ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಎಲ್ಲರಿಗೂ‌ ಗ್ಯಾರಂಟಿ ಕೊಡ್ತೀವಿ ಎಂದು, ಈಗ ಉಳ್ಳವರು ಬಿಟ್ಟುಕೊಡಿ ಎನ್ನುವುದು ತಪ್ಪು: ಆರ್‌ ಅಶೋಕ್

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಎಲ್ಲರಿಗೂ‌ ಗ್ಯಾರಂಟಿ ಕೊಡ್ತೀವಿ ಎಂದು, ಈಗ ಉಳ್ಳವರು ಬಿಟ್ಟುಕೊಡಿ ಎನ್ನುವುದು ತಪ್ಪು: ಆರ್‌ ಅಶೋಕ್

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರವು ಚುನಾವಣಾ ಪೂರ್ವದಲ್ಲಿ ಗ್ಯಾರಂಟಿಗಳನ್ನು ಘೋಷಿಸುವಾಗ ಉಳ್ಳವರಿಗೂ ಸೌಲಭ್ಯ ನೀಡುವುದಾಗಿ ಭರವಸೆ ನೀಡಿತ್ತು, ಆದರೆ ಈಗ ಅವುಗಳನ್ನು ಬಿಟ್ಟುಕೊಡಿ ಎಂದು ಕೇಳುತ್ತಿರುವುದು ತಪ್ಪು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದ್ದಾರೆ. ಪ್ರಧಾನಿ ಮೋದಿ ಅವರು ಸಬ್ಸಿಡಿ ಬಿಟ್ಟುಕೊಡಲು ಕರೆ ನೀಡಿದ್ದು ಜನಹಿತಕ್ಕಾಗಿ, ಆದರೆ ಕಾಂಗ್ರೆಸ್ ಮತಕ್ಕಾಗಿ ಗ್ಯಾರಂಟಿ ಘೋಷಿಸಿ ಈಗ ಆರ್ಥಿಕ ಸಂಕಷ್ಟ ಎದುರಾದಾಗ ಉಳ್ಳವರ ಮೇಲೆ ಗೂಬೆ ಕೂರಿಸುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಆರ್ಥಿಕ ಶಿಸ್ತು ತಪ್ಪಿದ ಸರ್ಕಾರ:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆ ಮಟ್ಟದಲ್ಲಿ ಸಾಲ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅಶೋಕ್, ಈ ಸರ್ಕಾರದ ಅವಧಿ ಮುಗಿಯುವ ವೇಳೆಗೆ ರಾಜ್ಯದ ಒಟ್ಟು ಸಾಲ 6 ಲಕ್ಷ ಕೋಟಿ ರೂಪಾಯಿ ತಲುಪಲಿದೆ ಎಂದು ಎಚ್ಚರಿಸಿದರು. ಇದರರ್ಥ ರಾಜ್ಯದ ಪ್ರತಿಯೊಬ್ಬ ಪ್ರಜೆಯ ಮೇಲೆ ಸರಾಸರಿ 1 ಲಕ್ಷ ರೂಪಾಯಿ ಸಾಲದ ಹೊರೆ ಬೀಳಲಿದೆ. ಗುತ್ತಿಗೆದಾರರಿಗೆ ನೀಡಬೇಕಾದ 37,000 ಕೋಟಿ ರೂ. ಬಾಕಿ ಹಣವನ್ನು ಪಾವತಿಸದೆ ಸರ್ಕಾರ ಆಡಳಿತಾತ್ಮಕವಾಗಿ ವೈಫಲ್ಯ ಕಂಡಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

ಸದನದಲ್ಲಿ ಹೋರಾಟದ ಎಚ್ಚರಿಕೆ:

ಮುಂಬರುವ ಬಜೆಟ್ ಅಧಿವೇಶನದಲ್ಲಿ ಸರ್ಕಾರದ ಪ್ರತಿಯೊಂದು ಲೋಪದೋಷಗಳನ್ನು ಎತ್ತಿ ತೋರಿಸಲಾಗುವುದು ಎಂದು ಅಶೋಕ್ ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಕ್ರಮ, ಬೆಂಗಳೂರಿನ ಕಸದ ಸಮಸ್ಯೆ, ಕಂದಾಯ ಇಲಾಖೆಯ ಇ-ಖಾತಾ ಗೊಂದಲ ಹಾಗೂ ಹಿಂದೂಗಳ ಮೇಲೆ ನಡೆಯುತ್ತಿರುವ ಹಲ್ಲೆಗಳ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆ ನಡೆಸುವುದಾಗಿ ಅವರು ಹೇಳಿದರು. ಕಾಂಗ್ರೆಸ್ ಒಂದು ಒಡೆದ ಮನೆಯಾಗಿದ್ದು, ಶಾಸಕರೇ ಬೀದಿಗಿಳಿದು ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿರುವುದು ಸರ್ಕಾರದ ಅಂತ್ಯ ಸಮೀಪಿಸಿರುವುದಕ್ಕೆ ಸಾಕ್ಷಿ ಎಂದರು.

ಸಿಎಂ-ಡಿಸಿಎಂ ಶೀತಲ ಸಮರ:

ಇದೇ ಸಂದರ್ಭದಲ್ಲಿ ಅತ್ಯಂತ ಗಂಭೀರ ಆರೋಪ ಮಾಡಿದ ಅಶೋಕ್, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಚಟುವಟಿಕೆಗಳ ಮೇಲೆ ನಿಗಾ ಇಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್ಪಿ ನೇತೃತ್ವದ ಅನಧಿಕೃತ ತಂಡವೊಂದನ್ನು ರಚಿಸಿದ್ದಾರೆ ಎಂದು ದೂರಿದರು. ಫೋನ್ ಟ್ಯಾಪಿಂಗ್ ಮತ್ತು ಅನುದಾನ ಕಡಿತದ ಮೂಲಕ ಡಿಸಿಎಂ ಅವರನ್ನು ನಿಯಂತ್ರಿಸುವ ಪ್ರಯತ್ನ ನಡೆಯುತ್ತಿದೆ, ಇದು ಸರ್ಕಾರದ ಒಳಗಿನ ಆಂತರಿಕ ಕಿತ್ತಾಟವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಲೇವಡಿ ಮಾಡಿದರು.


PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು