ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರ‍್ಯಾಪಿಡ್‌ ರಸ್ತೆ : ಗುಣಮಟ್ಟ, ಕಡಿಮೆ ವೆಚ್ಚ ಇದ್ದರೆ ಮಾತ್ರ ಪರಿಗಣನೆ: ಸಿಎಂ ಬೊಮ್ಮಾಯಿ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ರ‍್ಯಾಪಿಡ್‌ ರಸ್ತೆ : ಗುಣಮಟ್ಟ, ಕಡಿಮೆ ವೆಚ್ಚ ಇದ್ದರೆ ಮಾತ್ರ ಪರಿಗಣನೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಪ್ರಿ ಕಾಸ್ಟ್ ತಂತ್ರಜ್ಞಾನ ಬಳಸಿ ನಿರ್ಮಾಣವಾಗುವ ರ‍್ಯಾಪಿಡ್‌ ರಸ್ತೆಗಳನ್ನು ಗುಣಮಟ್ಟ ಹಾಗೂ ದರಗಳನ್ನು ಪರಿಶೀಲಿಸಿದ ನಂತರ ಪರಿಗಣಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ಬಿಬಿಎಂಪಿ ವತಿಯಿಂದ ಸಿ.ವಿ.ರಾಮನ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ನಿರ್ಮಿಸಿರುವ ರ‍್ಯಾಪಿಡ್‌ ರಸ್ತೆಯನ್ನು ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉತ್ತಮ ರಸ್ತೆ ಗಳ ಜೊತೆಗೆ ವೆಚ್ಚವೂ ಕಡಿಮೆಯಿರುವುದು ಬಹಳ ಮುಖ್ಯ. ಈ ಕುರಿತು ವರದಿಗಳು ಬಂದ ನಂತರ ಮುಂದಿನ ನಿರ್ಣಯ ಕೈಗೊಳ್ಳಲಾಗುವುದು ಎಂದರು.

ಬೆಂಗಳೂರಿನ ರಸ್ತೆ ನಿರ್ಮಾಣ ಮಾಡುವ ಸಂದರ್ಭಗಳಲ್ಲಿ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದೆವು. ವೈಟ್ ಟಾಪಿಂಗ್ ಮಾಡುವುದು ಬಹಳ ಸಮಯ ತೆಗೆದುಕೊಳ್ಳುತ್ತದೆ. ಸಂಚಾರ ವ್ಯವಸ್ಥೆ ಯನ್ನು ಬದಲಾಯಿಸುವುದು, ದಟ್ಟಣೆಯಾಗುವುದು ಹೆಚ್ಚು. ಒಂದು ಬಾರಿ ವೈಟ್ ಟಾಪಿಂಗ್ ಆದ ನಂತರ ಸಮಸ್ಯೆ ಉಂಟಾದಲ್ಲಿ ಪುನಃ ಅದನ್ನು ಒಡೆದು ತೆಗೆಯುವುದು ದೊಡ್ಡ ಆತಂಕದ ಕೆಲಸ. ಅದಕ್ಕೆಂದೇ ರ‍್ಯಾಪಿಡ್‌ ರಸ್ತೆ ತಂತ್ರಜ್ಞಾನ ಬಂದಿದೆ. ಈ ತಂತ್ರಜ್ಞಾನ ಪ್ರಿ ಕಾಸ್ಟ್ ಸ್ಲ್ಯಾಬ್ ಗಳನ್ನು ತಯಾರಿಸಿ, ಆಂತರಿಕ ಜಾಯಿಂಟ್ ಹಾಕಿ, ಬಲಗೊಳಿಸಿ, ರಸ್ತೆಯನ್ನು ಪ್ರಾಯೋಗಿಕವಾಗಿ 500 ಮೀ. ಪೈಕಿ 375 ಮೀಟರ್ ಉದ್ದದ ರಸ್ತೆ ನಿರ್ಮಾಣ ವಾಗಿದೆ. ಅದನ್ನು ಪರಿಶೀಲಿಸಲು ಬಂದಿದ್ದು, ಹಲವಾರು ಸೂಚನೆಗಳನ್ನು ನೀಡಿದ್ದೇನೆ. 20 ಟನ್ ಮೇಲಿರುವ ವಾಹನಗಳನ್ನು ಸತತವಾಗಿ ಸಂಚಾರ ಮಾಡಿಸಿ, ವಿಶ್ಲೇಷಣೆ ಮಾಡಬೇಕಿದೆ. ಭಾರಿ ವಾಹನಗಳ ಚಲನೆಯಿಂದ ಆಗುವ ಪರಿಣಾಮಗಳ ಬಗ್ಗೆ ಸಂಪೂರ್ಣ ವರದಿ ಬೇಕೆಂದು ಸೂಚಿಸಿದ್ದೇನೆ. ಇಲ್ಲಿಯ ಜಾಯಿಂಟ್ ಗಳು, ಟೆನ್ಸಾಯಿಲ್ ಶಕ್ತಿ ಏನಿದೆ, ತಾಂತ್ರಿಕ ವಿವರಗಳನ್ನು ಸಲ್ಲಿಸಲು ಸೂಚಿಸಿದ್ದು, ಅಂತಿಮವಾಗಿ ಕಾಮಗಾರಿಯು ಕ್ಷಿಪ್ರವಾಗಿ ಆಗಬೇಕು, ಗುಣಮಟ್ಟವಿರಬೇಕು ಹಾಗೂ ವೆಚ್ಚವೂ ಸೂಕ್ತವಾಗಿರಬೇಕು ಎಂದು ಸೂಚಿಸಿದ್ದೇನೆ ಎಂದು ಹೇಳಿದರು.

ಪ್ರಾಯೋಗಿಕವಾಗಿ ಈ ಯೋಜನೆ ಅನುಷ್ಠಾನಗೊಂಡಿದ್ದು, ಕಡಿಮೆ ವೆಚ್ಚದಲ್ಲಿ ಆಗುವುದಾದರೆ, ಬೆಂಗಳೂರಿನಲ್ಲಿ ಎಲ್ಲೆಲ್ಲಿ ವೈಟ್ ಟಾಪಿಂಗ್, ಸಂಚಾರ ದಟ್ಟಣೆಯುಳ್ಳ, ಕ್ಷಿಪ್ರವಾಗಿ ರಸ್ತೆಯಾಗಬೇಕಿರುವ ಸ್ಥಳಗಳಲ್ಲಿ ಇದನ್ನು ಅಳವಡಿಸಬಹುದು ಎಂದರು.

ಈ ರಸ್ತೆಗಳಿಗೆ ವೈಟ್ ಟಾಪಿಂಗ್ ಗಿಂತ ಶೇ 30 ರಷ್ಟು ಹೆಚ್ಚು ವೆಚ್ಚವಾಗುವುದು ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ವೆಚ್ಚವನ್ನು ಕಡಿತಗೊಳಿಸಬೇಕು. ನಮ್ಮ ಎಸ್.ಆರ್.ದರಗಳಿಗೆ ಹೊಂದುವಂತಿದ್ದರೆ ಮಾತ್ರ ಇದನ್ನು ಪರಿಗಣಿಸಲಾಗುವುದು ಎಂದು ಸ್ಪಷ್ಟವಾಗಿ ತಿಳಿಸಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಶಾಸಕ ಎಸ್.ರಘು, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್, ಆಡಳಿತಾಧಿಕಾರಿ ರಾಕೇಶ್ ಸಿಂಗ್, ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು