ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಆರೆಸ್ಸೆಸ್ ಪಥಸಂಚಲನಕ್ಕೆ ಸರ್ಕಾರದ ಪೂರ್ವಾನುಮತಿ ಕಡ್ಡಾಯ: ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ

P

Peepal Media • ರಾಜ್ಯ

• 1 ನಿಮಿಷದ ಓದು

ಆರೆಸ್ಸೆಸ್ ಪಥಸಂಚಲನಕ್ಕೆ ಸರ್ಕಾರದ ಪೂರ್ವಾನುಮತಿ ಕಡ್ಡಾಯ: ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ

ಬೆಂಗಳೂರು: ದಸರಾ ಮಹೋತ್ಸವದ ಅಂಗವಾಗಿ ಕರ್ನಾಟಕದಾದ್ಯಂತ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್ಸೆಸ್) ನಡೆಸಲು ಉದ್ದೇಶಿಸಿರುವ ಪಥಸಂಚಲನಗಳಿಗೆ ಸಂಬಂಧಿಸಿದಂತೆ, ಕೇವಲ ಗೃಹ ಇಲಾಖೆಗೆ “ಮಾಹಿತಿ ನೀಡುವುದು” ಅಥವಾ “ವ್ಯವಸ್ಥೆ ಮಾಡುವಂತೆ ತಿಳಿಸುವುದು” ಅನುಮತಿ ಪಡೆದಂತಾಗುವುದಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಎಲ್ಲಾ ಸಂಘ-ಸಂಸ್ಥೆಗಳಿಗೆ ಅನ್ವಯವಾಗುವಂತೆ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಿ, ಸಕ್ಷಮ ಪ್ರಾಧಿಕಾರದಿಂದ ಕಾನೂನುಬದ್ಧ ಅನುಮತಿ ಪಡೆಯುವುದು ಕಡ್ಡಾಯ ಎಂದು ಅವರು ಸಾಮಾಜಿಕ ಜಾಲತಾಣದ ಮೂಲಕ ನೇರ ಎಚ್ಚರಿಕೆ ರವಾನಿಸಿದ್ದಾರೆ.

ಆರೆಸ್ಸೆಸ್‌ನ ಸ್ವಯಂಸೇವಕರನ್ನು ಉದ್ದೇಶಿಸಿ ವ್ಯಂಗ್ಯ ಹಾಗೂ ಗಂಭೀರ ಧಾಟಿಯಲ್ಲಿ ಸಂದೇಶ ಬರೆದಿರುವ ಸಚಿವರು, ಸಂಘದ ಅಖಿಲ ಭಾರತೀಯ ಪ್ರತಿನಿಧಿ ಸಭೆಯ 2025–26ರ ವಾರ್ಷಿಕ ವರದಿಯನ್ನೇ ಉಲ್ಲೇಖಿಸಿದ್ದಾರೆ. ಆ ವರದಿಯ ಪ್ರಕಾರ, ಕರ್ನಾಟಕದಾದ್ಯಂತ 2,21,963 ಸಮವಸ್ತ್ರಧಾರಿ ಸ್ವಯಂಸೇವಕರು ಪಾಲ್ಗೊಂಡಿದ್ದ ಬರೋಬ್ಬರಿ 562 ಪಥಸಂಚಲನಗಳನ್ನು ಆರೆಸ್ಸೆಸ್ ನಡೆಸಿದೆ. ಹೀಗೆ ಒಂದೇ ದಿನ ಲಕ್ಷಾಂತರ ಮಂದಿ ಏಕಕಾಲದಲ್ಲಿ ಬೀದಿಗಿಳಿದು ಪಥಸಂಚಲನ ನಡೆಸುವಾಗ ಪೊಲೀಸ್ ಇಲಾಖೆಯ ಮೇಲೆ ಭಾರಿ ಭದ್ರತಾ ಜವಾಬ್ದಾರಿ ಇರುತ್ತದೆ ಎಂದು ಅವರು ವಿವರಿಸಿದ್ದಾರೆ.

ಸಿಬ್ಬಂದಿ ನಿಯೋಜನೆ, ಸಾರಿಗೆ, ಆಹಾರ, ಸಂಚಾರ ನಿರ್ವಹಣೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವುದು ಸೇರಿದಂತೆ ವ್ಯಾಪಕ ಸಿದ್ಧತೆಗಳಿಗಾಗಿ ಸಾರ್ವಜನಿಕ ಸಂಪನ್ಮೂಲ ಮತ್ತು ಅಪಾರ ಮಾನವಶಕ್ತಿ ವ್ಯಯವಾಗುತ್ತದೆ. ಆದ್ದರಿಂದ ಕೇವಲ ಗೃಹ ಇಲಾಖೆಗೆ ಸಹಕರಿಸುವಂತೆ ಪತ್ರ ಬರೆಯುವ ಬದಲು, ನಿಗದಿತ ನಿಯಮಾವಳಿಗಳ ಪ್ರಕಾರ ಅಗತ್ಯ ವಿವರಗಳನ್ನು ಒಳಗೊಂಡ ಅರ್ಜಿಯನ್ನು ಸಲ್ಲಿಸಿ, ಸರ್ಕಾರದ ಅಧಿಕೃತ ಅನುಮತಿ ಬರುವವರೆಗೆ ಕಾಯಬೇಕು ಎಂದು ಅವರು ತಿಳಿಸಿದ್ದಾರೆ.

https://x.com/PriyankKharge/status/2112473602675409033?s=20

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version