ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹೌಸಿಂಗ್‌ ಬೋರ್ಡ್‌ ʼಮನಿ ಕೊಟ್ಟರೆ ಮನೆ’ ಎಂದು ತನ್ನ ಸ್ಲೋಗನ್‌ ಬದಲಾಯಿಸಿಕೊಳ್ಳಲಿ: ಆರ್‌ ಅಶೋಕ

P

Peepal Media • ರಾಜ್ಯ

• 1 ನಿಮಿಷದ ಓದು

ಹೌಸಿಂಗ್‌ ಬೋರ್ಡ್‌ ʼಮನಿ ಕೊಟ್ಟರೆ ಮನೆ’ ಎಂದು ತನ್ನ ಸ್ಲೋಗನ್‌ ಬದಲಾಯಿಸಿಕೊಳ್ಳಲಿ: ಆರ್‌ ಅಶೋಕ

ಬೆಂಗಳೂರು: “ಬಡವರಿಗೆ ಆಹಾರ ಕೊಡಿ ಎಂದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಬಡವರ ಮನೆಗಳಿಗೆ ಕೈ ಹಾಕುತ್ತಿದೆ” ಎಂದು ವಿಪಕ್ಷ ನಾಯಕ ಆರ್. ಅಶೋಕ್ ತೀವ್ರ ವಿಮರ್ಶೆ ನಡೆಸಿದ್ದಾರೆ. ʼಮನಿ ಕೊಟ್ಟರೆ ಮನೆ’ ಎಂಬುದು ಇಂದು ಹೌಸಿಂಗ್ ಬೋರ್ಡ್‌ನ ಹೊಸ ಸೂತ್ರವಾಗಿದ್ದು, ಇದಕ್ಕೆ ಪಕ್ಷದ ಹಿರಿಯ ಶಾಸಕ ಬಿ.ಆರ್. ಪಾಟೀಲ್ ಅವರ ಆರೋಪಗಳೇ ಸಾಕ್ಷಿಯಾಗಿವೆ ಎಂದು ಆರೋಪಿಸಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗೇಳುತ್ತಿದ್ದು, ಮಾತು ಮತ್ತು ಕ್ರಿಯೆಯಲ್ಲಿ ಸಮನ್ವಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಬಕಾರಿ ಇಲಾಖೆ ಮತ್ತು ವಾಲ್ಮೀಕಿ ನಿಗಮದ ನಂತರ ಈಗ ವಸತಿ ಇಲಾಖೆಯಲ್ಲೂ ಭ್ರಷ್ಟಾಚಾರ ತಲೆದೋರಿದ್ದು, ಮನೆ ನೀಡಲು ಹಣ ಕೇಳುತ್ತಿರುವ ಸುದ್ದಿಗಳು ಚರ್ಚೆಯಾಗುತ್ತಿವೆ ಎಂದು ತಿಳಿಸಿದರು.

ರಾಜೀವ್ ಗಾಂಧಿ ವಸತಿ ಯೋಜನೆ, ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ವಸತಿ ಯೋಜನೆ ಸೇರಿದಂತೆ ಎಲ್ಲಾ ವಸತಿ ಯೋಜನೆಗಳಲ್ಲಿ ಆಯೋಗದ ಮೂಲಕ ಹಣ ಲೂಟಿ ನಡೆಯುತ್ತಿದ್ದು, ಇದುವರೆಗೆ 2,137.44 ಕೋಟಿ ರೂಪಾಯಿ ಕಮಿಷನ್‌ ಲೂಟಿ ಮಾಡಲಾಗಿದೆ ಎಂದು ಆರೋಪಿಸಿದರು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಧಮ್ ಮತ್ತು ತಾಕತ್ ಇದ್ದರೆ, ಬಿ.ಆರ್. ಪಾಟೀಲ್ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಸವಾಲು ಹಾಕಿದರು.

ಈ ಸರ್ಕಾರ ತನ್ನ ಮಾತಿಗೆ ತಕ್ಕಂತೆ ಕೆಲಸ ಮಾಡುತ್ತಿಲ್ಲ, ಕಾಂಗ್ರೆಸ್ ಹೈಕಮಾಂಡ್‌ಗೆ ಕಪ್ಪುಹಣ ಸಲ್ಲಿಸಲು ರಾಜ್ಯ ಸರ್ಕಾರ ಲೂಟಿಯಲ್ಲಿ ತೊಡಗಿದೆ ಎಂದು ಆರೋಪಿಸಿದ ಅವರು, ವಸತಿ ಹಂಚಿಕೆಯಲ್ಲಿ ನಡೆಯುತ್ತಿರುವ ಹಗರಣ ಇದರ ಒಂದು ಭಾಗವಷ್ಟೇ ಎಂದು ಹೇಳಿದರು.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version