ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ

ದ್ವೇಷ ಸೋತಿದೆ, ಪ್ರೀತಿ ಗೆದ್ದಿದೆ; 5 ಗ್ಯಾರಂಟಿಯನ್ನು ಈಡೇರಿಸುತ್ತೇವೆ : ರಾಹುಲ್‌ ಗಾಂಧಿ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ದ್ವೇಷ ಸೋತಿದೆ, ಪ್ರೀತಿ ಗೆದ್ದಿದೆ; 5 ಗ್ಯಾರಂಟಿಯನ್ನು ಈಡೇರಿಸುತ್ತೇವೆ : ರಾಹುಲ್‌ ಗಾಂಧಿ

ದ್ವೇಷ ಸೋತಿದೆ, ಪ್ರೀತಿ ಗೆದ್ದಿದೆ, ರಾಜ್ಯದ ಜನತೆಯ ಹಿತಾಸಕ್ತಿಗಾಗಿ ನೀಡಿದ್ದ 5 ಗ್ಯಾರಂಟಿಯನ್ನು ಈಡೇರಿಸುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಬ್ಬರದ ಭಾಷಣ ಮಾಡಿದ್ದಾರೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ಈ ಸಂದರ್ಭದಲ್ಲಿ ನಿಮ್ಮೆಲ್ಲರಿಗೂ ಹೃದಯಪೂರ್ವಕ ನಮನಗಳು. ನೀವೆಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಬಹುದೊಡ್ಡ ಬಹುಮತ ನೀಡಿದ್ದೀರಿ. ಕಳೆದ ಐದು ವರ್ಷಗಳಲ್ಲಿ ಎದುರಾದ ಸಮಸ್ಯೆಗಳನ್ನು ನಾವು ಕಂಡಿದ್ದೇವೆ. ಕಾಂಗ್ರೆಸ್ ಪಕ್ಷಕ್ಕೆ ಯಾಕೆ ಇಷ್ಟು ದೊಡ್ಡ ಗೆಲುವು ಸಿಕ್ಕಿದೆ ಎಂದು ಮಾಧ್ಯಮಗಳಲ್ಲಿ ವಿಶ್ಲೇಷಣೆ ನೋಡಿದ್ದೀರಿ. ಅನೇಕರು ಅನೇಕ ಬಗೆಯ ವಿಶ್ಲೇಷಣೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಈ ಗೆಲವು ಸಿಗಲು ಕಾರಣ ಎಂದರೆ ಕಾಂಗ್ರೆಸ್ ಪಕ್ಷ ರಾಜ್ಯದ ಬಡವರು, ರೈತರು, ಕಾರ್ಮಿಕರು, ಶೋಷಿತರು, ದಲಿತರ ಬೆನ್ನಿಗೆ ನಿಂತಿರುವುದು.

ನಮ್ಮ ಬಳಿ ಸತ್ಯ ಹಾಗೂ ಬಡ ಜನರಿದ್ದರು. ಬಿಜೆಪಿ ಬಳಿ ಹಣ, ಅಧಿಕಾರ, ಪೊಲೀಸ್ ಅಧಿಕಾರಿಗಳು ಎಲ್ಲವೂ ಇತ್ತು. ಅವರ ಈ ಎಲ್ಲಾ ಶಕ್ತಿಗಳನ್ನು ಕರ್ನಾಟಕದ ಜನ ಮಣಿಸಿದ್ದಾರೆ. ಜನ ಅವರ ಭ್ರಷ್ಟಾಚಾರ, ದ್ವೇಷವನ್ನು ಮಣಿಸಿದ್ದೀರಾ. ಈ ಚುನಾವಣೆಯಲ್ಲಿ ರಾಜ್ಯದ ಜನ ದ್ವೇಷವನ್ನು ಒಡೆದೋಡಿಸಿ ಪ್ರೀತಿ ಸಾಮರಸ್ಯಕ್ಕೆ ಗೆಲುವು ತಂದುಕೊಟ್ಟಿದ್ದಾರೆ. ದ್ವೇಷದ ಮಾರುಕಟ್ಟೆಯಲ್ಲಿ ಕರ್ನಾಟಕದ ಜನ ಪ್ರೀತಿ ಸಾಮರಸ್ಯದ ಅಂಗಡಿ ತೆರೆದಿದ್ದಾರೆ. ಕಳೆದ ಐದು ವರ್ಷಗಳಿಂದ ನೀವು ಭ್ರಷ್ಟಾಚಾರ ನೋಡಿದ್ದೀರಿ.

ನಾವು ನಿಮಗೆ ಐದು ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ್ದೆವು. ಗೃಹಲಕ್ಷ್ಮೀ ಯೋಜನೆ ಮೂಲಕ ಪ್ರತಿ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ಪ್ರೋತ್ಸಾಹಧನ, ಗೃಹಜ್ಯೋತಿ ಮೂಲಕ ಪ್ರತಿ ತಿಂಗಳು 200 ಯೂನಿಟ್ ವಿದ್ಯುತ್ ಉಚಿತ, ಅನ್ನಭಾಗ್ಯ ಯೋಜನೆ ಮೂಲಕ ಬಡ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 10 ಕೆ.ಜಿ ಅಕ್ಕಿ ಪ್ರತಿ ತಿಂಗಳು ಉಚಿತ, ಯುವನಿಧಿ ಮೂಲಕ ಪದವೀಧರ ನಿರುದ್ಯೋಗ ಯುವಕರಿಗೆ ಪ್ರತಿ ತಿಂಗಳು 3 ಸಾವಿರ, ಡಿಪ್ಲೋಮಾ ಪದವೀಧರರಿಗೆ 1500 ರೂ. ನಿರುದ್ಯೋಗ ಭತ್ಯೆ. ನಂತರ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಸಂಚಾರ ವ್ಯವಸ್ಥೆ.

ನಾವು ಸುಳ್ಳು ಆಶ್ವಾಸನೆ ನೀಡುವುದಿಲ್ಲ. ಕೊಟ್ಟ ಮಾತನ್ನು ನಾವು ಉಳಿಸಿಕೊಳ್ಳುತ್ತೇವೆ. ನುಡಿದಂತೆ ನಡೆಯುತ್ತೇವೆ. ಮುಂದಿನ ಕೆಲವೇ ಗಂಟೆಗಳಲ್ಲಿ ರಾಜ್ಯದ ನೂತನ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಈ ಐದೂ ಗ್ಯಾರಂಟಿ ಯೋಜನೆಗಳು ಕಾನೂನು ರೂಪಪಡೆದು ಜಾರಿಗೆ ಬರಲಿದೆ. ನಾವು ಹೇಳಿದ್ದನ್ನು ಮಾಡಿ ತೋರಿಸುತ್ತೇವೆ. ಸರ್ಕಾರದ ಆದ್ಯತೆ ರೈತರು, ಕಾರ್ಮಿಕರು, ಸಣ್ಣ ವ್ಯಾಪಾರಿಗಳು, ಯುವಕರ ಹಿತ ಕಾಪಾಡಿ ಅವರ ಭವಿಷ್ಯ ಭದ್ರಗೊಳಿಸುವುದಾಗಿದೆ.

ನಾವು ರಾಜ್ಯದಲ್ಲಿ ಭ್ರಷ್ಟಾಚಾರಮುಕ್ತ ಸರ್ಕಾರ ನೀಡುತ್ತೇವೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪ್ರೀತಿ ಹಾಗೂ ಶಕ್ತಿ ನೀಡಿರುವ ರಾಜ್ಯದ ಎಲ್ಲಾ ಜನರಿಗೆ ಧನ್ಯವಾದ ತಿಳಿಸುತ್ತೇನೆ. ಈ ಸರ್ಕಾರ ರಾಜ್ಯದ ಜನರ ಸರ್ಕಾರ, ನಿಮ್ಮ ಸರ್ಕಾರ. ಈ ಸರ್ಕಾರ ಮನಪೂರ್ವಕವಾಗಿ ನಿಮಗಾಗಿ ದುಡಿಯಲಿದ್ದಾರೆ ಎಂದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು