ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಜ್ಯದಲ್ಲಿ ಮಳೆಯ ಮುನ್ಸೂಚನೆ, 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ರಾಜ್ಯದಲ್ಲಿ ಮಳೆಯ ಮುನ್ಸೂಚನೆ, 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು : ಕರ್ನಾಟಕದ(Karnataka) ಹಲವು ಭಾಗಗಳಲ್ಲಿ ಜೂನ್ 9 ರಿಂದ ಜೂನ್ 13 ರವರೆಗೆ ವ್ಯಾಪಕ ಮಳೆಯಾಗುವ(Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ರಾಜ್ಯದ 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌(Orange alert) ಹಾಗೂ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌(Yellow alert) ಜಾರಿಗೊಳಿಸಲಾಗಿದೆ. ಬೆಂಗಳೂರು ಹವಾಮಾನ ಕೇಂದ್ರದ ವಿಜ್ಞಾನಿ ಸಿಎಸ್ ಪಾಟೀಲ್ ಅವರು ರಾಜ್ಯದ ಪ್ರಸ್ತುತ ಹವಾಮಾನ ಪರಿಸ್ಥಿತಿಯ ಕುರಿತು ಪ್ರಮುಖ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

ಕರಾವಳಿ ಭಾಗದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಈ ಐದು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಭಾರಿ ಹಾಗೂ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಜೂನ್ 9 ರಿಂದ 11 ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈಗಾಗಲೇ ಉತ್ತರ ಕನ್ನಡ ಜಿಲ್ಲೆಯ ಮಂಕಿಯಲ್ಲಿ ಭಾರಿ ಮಳೆಯಾಗಿರುವುದು ವರದಿಯಾಗಿದೆ.

ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಜೂನ್ 9 ರಿಂದ 11 ರವರೆಗೆ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬೀದರ್, ಕಲಬುರಗಿ, ಯಾದಗಿರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಇದೇ ಅವಧಿಯಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.

ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆಯು ಸಾರ್ವಜನಿಕರಿಗೆ ಮತ್ತು ಅಧಿಕಾರಿಗಳಿಗೆ ಕೆಲವು ಪ್ರಮುಖ ಮಾರ್ಗಸೂಚಿಗಳನ್ನು ನೀಡಿದೆ. ಸಾರ್ವಜನಿಕರು ತಮ್ಮ ಮನೆಗಳ ಸೋರಿಕೆ ತಡೆಗಟ್ಟಲು, ಶಿಥಿಲಗೊಂಡ ಕಚ್ಚಾ ಮನೆಗಳಲ್ಲಿದ್ದರೆ ಬೇರೆಡೆಗೆ ಸ್ಥಳಾಂತರಗೊಳ್ಳಲು ಸೂಚಿಸಲಾಗಿದೆ. ಮಳೆ ಹಾಗೂ ಗಾಳಿಯ ಸಮಯದಲ್ಲಿ ಮರ ಅಥವಾ ವಿದ್ಯುತ್ ಕಂಬಗಳ ಕೆಳಗೆ ನಿಲ್ಲಬಾರದು ಮತ್ತು ಜಲಾವೃತಗೊಂಡ ರಸ್ತೆ ಹಾಗೂ ಸೇತುವೆಗಳ ಮೇಲೆ ಸಂಚರಿಸಬಾರದು ಎಂದು ಎಚ್ಚರಿಸಲಾಗಿದೆ.

ಮತ್ತೊಂದೆಡೆ, ಮುನ್ನೆಚ್ಚರಿಕಾ ಕ್ರಮವಾಗಿ ಅಗ್ನಿಶಾಮಕದಳ, ಪೊಲೀಸ್, ಲೋಕೋಪಯೋಗಿ ಮತ್ತು ಎಲ್ಲಾ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಸನ್ನದ್ಧರಾಗಿರಲು ಆದೇಶಿಸಲಾಗಿದೆ. ಅಧಿಕಾರಿಗಳು ಮತ್ತು ಸಿಬ್ಬಂದಿ ರಜೆ ಪಡೆಯದೆ ಕೇಂದ್ರ ಸ್ಥಾನದಲ್ಲೇ ಇರಬೇಕು ಹಾಗೂ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆ ಮತ್ತು ಅಗತ್ಯ ಔಷಧಿಗಳ ದಾಸ್ತಾನು ಸಿದ್ಧವಾಗಿಟ್ಟುಕೊಳ್ಳಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು