ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಜಕಾರಣಿಗಳು ತಾಕತ್ತನ್ನು ಜನರ ಸಂಕಷ್ಟ ದೂರ ಮಾಡುವುದರಲ್ಲಿ ತೋರಿಸಬೇಕು : ಸಿಎಂ

P

Peepal Media Desk • ರಾಜ್ಯ

• 1 ನಿಮಿಷದ ಓದು

ರಾಜಕಾರಣಿಗಳು ತಾಕತ್ತನ್ನು ಜನರ ಸಂಕಷ್ಟ ದೂರ ಮಾಡುವುದರಲ್ಲಿ ತೋರಿಸಬೇಕು : ಸಿಎಂ

ಬೆಂಗಳೂರು : ಚಿತ್ರದುರ್ಗದಲ್ಲಿ ಇಂದು ಸಮುದಾಯ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ ಸಿಎಂ ಬೊಮ್ಮಾಯಿ ಜಿಲ್ಲೆಯಲ್ಲಿ ಶಿಕ್ಷಣ, ಆರೋಗ್ಯ, ರೈತರ ಬೆಳೆಹಾನಿಯ ಬಗ್ಗೆ ಮಾತನಾಡಿದ್ದಾರೆ.

ಕಾರ್ಯಕ್ರಮದಲ್ಲಿ ಮಳೆಯಿಂದ ರೈತರಿಗಾಗಿರುವ ಬೆಳೆಹಾನಿಯ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ʼವಾಣಿವಿಲಾಸ ಜಲಾಶಯದಿಂದ 1 ಟಿಎಂಸಿ ನೀರನ್ನು ಕುಡಿಯು ನೀರಿಗೆ ಬಳಸಿಕೊಳ್ಳಲು ಕ್ರಮ ಕೈಗೊಳ್ಳಲಾಯಿತು. ಹನಿ ನೀರಾವರಿ, ಕೆರೆ ತುಂಬಿಸುವ ಯೋಜನೆಗಳಿಂದ ಬರಗಾಲವನ್ನು ಹೆಚ್ಚು ಎದುರಿಸುವ ಈ ತಾಲ್ಲೂಕಿಗೆ ನೀಡಲಾಗುತ್ತಿದೆ. ಈ ಭಾಗದ ರೈತರಿಗೆ 73 ಸಾವಿರ ರೈತರಿಗೆ 105 ಕೋಟಿ ರೂ. ಪರಿಹಾರ ಬಿಡುಗಡೆಯಾಗಿದೆ. ಮನೆ ಹಾನಿ ಪರಿಹಾರವಾಗಿ 4.55  ಕೋಟಿ ರೂ. ಬಿಡುಗಡೆಯಾಗಿದೆ ಎಂದು ಹೇಳಿದರು.

ನಮ್ಮ ಸರ್ಕಾರದ ಅವಧಿಯಲ್ಲಿ ಕೇಂದ್ರ ಸರ್ಕಾರದ ಪರಿಹಾರದ ಜೊತೆಗೆ ರಾಜ್ಯ ಸರ್ಕಾರದ ಮೊತ್ತವನ್ನು ಸೇರಿಸಿ ದುಪ್ಪಟ್ಟು ಪರಿಹಾರ ನೀಡಲಾಗುತ್ತಿದೆ. ಪರಿಹಾರದ ಮೊತ್ತ ಒಂದೂವರೆ ತಿಂಗಳೊಳಗಾಗಿ ಡಿಬಿಡಿ ಮುಖಾಂತರ ರೈತರಿಗೆ ತಲುಪಿಸಲಾಗುತ್ತಿದೆ. ನಮ್ಮ ಸರ್ಕಾರ ಬಂದ ಮೇಲೆ 5 ಲಕ್ಷ ಮನೆ ನಿರ್ಮಾಣ ಮಾಡಿದ್ದೇವೆ. ಈ ತಾಲ್ಲೂಕಿನಲ್ಲಿ ಸ್ಲಂ ಬೋರ್ಡ್ 700 ಮನೆಗಳನ್ನು  ಹಾಗೂ ಗ್ರಾಮೀಣ ಪ್ರದೇಶದಲ್ಲಿ 1000 ಮನೆಗಳನ್ನು ನೀಡಿದ್ದೇವೆ ಎಂದರು.

ಹೊಸದುರ್ಗಕ್ಕೆ ಸ್ವಚ್ಛಭಾರತ ಯೋಜನೆಯಡಿ ಘನತ್ಯಾಜ್ಯ ನಿರ್ವಹಣೆಯಲ್ಲಿ ರಾಷ್ಟ್ರ ಪ್ರಶಸ್ತಿ ದೊರೆತಿದೆ. ಹಿಂದಿನ ಸರ್ಕಾರಗಳಿಗೆ ಈ ಪ್ರದೇಶಕ್ಕೆ ಕುಡಿಯುವ ನೀರನ್ನೂ ಕೊಡಲು ಸಾಧ್ಯವಾಗಲಿಲ್ಲ. ಕೇವಲ ಬಾಯಿಮಾತಿನಲ್ಲಿ ತಾಕತ್ತು ತೋರಿಸುವ ಬಹಳಷ್ಟು ಮಂದಿ ಇದ್ದಾರೆ. ಒಬ್ಬ ರಾಜಕಾರಣಿ ತನ್ನ ತಾಕತ್ತನ್ನು ಜನರ ಸಂಕಷ್ಟಗಳನ್ನು ದೂರ ಮಾಡುವುದರಲ್ಲಿ ತೋರಿಸಬೇಕು. ಜನರಿಗೆ ಕುಡಿಯುವ ನೀರು, ರಸ್ತೆ, ಬಡವರಿಗೆ ಮನೆ , ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸುವುದು ನಿಜವಾದ ತಾಕತ್ತು. ಶಿಕ್ಷಣ, ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ರೈತರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ, 6 ಲಕ್ಷ ರೈತಕೂಲಿ ಕಾರ್ಮಿಕರಿಗೆ ಈ ವರ್ಷ ವಿದ್ಯಾನಿಧಿಯನ್ನು ನೀಡಲಾಗುತ್ತಿದೆ.ನೇಕಾರರು, ಮೀನುಗಾರರು, ಆಟೋ, ಟ್ಯಾಕ್ಸಿ ಚಾಲಕರ ಮಕ್ಕಳಿಗೆ ವಿದ್ಯಾನಿಧಿ ನೀಡಲಾಗುತ್ತಿದೆ. ಎಸ್ ಸಿ ಎಸ್ಟಿ ಜನಾಂಗಕ್ಕೆ 75 ಯೂನಿಟ್ ಉಚಿತ ವಿದ್ಯುತ್, ಭೂಮಿ ಖರೀದಿಗೆ 20 ಲಕ್ಷ ರೂ.ನೀಡಲಾಗುತ್ತಿದೆ ಎಂದು ಮಾತನಾಡಿದರು.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version