ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನೆದರ್‌ಲ್ಯಾಂಡ್ಸ್‌ ಸರ್ಕಾರದ ಪ್ರತಿನಿಧಿಗಳೊಂದಿಗೆ ಪ್ರಿಯಾಂಕ್‌ ಖರ್ಗೆ ಮಾತುಕತೆ

P

Peepal Media Desk • ರಾಜ್ಯ

• 1 ನಿಮಿಷದ ಓದು

ನೆದರ್‌ಲ್ಯಾಂಡ್ಸ್‌ ಸರ್ಕಾರದ ಪ್ರತಿನಿಧಿಗಳೊಂದಿಗೆ ಪ್ರಿಯಾಂಕ್‌ ಖರ್ಗೆ ಮಾತುಕತೆ

ಬೆಂಗಳೂರು, ಜುಲೈ 3: ಆರೋಗ್ಯ ಹಾಗೂ ವೈದ್ಯಕೀಯ ವಿಜ್ಞಾನಕ್ಕೆ ಸಂಬಂಧಿಸಿದಂತೆ ಇಂದಿನ ಸವಾಲುಗಳಿಗೆ ಪರಿಷ್ಕಾರ ಸೂಚಿಸುವ ಮಾರ್ಗೋಪಾಯಗಳನ್ನು ಹೊಂದಿದ ತಂತ್ರಜ್ಞಾನಾಧರಿತ ಉದ್ದಿಮೆಗಳನ್ನು ರಾಜ್ಯದಲ್ಲಿ ಆರಂಭಿಸಲು ನೆದರ್‌ಲ್ಯಾಂಡ್ಸ್‌ ಮುಂದೆ ಬಂದಲ್ಲಿ ಕರ್ನಾಟಕ ಸರ್ಕಾರ ಎಲ್ಲ ರೀತಿಯ ಪ್ರೋತ್ಸಾಹ ನೀಡಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಗಳ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ಹೇಳಿದರು.


ನೆದರ್‌ಲ್ಯಾಂಡ್ಸ್‌ ದೇಶದ ಭಾರತದ ರಾಯಭಾರಿಗಳ ಬೆಂಗಳೂರು ಪ್ರತಿನಿಧಿಗಳಾದ ಶ್ರೀ ಎವೋಟ್‌ ಡೇ ವಿಥ್‌ ಹಾಗೂ ಅವರ ತಂಡದೊಂದಿಗೆ ಸಭೆ ನಡೆಸಿದ ಸಚಿವರು ಬೆಂಗಳೂರು ಅಥವ ರಾಜ್ಯದ ಯಾವುದೇ ಸ್ಥಳಗಳಲ್ಲಿ ಮಾಹಿತಿ ತಂತ್ರಜ್ಞಾನ ಆಧಾರಿತ ಸಂಸ್ಥೆಗಳನ್ನು ಆರಂಭಿಸಲು ಮುಂದೆ ಬಂದಲ್ಲಿ ಎಲ್ಲ ರೀತಿಯ ಮೂಲಭೂತ ಸೌಲಭ್ಯಗಳನ್ನು ಕರ್ನಾಟಕ ಸರ್ಕಾರ ಒದಗಿಸಿಕೊಡಲಿದೆ ಎಂದರು. ಫಿಲಿಪ್ಸ್‌ ಕಂಪೆನಿಯ ಪ್ರತಿನಿಧಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಬೆಂಗಳೂರು ಮೆಟ್ರೋ ನಿರ್ಮಾಣದ ವೇಗವನ್ನು ವೃದ್ಧಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.


ನೆದರ್‌ಲ್ಯಾಂಡ್ಸ್ ದೇಶದ 40ಕ್ಕೂ ಹೆಚ್ಚು ಮಾಹಿತಿ ತಂತ್ರಜ್ಞಾನ ಆಧಾರಿತ ಹಾಗೂ ಇನ್ನಿತರ ಕಂಪೆನಿಗಳು ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಶ್ರೀ ಎವೋಟ್‌ ಡೇ ವಿಥ್‌ ಅವರು ಸಚಿವರಿಗೆ ಹೇಳಿದರಲ್ಲದೆ ಈ ಡಚ್‌ ಕಂಪೆನಿಗಳಲ್ಲಿ ಕರ್ನಾಟಕದ ಸುಮಾರು 10,000 ಮಂದಿ ಉದ್ಯೋಗಸ್ಥರಾಗಿದ್ದಾರೆ ಎಂದೂ ತಿಳಿಸಿದರು.
ಸಚಿವ ಶ್ರೀ ಪ್ರಿಯಾಂಕ್‌ ಖರ್ಗೆ ಅವರು ಜರ್ಮನಿ ರಾಯಭಾರಿಗಳ ಬೆಂಗಳೂರು ಪ್ರತಿನಿಧಿಗಳಾದ ಶ್ರೀ ಅಚೀಮ್‌ ಬರ್ಕಾರ್ಟ್‌ ಅವರೊಂದಿಗೆ ಪ್ರತ್ಯೇಕ ಸಭೆ ನಡೆಸಿ, ರಾಜ್ಯದಲ್ಲಿ ಐಟಿ ಎಂಜನಿಯರ್‌ಗಳಿಗೆ ಉದ್ಯೋಗಾವಕಾಶ ಕಲ್ಪಿಸುವಲ್ಲಿ ಜರ್ಮನಿ ಆಧಾರಿತ ಕಂಪೆನಿಗಳು ಆದ್ಯತೆ ನೀಡಬೇಕೆಂದು ತಿಳಿಸಿದರಲ್ಲದೆ ರಾಜ್ಯದಲ್ಲಿ ಐಟಿ ಕ್ಷೇತ್ರದ ಮತ್ತಷ್ಟು ಬೆಳವಣಿಗೆಗಾಗಿ ಸಲಹೆಗಳನ್ನು ನೀಡಬೇಕೆಂದು ಕೇಳಿದರು.


ಸಚಿವ ಶ್ರೀ ಪ್ರಿಯಾಂಕ್‌ ಖರ್ಗೆ ಆವರು ಭಾರತದಲ್ಲಿನ ಅಮೆರಿಕ ಚೇಂಬರ್‌ ಆಫ್‌ ಕಾಮರ್ಸ್‌ ಪ್ರತಿನಿಧಿಗಳೊಂದಿಗೆ ಸಹ ಸಭೆ ನಡೆಸಿದರು. ಮುಂದಿನ ದಶಕಗಳನ್ನು ದೃಷ್ಟಿಯಲ್ಲಿರಿಸಿಕೊಂಡು ತಂತ್ರಜ್ಞಾನ ಅಭಿವೃದ್ಧಿಪಡಿಸುವ ಸವಾಲುಗಳು ನಮ್ಮ ಮುಂದೆ ಇದೆ ಎಂದು ಸಚಿವರು ಈ ಸಂದರ್ಭದಲ್ಲಿ ತಿಳಿಸಿ, ಬ್ರಾಂಡ್‌ ಬೆಂಗಳೂರು ಸೃಜಿಸುವಲ್ಲಿ ಅಗತ್ಯ ಸಲಹೆಗಳನ್ನು ನೀಡುವಂತೆ ಕೋರಿದರು. ಸಂಸ್ಥೆಯ ಕರ್ನಾಟಕದ ನಿರ್ದೇಶಕರಾದ ಶ್ರೀ ಅಂಶುಮಾನ್‌ ಅಪ್ಪಣ್ಣ ಹಾಗು ಪ್ರತಿನಿಧಿಗಳು ಚರ್ಚೆಯಲ್ಲಿ ಪಾಲ್ಗೊಂಡಿದ್ದರು.


ಸಭೆಗಳಲ್ಲಿ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಗಳ ಸಚಿವರಾದ ಶ್ರೀ ರಮಣರೆಡ್ಡಿ ಹಾಗೂ ಇನ್ನಿತರ ಅಧಿಕಾರಿಗಳು ಪಾಲ್ಗೊಂಡಿದ್ದರು.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version