ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಿ.ಎಲ್.ಸಂತೋಷ್, ಶೋಭಾ ಕರಂದ್ಲಾಜೆ, ಪ್ರಹ್ಲಾದ್ ಜೋಶಿ, ಎಚ್.ಡಿ.ಕುಮಾರಸ್ವಾಮಿ ‘ಗ್ಯಾಂಗ್’‌ ಕಡೆಯಿಂದ ಕಾಂಗ್ರೆಸ್‌ ಶಾಸಕರಿಗೆ 100 ಕೋಟಿ ಆಫರ್!

P

Peepal Media • ರಾಜ್ಯ

• 1 ನಿಮಿಷದ ಓದು

ಬಿ.ಎಲ್.ಸಂತೋಷ್,  ಶೋಭಾ ಕರಂದ್ಲಾಜೆ, ಪ್ರಹ್ಲಾದ್ ಜೋಶಿ, ಎಚ್.ಡಿ.ಕುಮಾರಸ್ವಾಮಿ ‘ಗ್ಯಾಂಗ್’‌ ಕಡೆಯಿಂದ ಕಾಂಗ್ರೆಸ್‌ ಶಾಸಕರಿಗೆ 100 ಕೋಟಿ ಆಫರ್!

ಮಂಡ್ಯ, ಆಗಸ್ಟ್ 25: ಕರ್ನಾಟಕದ ಕಾಂಗ್ರೆಸ್ ಶಾಸಕ ರವಿಕುಮಾರ್ ಗೌಡ ಮತ್ತೊಮ್ಮೆ ಬಿಜೆಪಿ ವಿರುದ್ಧ ಆಘಾತಕಾರಿ ಆರೋಪ ಮಾಡಿದ್ದಾರೆ.

‘ಆಪರೇಷನ್ ಕಮಲ’ದ ಮೂಲಕ ರಾಜ್ಯದಲ್ಲಿ ಬಿಜೆಪಿ ಸರಕಾರ ಬೀಳಿಸಲು ಯತ್ನಿಸುತ್ತಿದ್ದು, ಕಾಂಗ್ರೆಸ್ ಶಾಸಕರನ್ನು ಸೆಳೆಯಲು 100 ಕೋಟಿ ರೂಪಾಯಿಗಳ ಆಮಿಷವೊಡ್ಡುತ್ತಿದೆ. ಆದರೆ ಬಿಜೆಪಿಯ ಷಡ್ಯಂತ್ರಗಳು ನಡೆಯುವುದಿಲ್ಲ, ತಮ್ಮ ಸರ್ಕಾರ ಸ್ಥಿರ ಮತ್ತು ಬಲಿಷ್ಠವಾಗಿದೆ ಎಂದು ಅವರು ಹೇಳಿದರು.

ಮಂಡ್ಯದಲ್ಲಿ ಭಾನುವಾರ ಶಾಸಕ ರವಿಕುಮಾರ್ ಗೌಡ ಮಾತನಾಡಿ, ಬಿಜೆಪಿ ಶಾಸಕರ ಖರೀದಿಗೆ ಹಣದ ಆಮಿಷವನ್ನು 50 ಕೋಟಿಯಿಂದ 100 ಕೋಟಿಗೆ ಏರಿಸಿದೆ. ಎರಡು ದಿನಗಳ ಹಿಂದೆ ವ್ಯಕ್ತಿಯೊಬ್ಬ ತನಗೆ ಕರೆ ಮಾಡಿ 100 ಕೋಟಿ ರೂ. ಸಿದ್ಧವಾಗಿದೆ ಎಂದು ಹೇಳಿ ಆಮಿಷ ಒಡ್ಡಲು ಯತ್ನಿಸಿದ್ದ ಎಂದು ಅವರು ತಿಳಿಸಿದ್ದಾರೆ. 50 ಜನರನ್ನು ಖರೀದಿಸಲು ಸಿದ್ಧ ಎಂದು ಆ ವ್ಯಕ್ತಿ ಹೇಳಿದರು. ತಮ್ಮ ಸರ್ಕಾರವನ್ನು ಬೀಳಿಸಲು ಬಿಜೆಪಿ ಪ್ರತಿದಿನ ಪಿತೂರಿ ನಡೆಸುತ್ತಿದೆ ಮತ್ತು ಪಕ್ಷದ ದಲ್ಲಾಳಿಗಳು ತಮ್ಮ ಶಾಸಕರನ್ನು ಸಂಪರ್ಕಿಸುತ್ತಿದ್ದಾರೆ. ಕರೆ ಮಾಡಿದವರ ಆಡಿಯೋ ನನ್ನ ಬಳಿ ಇದ್ದು, ಉಳಿದ ಸಾಕ್ಷ್ಯಗಳನ್ನು ಸಂಗ್ರಹಿಸಿ ಇಡಿ ಹಾಗೂ ಸಿಬಿಐಗೆ ನೀಡುವುದಾಗಿ ಹೇಳಿದ್ದಾರೆ. ಹಣದ ಚೀಲಗಳ ಸಮೇತ ಅವರನ್ನು ಹಿಡಿಯಲು ಮುಂದಾಗಿದ್ದೇನೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಪ್ರಹ್ಲಾದ್ ಜೋಶಿ, ಎಚ್.ಡಿ.ಕುಮಾರಸ್ವಾಮಿ ‘ಗ್ಯಾಂಗ್’ ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕ ರವಿಕುಮಾರ್ ಗೌಡ ಆರೋಪಿಸಿದರು. ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ಕಾಂಗ್ರೆಸ್ ಸರ್ಕಾರವನ್ನು ಪತನ ಮಾಡುತ್ತೇವೆ ಎಂದು ಎಲ್ಲರೂ ಭರವಸೆ ನೀಡಿದ್ದು, ಆ ಗುರಿಯನ್ನು ಇಟ್ಟುಕೊಂಡು ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ರವಿಕುಮಾರ್ ಗೌಡ ಅವರು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಬಿಜೆಪಿ ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಪ್ರಯತ್ನಿಸುತ್ತಿದ್ದು, 50 ಕೋಟಿ ಹಣದ ಜೊತೆಗೆ ಅವರಿಗೆ ಸಚಿವ ಸ್ಥಾನ ನೀಡುವುದಾಗಿ ಹೇಳಿರುವುದಾಗಿ ತಿಳಿಸಿದ್ದರು. ಈ ರೀತಿ ನಾಲ್ವರು ಶಾಸಕರನ್ನು ಸಂಪರ್ಕಿಸಲಾಗಿದ್ದು, ಈ ಕುರಿತು ತಮ್ಮ ಬಳಿ ಸಾಕ್ಷ್ಯಗಳಿವೆ ಎಂದು ಅವರು ಹೇಳಿದ್ದಾರೆ.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version