ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಜ್ಯದ ರೈತರ ಹಿತ ಕಾಯುವಂತೆ ಸಿಎಂಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪತ್ರ

P

Peepal Media Desk • ರಾಜ್ಯ

• 1 ನಿಮಿಷದ ಓದು

ರಾಜ್ಯದ ರೈತರ ಹಿತ ಕಾಯುವಂತೆ ಸಿಎಂಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪತ್ರ

ಬೆಂಗಳೂರು: ತಮಿಳುನಾಡು ಸರ್ಕಾರ ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಮತ್ತೆ ಕ್ಯಾತೆ ತೆಗೆದಿದ್ದು, ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ರಾಜ್ಯದ ರೈತರ ಹಿತ ಕಾಯಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ನಾಯಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೆ ಪತ್ರ ಬರೆದಿದ್ದಾರೆ.
ತಮಿಳುನಾಡು ಸರ್ಕಾರ ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಮತ್ತೆ ಕ್ಯಾತೆ ತೆಗೆದಿದ್ದು ನಿಮ್ಮ ಗಮನಕ್ಕೆ ಬಂದಿದೆ ಎಂದು ಭಾವಿಸಿದ್ದೇನೆ ಹಾಗೂ ತಮಿಳುನಾಡು ಸುಪ್ರಿಂ ಕೋರ್ಟ್ ಗೆ ಹೋಗಬಹುದೆಂದು ಮಾಧ್ಯಮದಲ್ಲಿ ನಾವು ನೋಡಿದ್ದೇವೆ. ಈ ವಿಚಾರದಲ್ಲಿ ಕೆಳಕಂಡ ಮಹತ್ವದ ವಾಸ್ತವಿಕ ಅಂಶಗಳನ್ನು ಇಟ್ಟುಕೊಂಡು ಬರುವ ದಿನಗಳಲ್ಲಿ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕೆಂದು ನಾನು ಈ ಪತ್ರ ಬರೆಯುತ್ತಿದ್ದೇನೆ‌.
ಜೂನ್ 1 ರಂದು ಕರ್ನಾಟಕದ ನಾಲ್ಕು ಜಲಾಶಯಗಳಲ್ಲಿ ಒಟ್ಟು 24.352 ಟಿಎಂಸಿ ನೀರಿತ್ತು. ಅದೇ ರೀತಿ ಮೆಟ್ಟೂರು ಜಲಾಶಯದಲ್ಲಿ 69.77 ಟಿಎಂಸಿ, ಭವಾನಿ ಸಾಗರ ಜಲಾಶಯದಲದಲಿ 16.653 ಟಿಎಂಸಿ ಇದ್ದು, ಬಿಳಿಗುಂಡ್ಲು ಮಾಪನ ಕೇಂದ್ರದಿಂದ 6-8-2023 ಕ್ಕೆ 14.054 ಟಿಎಂಸಿ ನೀರು ಹೋಗಿರುವುದು ಮಾಧ್ಯಮಗಳಿಂದ ಗೊತ್ತಾಗಿದೆ. ಒಟ್ಟು ತಮಿಳುನಾಡಿದ ಮೆಟ್ಟೂರು ಡ್ಯಾಮನಲ್ಲಿ ಈ ವರ್ಷ 83.831ಟಿಎಂಸಿ ನೀರು ಬಂದಿರುತ್ತದೆ.
ತಮಿಳುನಾಡು ಕುರುವೈ ಬೆಳೆಗೆ 1 ಲಕ್ಷ ಎಂಬತ್ತು ಸಾವಿರ ಎಕರೆ ಬೆಳೆ ಸಿಡಬ್ಲುಡಿಟಿ ಪಕ್ರಾರ ಬೆಲೆಯಬೇಕು ಹಾಗೂ 32 ಟಿಎಂಸಿ ನೀರು ಬಳಸಬೇಕು. ಆದರೆ, ತಮಿಳುನಾಡು 7-8-23 ಕ್ಕೆ 60.97 ಟಿಎಂಸಿ ನೀರು ಕುರುವೈ ಬೆಳೆಗೆ ಬಳಕೆ ಮಾಡಿದ್ದು ಸಿಡಬ್ಲುಡಿಟಿ ಆದೇಶದ ಎರಡು ಪಟ್ಡು ಹೆಚ್ಚಾಗಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಕೊರತೆ ಇರುವುದನ್ನು ‌ಲೆಕ್ಕಿಸದೇ ಸಿಡಬ್ಲುಡಿಟಿ ಆದೇಶ ಉಲ್ಲಂಘನೆ ಮಾಡಿ ನಾಲ್ಕು ಪಟ್ಡು ಕುರುವೈ ಏರಿಯಾ ಬೆಳೆಗೆ ನೀರನ್ನು ಒದಗಿಸಿದೆ. ಇದನ್ನು ನಮ್ಮ ಅಧಿಕಾರಿಗಳು ಸಿಡಬ್ಲುಎಂಎದಲ್ಲಿ ಪ್ರತಿಭಟಿಸದೇ ಸುಮ್ಮನೆ ಇದ್ದದ್ದು ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗಿದೆ.
ಈಗಿರುವ ನಮ್ಮ ನಾಲ್ಕು ಡ್ಯಾಮ್ ಗಳ ನಿರಿನ ಮಟ್ಟ ಬೆಂಗಳೂರು ನಗರ, ಕಾವೇರಿ ಜಲಾನಯನ ಪ್ರದೇಶದ ನಗರ ಮತ್ತು ಗ್ರಾಮಗಳ ಕುಡಿಯುವ ನೀರಿಗೆ ಕೊರತೆಯಾಗುತ್ಗದೆ. ಅದೇ ರೀತಿ ಕಾವೇರಿ ‌ಜಲಾನಯನ ಪ್ರದೇಶದ ಕರೀಫ್ ಬೆಳೆಗಳಿಗೆ ನಿರಿನ ಕೊರತೆಯಾಗುತ್ತದೆ. ಹೀಗಾಗಿ ನೀರು ಬಿಡುವುದು ಕರ್ನಾಟಕದ ಜನತೆ ಮತ್ತು ರೈತರನ್ನು ಸಂಕಷ್ಟಕ್ಕೆ ಈಡು ಮಾಡುತ್ತದೆ.
ತಮಿಳುನಾಡಿಗೆ ಸೌಥ್ ವೆಸ್ಟ್ ಮತ್ತು ನಾರ್ಥ್ ಈಸ್ಟ್ ಮಾನಸೂನ್ ಮಳೆ ಆಗುತ್ತಿರುವುದರಿಂದ ನಮಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಈ ವಾಸ್ತವಾಂಶದ ಮೇಲೆ ನಾವು ಗಟ್ಟಿ ನಿಲುವು ತೆಗೆದುಕೊಳ್ಳಬೇಕೆಂದು ನಾನು ತಮ್ಮಲ್ಲಿ ಆಗ್ರಹ ಮಾಡುತ್ತೇನೆ. ಹಾಗು ತಾವು ಕಾವೇರಿ ಜಲಾನಯನ ಪ್ರದೇಶದ ನೀರಿನ ಹಿತಾಸಕ್ತಿ ಕಾಪಾಡುತ್ತೀರೆಂದು ನಂಬಿರುವೆ ಎಂದು ಪತ್ರದ ಮೂಲಕ ತಿಳಿಸಿದ್ದಾರೆ‌

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version