ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅಭ್ಯರ್ಥಿಗಳಿಗೆ ಆದೇಶ ಹೊರಡಿಸಲು ನಿಯಮಾನುಸಾರ ಕ್ರಮಕೈಗೊಳ್ಳಿ : ಸಚಿವ ಡಾ. ಸುಧಾಕರ್ ಸೂಚನೆ

PPeepal Media Desk

Peepal Media Desk • ರಾಜ್ಯ

• 1 ನಿಮಿಷದ ಓದು

ಅಭ್ಯರ್ಥಿಗಳಿಗೆ ಆದೇಶ ಹೊರಡಿಸಲು ನಿಯಮಾನುಸಾರ ಕ್ರಮಕೈಗೊಳ್ಳಿ : ಸಚಿವ ಡಾ. ಸುಧಾಕರ್ ಸೂಚನೆ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ತ್ವರಿತವಾಗಿ ನೇಮಕಾತಿ ಆದೇಶ ನೀಡಲು ಕ್ರಮಕೈಗೊಳ್ಳುವಂತೆ ಉನ್ನತ ಶಿಕ್ಷಣ ಇಲಾಖೆಯ
ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಸೂಚಿಸಿದ್ದಾರೆ.

ದಿನಾಂಕ: 12.10.2023 ರಂದು ಪತ್ರ ಬರೆದಿರುವ ಸಚಿವರು ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಬರುವ ಕಾಲೇಜು ಶಿಕ್ಷಣ ಇಲಾಖೆಯಲ್ಲಿ 1242 ಸಹಾಯಕ ಪ್ರಾಧ್ಯಾಪಕರನ್ನು ನೇರ ನೇಮಕಾತಿ ಮಾಡಿಕೊಳ್ಳಲು ಆದೇಶಿಸಲಾಗಿತ್ತು. ಅದರಂತೆ 2021ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸ್ಪರ್ಧಾತ್ಮಕ ಪರೀಕ್ಷೆ ಮುಖಾಂತರ 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನಿಯಮಾನುಸಾರ ಆಯ್ಕೆ ಮಾಡಿ ಸರ್ಕಾರಕ್ಕೆ ಸಲ್ಲಿಸಿರುವುದು ಕಂಡುಬಂದಿದೆ.

ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಾಲಾದ ಪ್ರಕರಣವು ಬಾಕಿಯಿದ್ದು, ಈಗಾಗಲೇ ದೋಷಿಗಳನ್ನು ಗುರುತಿಸಿ ಅವರ ಮೇಲೆ ಮೊಕದ್ದಮೆ ದಾಖಲಿಸಿ, ದೋಷಾರೋಪಣ ಪಟ್ಟಿ ಸಲ್ಲಿಸಲಾಗಿದ್ದು, ಆರೋಪಿಗಳು ನ್ಯಾಯಾಲಯದಲ್ಲಿ ಜಾಮೀನನ್ನು ಪಡೆದಿದ್ದು ಪ್ರಕರಣವು ವಿಚಾರಣೆಯಲ್ಲಿರುತ್ತದೆ.

ಇದಲ್ಲದೇ ಪ್ರಸಕ್ತ ನೇಮಕಾತಿಗೆ ಸಂಬಂಧಿಸಿದಂತೆ ಬೇರೆ ಯಾವುದೇ ಪ್ರಕರಣಗಳು ತನಿಖಾಧಿಕಾರಿಗಳ ಮುಂದೆ ಇರುವುದಿಲ್ಲವೆಂದು ಹಾಗೂ ಮೀಸಲಾತಿ ಸಂಬಂಧಪಟ್ಟ, ಪ್ರಕರಣವು ನ್ಯಾಯಾಲಯದಲ್ಲಿ ಇತ್ತೀಚೆಗೆ ಇತ್ಯರ್ಥವಾಗಿರುವುದು ತಿಳಿದುಬಂದಿದೆ. ಈ ಸಂಬಂಧ ಆಯ್ಕೆಯಾದ ಅಭ್ಯರ್ಥಿಗಳು ನನಗೆ ಹಾಗೂ ಜನಪ್ರತಿನಿಧಿಗಳಿಗೆ ಅನೇಕ ಮನವಿಗಳನ್ನು ಸಲ್ಲಿಸಿ, ಕೂಡಲೇ ನೇಮಕಾತಿ ಆದೇಶ ಹೊರಡಿಸುವಂತೆ ಕೋರಿರುತ್ತಾರೆ.

ಸದರಿ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿ ಮೂರು ವರ್ಷಗಳು ಸಮೀಪಿಸುತ್ತಿದ್ದು, ಇನ್ನು ವಿಳಂಬಕ್ಕೆ ಅವಕಾಶ ನೀಡದ ಆಯ್ಕೆಯಾದ ಅಭ್ಯರ್ಥಿಗಳಿಗೆ ಆದೇಶ ಹೊರಡಿಸಲು ನಿಯಮಾನುಸಾರ ಕೈಗೊಳ್ಳಬೇಕಾದ ಪೂರ್ವಭಾವಿ ಎಲ್ಲಾ ಅಗತ್ಯ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಸೂಚಿಸಿದ್ದಾರೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು