ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಜ್ಯ ಬಿಜೆಪಿಗೆ ಸರ್ಕಾರಿ ಶಾಲೆಗಳನ್ನು ನಡೆಸುವ ಯೋಗ್ಯತೆ ಇಲ್ಲ : ಡಿಕೆಶಿ

P

Peepal Media Desk • ರಾಜ್ಯ

• 1 ನಿಮಿಷದ ಓದು

ರಾಜ್ಯ ಬಿಜೆಪಿಗೆ ಸರ್ಕಾರಿ ಶಾಲೆಗಳನ್ನು ನಡೆಸುವ ಯೋಗ್ಯತೆ ಇಲ್ಲ : ಡಿಕೆಶಿ

ಬೆಂಗಳೂರು : ರಾಜ್ಯ ಸರ್ಕಾರದ ಬೊಕ್ಕಸ ಬರಿದಾಗಿರುವುದರಿಂದ, ಶಿಕ್ಷಣ ಇಲಾಖೆಯು ಶಾಲಾ ಮಕ್ಕಳ ಪೋಷಕರಿಂದ ತಿಂಗಳಿಗೆ 100 ರೂಪಾಯಿ ಪಡೆಯುವ ಹಂತಕ್ಕೆ ತಲುಪಿದೆ. ಈ ಹಿನ್ನಲೆಯಲ್ಲಿ ರಾಜ್ಯ ಬಿಜೆಪಿಗೆ ಸರ್ಕಾರಿ ಶಾಲೆಗಳನ್ನು ನಡೆಸುವ ಯೋಗ್ಯತೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ʼಖರ್ಚು ವೆಚ್ಚಗಳನ್ನು ಸರಿದೂಗಿಸಲು ಸರ್ಕಾರಿ ಶಾಲೆ ಮಕ್ಕಳು ಪ್ರತಿ ತಿಂಗಳು ಪೋಷಕರಿಂದ ₹100 ಸಂಗ್ರಹಿಸಿ ಶಾಲಾಭಿವೃದ್ಧಿ – ಮೇಲುಸ್ತುವಾರಿ ಸಮಿತಿಗಳಿಗೆ ನೀಡಬೇಕು ಎಂದು ರಾಜ್ಯ ಸರ್ಕಾರ ಹೊರಡಿಸಿರುವ ಸುತ್ತೋಲೆಯು ಅನ್ಯಾಯದ ಪರಮಾವಧಿ. ರಾಜ್ಯ ಬಿಜೆಪಿಗೆ ಸರ್ಕಾರಿ ಶಾಲೆಗಳನ್ನು ನಡೆಸುವ ಯೋಗ್ಯತೆ ಇಲ್ಲ ಎಂಬುದನ್ನು ಈ ನಿರ್ಧಾರ ದೃಢಪಡಿಸಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಕೋವಿಡ್‌ ನಂತರದ ದಿನಗಳಲ್ಲಿ ರಾಜ್ಯದಲ್ಲಿ ಸಾವಿರಾರು ಸರ್ಕಾರಿ ಶಾಲೆಗಳು ದುಸ್ಥಿತಿಯಲ್ಲಿದ್ದು, ಪೋಷಕರು ಆರ್ಥಿಕ ಸಂಕಷ್ಟದಲ್ಲಿರುವಾಗ ಶಾಲೆಯ ಖರ್ಚು ವೆಚ್ಚಗಳನ್ನು ಅವರ ಮೇಲೆ ಹೊರಿಸುವುದು ಯಾವ ನ್ಯಾಯ? ಸಂವಿಧಾನ ವಿಧಿ 21ಎ ಹಾಗೂ ಶಿಕ್ಷಣದ ಹಕ್ಕಿನ ನಿಯಮಗಳನ್ನೂ ಉಲ್ಲಂಘಿಸಿ ಈ ರೀತಿಯ ಅವೈಜ್ಞಾನಿಕ ನಿರ್ಧಾರ ಹೊರಡಿಸಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರ ಹೊರಡಿಸಿರುವ ಸುತ್ತೋಲೆಯು ಸರ್ಕಾರಿ ಶಾಲೆಗಳನ್ನು ಶಾಶ್ವತವಾಗಿ ಮುಚ್ಚಿಸುವ ಒಂದು ಹುನ್ನಾರ. ಸರ್ಕಾರಿ ಶಾಲೆ ಮಕ್ಕಳಿಗೆ ಅನ್ಯಾಯವಾಗುವುದನ್ನು ಕಾಂಗ್ರೆಸ್‌ ಪಕ್ಷವು ಎಂದಿಗೂ ಸಹಿಸುವುದಿಲ್ಲ. 2023ಕ್ಕೆ ಅಧಿಕಾರಕ್ಕೆ ಬಂದನಂತರ ಇಂತಹ ಶಿಕ್ಷಣ ವಿರೋಧಿ ನೀತಿಗಳನ್ನು ಹಿಂಪಡೆಯುತ್ತೇವೆ ಎಂದು ಕಿಡಿಕಾರಿದ್ದಾರೆ.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version