ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಗಬ್ಬು ನಾರುತ್ತಿರುವ ಬೇಲೂರು ಬಸ್ ನಿಲ್ದಾಣದ ಶೌಚಾಲಯ ಬೀಗ ಜಡಿದ ಸಾರ್ವಜನಿಕರು

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ • ರಾಜ್ಯ

• 1 ನಿಮಿಷದ ಓದು

ಗಬ್ಬು ನಾರುತ್ತಿರುವ ಬೇಲೂರು ಬಸ್ ನಿಲ್ದಾಣದ ಶೌಚಾಲಯ ಬೀಗ ಜಡಿದ ಸಾರ್ವಜನಿಕರು

ಬೇಲೂರು : ಕಳೆದ ಒಂದು ವಾರದಿಂದ ತಾಲೂಕಿನಾದ್ಯಂತ ಬಾರಿ ಮಳೆಯಾಗುತ್ತಿದ್ದು ಅದರಂತೆ ಬೇಲೂರು ಬಸ್ ನಿಲ್ದಾಣದ ಶೌಚಾಲಯದಲ್ಲಿ ನೀರಿಲ್ಲದೆ ಸ್ವಚ್ಚತೆ ಇಲ್ಲದೆ ಗಬ್ಬುನಾರುತ್ತಿದೆ. ಇದರ ಜೊತೆಯಲ್ಲಿ ಶೌಚಾಲಯದ ನೀರು ಹಾಗು ಹೊಟೇಲ್ ತ್ಯಾಜ್ಯದ ನೀರು ಬಸ್ ನಿಲ್ದಾಣದ ಹೊರಗೆ ಹರಿದು ಬಂದು ಆಟೋ ನಿಲ್ದಾಣಕ್ಕೆ ಶೇಕರಣೆಯಾಗು ತ್ತಿದೆ.ಇದರಿಂದ ವಿಪರೀತ ಗಬ್ಬು ನಾರುತ್ತಿದ್ದು ಇದರ ಬಗ್ಗೆ ಕೆ ಎಸ್ ಆರ್ ಟಿ ಸಿ ಅಧಿಕಾರಿಗಳಿಗೆ ಎಷ್ಟು ಮನವಿ ಮಾಡಿದರು ಇದರ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಆಕ್ರೋಶಗೊಂಡ ಸಾರ್ವಜನಿಕರು ಹಾಗು ಆಟೋ ಚಾಲಕರು ನಿಲ್ದಾಣದ ಮೇಲ್ವೀಚಾರಕರನ್ನು ಕರೆದು ಶೌಚಾಲಯಕ್ಕೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು‌.

ಈ ವೇಳೆ ಮಾತನಾಡಿದ ಆಟೋ ಚಾಲಕರಾದ ಚಂದ್ರು ಹಾಗೂ ಕೇಶವ ಮಾತನಾಡಿ ಕಳೆದ ಒಂದು ವಾರದಿಂದ ಬಸ್ ನಿಲ್ದಾಣದ  ಶೌಚಾಲಯದ ನೀರು ಹೊರ ಭಾಗದಲ್ಲಿ ಹರಿದು ಬರುತ್ತಿದ್ದು ಆಟೋ ಚಾಲಕರಿಗೆ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.ಇದರ ಜೊತೆಯಲ್ಲಿ ಹೊಟೇಲ್ ತ್ಯಾಜ್ಯ ನೀರು ಇಲ್ಲಿಗೆ ಬಂದು ಗುಂಡಿಯಲ್ಲಿ ಶೇಕರಣೆಯಾಗಿ ಗಬ್ಬು ನಾರುತ್ತಿದ್ದು ಎರಡು ದಿನಗಳ ಹಿಂದಷ್ಟೆ ಪುರಸಭೆ ಅದ್ಯಕ್ಷರು ಕೆ ಎಸ್ ಆರ್ ಟಿ ಸಿ ಅಧಿಕಾರಿಗಳಿಗೆ ತಿವ್ರ ತರಾಟೆಗೆ ತೆಗೆದುಕೊಂಡು ಪುರಸಭೆ ವತಿಯಿಂದ ಗುಂಡಿ ಮುಚ್ಚಿಸಿದ್ದರು.ಆದರೆ ಇಲ್ಲಿಯ ಅಧಿಕಾರಿಗಳು ಜಡ್ಡು ಹಿಡಿದು ಕೂತಿದ್ದು ಶೌಚಾಲಯದ ನೀರು ಸಾರ್ವಜನಿಕರು ತಿರುಗಾಡುವ ಪುಟ್ ಪಾತ್ ಮೇಲೆ ಹರಿಯುತ್ತಿದೆ ಇದರಿಂದ ಬರುವ ಪ್ರವಾಸಿಗರಿಗೆ ಜನರಿಗೆ ಹಾಗು ಆಟೋ ಚಾಲಕರಿಗೆ ತುಂಬಾ ತೊಂದರೆಯಾಗುತ್ತಿದ್ದು ಕೂಡಲೆ ಇದನ್ನು ಸರಿಪಡಿಸಬೇಕು.ಈ ಹಿಂದೆ ಶಾಸಕರು ಸಹ ಇವರಿಗೆ ತರಾಟಗೆ ತೆಗೆದುಕೊಂಡು ಕೆಲಸ ಮಾಡಲು ಸೂಚಿಸಿದ್ದಾದರೂ ಕೆಲಸ ಮಾಡದೆ ಶೌಚಾಲಯದ ನೀರನ್ನು ಹೊರಗೆ ಬಿಟ್ಟಿದ್ದು ಅದನ್ನು ದುರಸ್ಥಿಗೊಳಿಸುವ ವರೆಗೂ ಶೌಚಾಲಯದ ಬಾಗಿಲು ತೆಗೆಯಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಈ ಹಿಂದೆ ಸಾರ್ವಜನಿಕರ ದೂರಿನ ಹಿನ್ನಲೆ ನಾನೆ ಸ್ಥಳಕ್ಕೆ ಬಂದು ಪರಿಸ್ಥಿತಿ ಬಗ್ಗೆ ಡಿಪೊ ವ್ಯವಸ್ಥಾಪಕರು ಹಾಗು ಡಿಸಿಯವರಿಗೆ ಇದರ ಬಗ್ಗೆ ಮಾಹಿತಿ ನೀಡಿ ಸರಿಪಡಿಸುವಂತೆ ತಿಳಿಸಿದ್ದೆ ಇಂದೇ ಇದರ ಬಗ್ಗೆ ಮತ್ತೆ ಎಚ್ಚರಿಕೆ ನೀಡುತ್ತಿದ್ದು ಕೂಡಲೆ ಶೌಚಾಲಯವನ್ಬು ದುರಸ್ಥಿಗೊಳಿಸಲು ತಿಳಿಸುತ್ತಿದ್ದು ನಾನು ಸ್ಥಳಕ್ಕೆ ಬರುವಷ್ಟರಲ್ಲಿ ಅಲ್ಲಿಯ ಸಮಸ್ಯೆ ಬಗೆಹರಿದಿರಬೇಕೆಂದು ಶಾಸಕ ಹೆಚ್ ಕೆ ಸುರೇಶ್ ಎಚ್ಚರಿಸಿದರು.

ಈ ಸಂದರ್ಭದಲ್ಲಿ ಆಟೋ ಚಾಲಕರಾದ ಅಣ್ಣಪ್ಪ,ಪರಮೇಶ್ ದೇವರಾಜ್,ವಿನಯ್,ಜಯಣ್ಣ,ರವಿ,ರಂಜಿತ್,ಯೊಗೇಶ್ ,ಹಾಗು ಸಾರ್ವಜನಿಕರು ಹಾಜರಿದ್ದರು.

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು