ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಳಪೆ ಗುಣಮಟ್ಟದ ಜೋಳದ ಬೀಜ ವಿತರಣೆ ಜು.7 ಕ್ಕೆ ಪ್ರತಿಭಟನೆ – ಕಣಗಾಲ್ ಮೂರ್ತಿ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಕಳಪೆ ಗುಣಮಟ್ಟದ ಜೋಳದ ಬೀಜ ವಿತರಣೆ ಜು.7 ಕ್ಕೆ ಪ್ರತಿಭಟನೆ – ಕಣಗಾಲ್ ಮೂರ್ತಿ

ರೈತರಿಗೆ ಪರಿಹಾರ ನೀಡಲು ಆಗ್ರಹಿಸಿ ಜು.೭ ರಂದು ಪ್ರತಿಭಟನೆ: ಕಣಗಾಲ್ ಮೂರ್ತಿ

ಹಾಸನ : ಸರ್ಕಾರವು ಕಂಪನಿಗಳ ಮೂಲಕ ರೈತರಿಗೆ ಕಳಪೆ ಗುಣಮಟ್ಟದ ಜೋಳದ ಬೀಜ ನೀಡಲಾಗಿದ್ದು, ಜಿಲ್ಲಾದ್ಯಂತ ಬೆಳೆಗೆ ಆಗಿರುವ ನಷ್ಟದ ಬಗ್ಗೆ ಪರಿಹಾರ ನೀಡಲು ಆಗ್ರಹಿಸಿ ನಗರದ ಸಂತೇಪೇಟೆ ವೃತ್ತದ ಬಳಿ ಇರುವ ಜಂಟಿ ಕೃಷಿ ನಿರ್ದೇಶಕರ ಕಛೇರಿ ಆವರಣ, ರೈತರಿಂದ ಜುಲೈ 7ರ ಸೋಮವಾರದಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಕಣಗಾಲ್ ಮೂರ್ತಿ ತಿಳಿಸಿದರು.

  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗ್ಯಾರಂಟಿ ರಾಮಣ್ಣ, ಮಂಜು ಬಿಟ್ಟಗೌಡನಹಳ್ಳಿ ಇವರ ನೇತೃತ್ವದಲ್ಲಿ ಹೇಮಾವತಿ ಪ್ರತಿಮೆ ಮುಂಭಾಗದಿಂದ ಮೆರವಣಿಗೆ ಹೊರಡಲಿದೆ. ಪ್ರತಿಭಟನೆಯಲ್ಲಿ

ರೈತರ ಪ್ರಮುಖ ಬೇಡಿಕೆಗಳು ಅಧಿಕೃತವಾಗಿ ಸರ್ಕಾರದ ಬಿಡ್ಡಿಗೆ ಮತ್ತು ಕೃಷಿ ಇಲಾಖೆಗೆ ಸರಬರಾಜು ಮಾಡದೆ ಇರುವ ಕಂಪನಿಗಳ ಜೊತೆ ಕೃಷಿ ನಿರ್ದೇಶಕರು ಶಾಮಿಲಾಗಿ ರೈತರಿಗೆ ಕಳಪೆ ಬೀಜ ನೀಡಿರುವ ಮತ್ತು ಕಂಪನಿಯವರು ರೈತರಿಗೆ ಜಂಟಿ ಕೃಷಿ ನಿರ್ದೇಶಕರ ನೇತೃತ್ವದಲ್ಲಿ ನಷ್ಟವನ್ನು ತುಂಬಿಕೊಡಬೇಕು. ಸಾಮೂಹಿಕವಾಗಿ ರೈತರಿಗೆ ಜಿಲ್ಲಾಡಳಿತ ವತಿಯಿಂದ ಉಚಿತವಾಗಿ ಬೆಳೆ ವಿಮೆ ಮಾಡಿಕೊಡಬೇಕು ಎಂದರು. ಕಳಪೆ ಬೀಜವನ್ನು ಕೃಷಿ ಇಲಾಖೆಯವರ ಹೆಸರು ಬಳಸಿಕೊಂಡು ಪ್ರಚಾರದಲ್ಲಿ ತೊಡಗಿರುವರ ವಿರುದ್ಧ ಮೊಕದ್ದಮೆ ದಾಖಲಿಸಿ ಮತ್ತು ಕೃಷಿ ಇಲಾಖೆಗೆ ಸರಬರಾಜು ಮಾಡದೆ ಇರುವ ಕಂಪನಿಯವರನ್ನು ಅಂಗಡಿ ಮುಖಾಂತರ ಮಾರುವುದನ್ನು ನಿರ್ಬಂಧಿಸಬೇಕು. ಬೆಳೆ ಸಮೀಕ್ಷೆಯನ್ನು ತಾಲ್ಲೂಕು ಆಡಳಿತ ಅಧಿಕಾರಿಗಳು ಮತ್ತು ಕೃಷಿ ಇಲಾಖೆಯ ಅಧಿಕಾರಿಗಳು ಜೊತೆಗೂಡಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಪ್ರತಿ ಹಳ್ಳಿಗಳಲ್ಲಿಯೂ ಸಮೀಕ್ಷೆ ನಡೆಸಿ ವರದಿಯನ್ನು ಜಿಲ್ಲಾಡಳಿತಕ್ಕೆ ಮಾಡಿಸಬೇಕು ಎಂದು ಒತ್ತಾಯಿಸಿದರು. ಬೆಳೆ ನಾಶವಾಗಿರುವ ರೈತರಿಗೆ ಕಂಪನಿಯವರಿಂದಲೆ ಕೃಷಿ ಇಲಾಖೆಯವರು ಪ್ರತಿ ಎಕರೆಗೆ ೫೦ ಸಾವಿರ ರೂ. ಪರಿಹಾರವನ್ನು ಕೊಡಿಸಿಕೊಡಬೇಕು ಹಾಗೂ ಹಾಸನ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಹೆಸರನ್ನು ಅವರ ಅನುಮತಿ ಇಲ್ಲದೆ ಬಳಸಿಕೊಂಡು ಕರಪತ್ರವನ್ನು ಮುದ್ರಿಸಿ ಇಲಾಖೆಯನ್ನು ದುರುಪಯೋಗ ಪಡಿಸಿಕೊಂಡಿರುವ ಬಿತ್ತನೆ ಬೀಜದ ಹೈಟೆಕ್ ಕಂಪನಿ ಮತ್ತು ಏಜೆನ್ಸಿ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ಎಲ್ಲಾ ವಿಚಾರಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ರಾಜ್ಯ ರೈತ ಸಂಘ ಸಾಮೂಹಿಕ ನಾಯಕತ್ವದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೋರಾಟದ ಉದ್ದೇಶವನ್ನು ತಿಳಿಸಿದರು.

  ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಮರ್ಕುಲಿ ಪ್ರಕಾಶ್, ಹಾಸನ ತಾಲೂಕು ಅಧ್ಯಕ್ಷ ಬಿಟ್ಟಗೌಡನಹಳ್ಳಿ ಮಂಜುನಾಥ್, ಪಾಲಾಕ್ಷ ಮಾರನಹಳ್ಳಿ, ಶಿವಕುಮಾರ್ ಹಳೇಬೀಡು, ಶೇಷಣ್ಣ, ಕಾಂತರಾಜು ಇತರರು ಉಪಸ್ಥಿತರಿದ್ದರು.
ವಿಷಯಗಳು: #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು