ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಆರ್.ದ್ರುವನಾರಾಯಣ್ ಮಾದರಿ ಜನನಾಯಕರು. ಕಾಲಾನಂತರವೂ ಅವರ ಜನಪ್ರಿಯತೆ ಬೆಳೆಯುತ್ತಿದೆ: ಸಿ.ಎಂ.ಸಿದ್ದರಾಮಯ್ಯ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಆರ್.ದ್ರುವನಾರಾಯಣ್ ಮಾದರಿ ಜನನಾಯಕರು. ಕಾಲಾನಂತರವೂ ಅವರ ಜನಪ್ರಿಯತೆ ಬೆಳೆಯುತ್ತಿದೆ: ಸಿ.ಎಂ.ಸಿದ್ದರಾಮಯ್ಯ

ಚಾಮರಾಜನಗರ ಮಾ 12: ಆರ್.ದ್ರುವನಾರಾಯಣ್ ಅವರು ಮಾದರಿ ಜನನಾಯಕರಾಗಿದ್ದರು. ಕಾಲಾನಂತರವೂ ಅವರ ಜನಪ್ರಿಯತೆ ಬೆಳೆಯುತ್ತಿದೆ ಎಂದು ಸಿ.ಎಂ. ಸಿದ್ದರಾಮಯ್ಯ ಅವರು ಸ್ಮರಿಸಿದರು.

ದಿವಂಗತ ಆರ್.ದ್ರುವನಾರಾಯಣ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮಕ್ಕಾಗಿ ಚಾಮರಾಜನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹೆಗ್ಗವಾಡಿಗೆ ತೆರಳಿ ದ್ರುವನಾರಾಯಣ್ ಅವರ ಸಮಾಧಿಗೆ ನಮನ ಸಲ್ಲಿಸಿದರು. ಬಳಿಕ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸಿ ಅವರ ಭಾಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ಕ್ಷೇತ್ರದ ಅಭಿವೃದ್ಧಿ ಮತ್ತು ಚಾಮರಾಜನಗರ ಜಿಲ್ಲೆಯ ಪ್ರಗತಿ ನಿರಂತರ ಪ್ರಯತ್ನ ಮಾಡಿದ್ದ ದ್ರುವನಾರಾಯಣ್ ಅವರು ಜನರ ಮಧ್ಯ ಓಡಾಡದ ದಿನವೇ ಇಲ್ಲ. ಇವರದ್ದು ಜನಪರ ರಾಜಕಾರಣಕ್ಕೆ ಮಾದರಿ ವ್ಯಕ್ತಿತ್ವ ಎಂದರು.

ಕಾಂಗ್ರೆಸ್ ಸಿದ್ಧಾಂತ ಮತ್ತು ಕಾಂಗ್ರೆಸ್ ಪಕ್ಷದ ಆಸ್ತಿಯಾಗಿದ್ದ ದ್ರುವನಾರಾಯಣ್ ಅವರು ವಿದ್ಯಾರ್ಥಿ ಕಾಂಗ್ರೆಸ್ ಅವಧಿಯಿಂದ ಪಕ್ಷದ ಕಾರ್ಯಾಧ್ಯಕ್ಷರಾಗುವವರೆಗೂ ಬೆಳೆದರು. ಶಾಸಕರಾಗಿ, ಸಂಸದರಾಗಿ ಕ್ಷೇತ್ರದ ಅಭಿವೃದ್ಧಿಗೆ ನಿರಂತರ ಶ್ರಮಿಸಿದವರು. ಹೀಗಾಗಿ ಇವರ ಅಗಲಿಕೆ ಕೇವಲ ಕಾಂಗ್ರೆಸ್ ಪಕ್ಷಕ್ಕೆ ಮಾತ್ರವಲ್ಲ, ಕನ್ನಡ ನಾಡಿಗೆ ತುಂಬಲಾರದ ನಷ್ಟ ಆಗಿದೆ ಎಂದರು.

ಅಜಾತಶತ್ರು ಆಗಿದ್ದು ದ್ರುವನಾರಾಯಣ್ ಅವರ ವ್ಯಕ್ತಿತ್ವವನ್ನೇ ಅವರ ಪುತ್ರ ಶಾಸಕ ದರ್ಶನ್ ದ್ರುವನಾರಾಯಣ್ ಅವರೂ ಹೊಂದಿದ್ದು ಜನಪರತೆ ಬೆಳೆಸಿಕೊಂಡಿದ್ದಾರೆ. ಇವರಿಗೆ ನಾನು ಸಂಪೂರ್ಣ, ಸಹಕಾರ, ಬೆಂಬಲ ನೀಡುತ್ತೇನೆ ಎಂದರು.

ರಾಜಕಾರಣಿಗೆ ಸೈದ್ಧಾಂತಿಕ ಸ್ಪಷ್ಟತೆ ಮತ್ತು ಬದ್ಧತೆ ಅತ್ಯಗತ್ಯ. ದ್ರುವನಾರಾಯಣ್ ಅವರಿಗೆ ಇವೆರಡೂ ಇತ್ತು. ಸಮಾಜದ ಅಸಮಾನತೆ ಅಳಿಸಲು, ದುರ್ಬಲರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕೆಲಸವನ್ನು ಅವರು ಮಾಡುತ್ತಿದ್ದರು.

ಅಂಬೇಡ್ಕರ್ ಅವರ ಸಂವಿಧಾನದ ಬಗ್ಗೆ ದ್ರುವನಾರಾಯಣ್ ಅಪಾರವಾದ ನಂಬಿಕೆ, ಗೌರವ ಹೊಂದಿದ್ದರು. ಈಗ ಈ ಸಂವಿಧಾನವನ್ನು ಬದಲಾಯಿಸುವ ಪ್ರಯತ್ನಗಳು ನಡೆಯುತ್ತಿವೆ. ಸಂವಿಧಾನ ಉಳಿದರೆ ಮಾತ್ರ ನಾವೂ ನೀವೂ ಉಳಿಯುತ್ತೇವೆ ಎಂದು ಎಚ್ಚರಿಸಿದರು.

ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್, ಶಾಸಕ ದರ್ಶನ್ ದ್ರುವನಾರಾಯಣ್, ಅನಿಲ್ ಚಿಕ್ ಮಾದು, ರವಿಶಂಕರ್, ಮಾಜಿ ಶಾಸಕರಾದ ಯತೀಂದ್ರ ಸಿದ್ದರಾಮಯ್ಯ ಸೇರಿ ಮೈಸೂರು, ಚಾಮರಾಜನಗರ ಜಿಲ್ಲೆಯ ಶಾಸಕರುಗಳು, ಮುಖಂಡರು ಮತ್ತು ಜಿಲ್ಲಾ ಮುಖಂಡರುಗಳು ಉಪಸ್ಥಿತರಿದ್ದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು