ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹಲವು ಶಾಸಕರ ಆಕ್ಷೇಪದ ನಡುವೆಯೂ ಆರ್ ಅಶೋಕ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸಿದ ಬಿಜೆಪಿ

PPeepal Media Desk

Peepal Media Desk • ರಾಜ್ಯ

• 1 ನಿಮಿಷದ ಓದು

ಹಲವು ಶಾಸಕರ ಆಕ್ಷೇಪದ ನಡುವೆಯೂ ಆರ್ ಅಶೋಕ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸಿದ ಬಿಜೆಪಿ

ಬೆಂಗಳೂರು: ಆರು ತಿಂಗಳ ವಿಳಂಬದ ನಂತರ ಬಿಜೆಪಿ ಶುಕ್ರವಾರ ಮಾಜಿ ಉಪಮುಖ್ಯಮಂತ್ರಿ ಆರ್ ಅಶೋಕ ಅವರನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕನ್ನಾಗಿ ಘೋಷಿಸಿದೆ. ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕನ ಆಯ್ಕೆ ಇನ್ನಷ್ಟೇ ಆಗಬೇಕಿದೆ. ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಪಕ್ಷದ ವೀಕ್ಷಕರು ಕೆಲವು ಶಾಸಕರ ಜತೆ ಒಂದೊಂದು ಸಭೆ ನಡೆಸಿದ ಬಳಿಕ ಈ ಘೋಷಣೆ ಮಾಡಲಾಗಿದೆ. ವಿಧಾನ ಪರಿಷತ್ತಿಗೆ ಕೋಟ ಶ್ರೀನಿವಾಸ ಪೂಜಾರಿಯವರ ಹೆಸರು ಬಹುತೇಕ ಫೈನಲ್‌ ಆಗಿದೆ

ಬೆಂಗಳೂರಿನ ಪದ್ಮನಾಭ ನಗರ ಶಾಸಕ ಆರ್ ಅಶೋಕ ಅವರು ಉಪಮುಖ್ಯಮಂತ್ರಿ, ಗೃಹ ಸಚಿವ, ಕಂದಾಯ ಸಚಿವ ಹಾಗೂ ವಿರೋಧ ಪಕ್ಷದ ಉಪನಾಯಕರಾಗಿ ಸೇವೆ ಸಲ್ಲಿಸಿದ್ದರು. ಬಸವರಾಜ ಬೊಮ್ಮಾಯಿ ಸರಕಾರದಲ್ಲಿ ಕಂದಾಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಮುಂದಿನ ವರ್ಷಾರಂಭದಲ್ಲಿ ನಡೆಯಲಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆ ಮತ್ತು ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪಕ್ಷಕ್ಕೆ ನಿರ್ಣಾಯಕವಾಗಲಿರುವ ಒಕ್ಕಲಿಗ ನಾಯಕತ್ವವನ್ನು ಗಮನದಲ್ಲಿಟ್ಟುಕೊಂಡು ಈ ಆಯ್ಕೆಯನ್ನು ಮಾಡಲಾಗಿದೆ.

ಲಿಂಗಾಯತ ಮುಖಂಡ ಬಿ.ವೈ.ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಒಕ್ಕಲಿಗ ನಾಯಕ ಆರ್.ಅಶೋಕ ಅವರನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸಿದೆ. ಪರಿಷತ್ತಿನಲ್ಲಿ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ನಾಯಕರಿಗೆ ಪಕ್ಷವು ಪ್ರಾತಿನಿಧ್ಯ ನೀಡುವ ಸಾಧ್ಯತೆಯಿದೆ. ಕೋಟ ಶ್ರೀನಿವಾಸ ಪೂಜಾರಿ ಅವರು ಈ ಹುದ್ದೆಗೆ ಮುಂಚೂಣಿಯಲ್ಲಿದ್ದಾರೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು