗಳು ಬಂದರೆ ಮುಕ್ತವಾಗಿ ಸ್ವೀಕರಿಸಲು ಸಿದ್ಧವಿದ್ದೇವೆ. ಆದರೆ, ಸುರಂಗ ರಸ್ತೆ, ಉಕ್ಕಿನ ಸೇತುವೆ ಸೇರಿದಂತೆ ನಗರದ ಸಮಸ್ಯೆಗಳಿಗೆ ಯಾವುದೇ ಪರ್ಯಾಯ ಪರಿಹಾರ ನೀಡದೆ ಕೇವಲ ಎಲ್ಲದಕ್ಕೂ ವಿರೋಧ ವ್ಯಕ್ತಪಡಿಸುವುದು ಪ್ರಜಾಪ್ರಭುತ್ವ ವಿರೋಧಿ ಧೋರಣೆ ಎಂದು ಖರ್ಗೆ ಕಿಡಿಕಾರಿದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು