ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಕೇಂದ್ರಕ್ಕೆ ಶಿಫಾರಸು: ವಿಧಾನಸಭೆಯಲ್ಲಿ ಸರ್ಕಾರದ ಘೋಷಣೆ

PPeepal Media Desk

Peepal Media Desk ರಾಜ್ಯ

• 2 ನಿಮಿಷದ ಓದು

ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಕೇಂದ್ರಕ್ಕೆ ಶಿಫಾರಸು: ವಿಧಾನಸಭೆಯಲ್ಲಿ ಸರ್ಕಾರದ ಘೋಷಣೆ

ಬೆಂಗಳೂರು: ಪಶ್ಚಿಮಘಟ್ಟ ಹಾಗೂ ಮಲೆನಾಡು ಪ್ರದೇಶದ ಜನರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿರುವ ಕಸ್ತೂರಿ ರಂಗನ್ ವರದಿ ಆಧಾರಿತ ಕರಡು ಅಧಿಸೂಚನೆಯನ್ನು ಸಂಪೂರ್ಣವಾಗಿ ತಿರಸ್ಕರಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ವಿಧಾನಸಭೆಯಲ್ಲಿ ಶುಕ್ರವಾರ ಪಶ್ಚಿಮಘಟ್ಟ ಸಂರಕ್ಷಣೆ ಹಾಗೂ ಕಸ್ತೂರಿ ರಂಗನ್ ವರದಿ ಕುರಿತು ನಡೆದ ಚರ್ಚೆಗೆ ಉತ್ತರಿಸಿದ ಅರಣ್ಯ ಸಚಿವ ರಾಮಲಿಂಗಾರೆಡ್ಡಿ, ಮಲೆನಾಡು ಮತ್ತು ಪಶ್ಚಿಮಘಟ್ಟದ ಜನರ ಹಿತಾಸಕ್ತಿಗೆ ಧಕ್ಕೆಯಾಗದಂತೆ ರಾಜ್ಯ ಸರ್ಕಾರ ತನ್ನ ನಿಲುವನ್ನು ಕೇಂದ್ರದ ಮುಂದೆ ಸ್ಪಷ್ಟವಾಗಿ ಮಂಡಿಸಲಿದೆ ಎಂದು ತಿಳಿಸಿದರು.

ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರು ನಿಯಮ 69ರ ಅಡಿಯಲ್ಲಿ ವಿಷಯ ಪ್ರಸ್ತಾಪಿಸಿ, ಕೇಂದ್ರ ಸರ್ಕಾರ ಜುಲೈ 26ರಂದು ಹೊರಡಿಸಿರುವ ಕರಡು ಅಧಿಸೂಚನೆಯಿಂದ ಪಶ್ಚಿಮಘಟ್ಟ ಮತ್ತು ಮಲೆನಾಡು ಭಾಗದ 1,150ಕ್ಕೂ ಅಧಿಕ ಗ್ರಾಮಗಳ ಜನರಲ್ಲಿ ಆತಂಕ ಮೂಡಿದೆ ಎಂದು ಸದನದ ಗಮನಕ್ಕೆ ತಂದರು. ಈ ವಿಚಾರದಲ್ಲಿ ಪಕ್ಷಾತೀತವಾಗಿ ಚರ್ಚೆ ನಡೆಸಿ, ಕೇಂದ್ರಕ್ಕೆ ಸರ್ವಾನುಮತದ ನಿರ್ಣಯ ಕಳುಹಿಸಬೇಕು ಎಂದು ಅವರು ಆಗ್ರಹಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ರಾಮಲಿಂಗಾರೆಡ್ಡಿ, ಕಸ್ತೂರಿ ರಂಗನ್ ವರದಿ ಜಾರಿಯಾದರೆ ರಾಜ್ಯದ 10 ಜಿಲ್ಲೆಗಳ 39 ತಾಲೂಕುಗಳ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿವರಿಸಿದರು. ಈ ಹಿಂದೆ ಕೂಡ ರಾಜ್ಯ ಸರ್ಕಾರ ವರದಿಗೆ ಆಕ್ಷೇಪ ವ್ಯಕ್ತಪಡಿಸಿತ್ತು. ಇದೀಗ ಕೇಂದ್ರದ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು 60 ದಿನಗಳ ಕಾಲಾವಕಾಶವಿದ್ದು, ಈ ಅವಧಿಯಲ್ಲಿ ರಾಜ್ಯದ ಪರವಾದ ನಿಲುವನ್ನು ಕೇಂದ್ರಕ್ಕೆ ಸಲ್ಲಿಸಲಾಗುವುದು ಎಂದರು.

ಏನಿದು ಕಸ್ತೂರಿ ರಂಗನ್ ವರದಿ?
ಪಶ್ಚಿಮಘಟ್ಟದ ಪರಿಸರ ಸಂರಕ್ಷಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮೊದಲು ಪರಿಸರ ತಜ್ಞ ಮಾಧವ್ ಗಾಡ್ಗೀಳ್ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಸಮಿತಿಯ ವರದಿಗೆ ವಿವಿಧ ರಾಜ್ಯಗಳಲ್ಲಿ, ವಿಶೇಷವಾಗಿ ಪಶ್ಚಿಮಘಟ್ಟದ ಜನವಸತಿ ಪ್ರದೇಶಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು.

ಈ ಹಿನ್ನೆಲೆಯಲ್ಲಿ ಇಸ್ರೋ ಮಾಜಿ ಅಧ್ಯಕ್ಷ ಹಾಗೂ ವಿಜ್ಞಾನಿ ಕಸ್ತೂರಿ ರಂಗನ್ ನೇತೃತ್ವದಲ್ಲಿ ಮತ್ತೊಂದು ಉನ್ನತ ಮಟ್ಟದ ಸಮಿತಿ ರಚಿಸಲಾಯಿತು. ಈ ಸಮಿತಿ 2013ರ ಏಪ್ರಿಲ್ 15ರಂದು ತನ್ನ ಅಂತಿಮ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿತ್ತು.

ವರದಿಯಲ್ಲಿ ಪಶ್ಚಿಮಘಟ್ಟದ ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ ಗಣಿಗಾರಿಕೆ, ಕಲ್ಲುಕ್ವಾರಿ, ಮರಳು ಗಣಿಗಾರಿಕೆ, ಕೆಲವು ಬೃಹತ್ ನಿರ್ಮಾಣ ಚಟುವಟಿಕೆಗಳು, ಜಲವಿದ್ಯುತ್ ಯೋಜನೆಗಳು ಹಾಗೂ ಮಾಲಿನ್ಯ ಉಂಟುಮಾಡುವ ಕೈಗಾರಿಕೆಗಳ ಮೇಲೆ ಕಠಿಣ ನಿಯಂತ್ರಣಕ್ಕೆ ಶಿಫಾರಸು ಮಾಡಲಾಗಿದೆ. 20 ಸಾವಿರ ಚದರ ಮೀಟರ್‌ಗಿಂತ ಹೆಚ್ಚಿನ ನಿರ್ಮಾಣ ಚಟುವಟಿಕೆಗಳ ಮೇಲೂ ನಿರ್ಬಂಧ ವಿಧಿಸುವ ಪ್ರಸ್ತಾವನೆ ಇದೆ.

ಜನವಸತಿ, ಕೃಷಿ ಅಭಿವೃದ್ಧಿ ಬಗ್ಗೆ ಆತಂಕ
ಕಸ್ತೂರಿ ರಂಗನ್ ವರದಿ ಅನುಷ್ಠಾನಗೊಂಡರೆ ಪಶ್ಚಿಮಘಟ್ಟ ಹಾಗೂ ಮಲೆನಾಡಿನ ಜನವಸತಿ ಪ್ರದೇಶಗಳ ಅಭಿವೃದ್ಧಿಗೆ ತೊಡಕು ಉಂಟಾಗಬಹುದು ಎಂಬ ಆತಂಕ ಸ್ಥಳೀಯರಲ್ಲಿ ಇದೆ. ಕೃಷಿ ಚಟುವಟಿಕೆಗಳು, ಮನೆ ನಿರ್ಮಾಣ, ರಸ್ತೆ ಹಾಗೂ ವಿದ್ಯುತ್ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿ ಮೇಲೂ ನಿರ್ಬಂಧಗಳು ಪರಿಣಾಮ ಬೀರಬಹುದು ಎಂಬುದು ಜನಪ್ರತಿನಿಧಿಗಳ ವಾದವಾಗಿದೆ.

ಅರಣ್ಯ ಮತ್ತು ಪರಿಸರ ಸಂರಕ್ಷಣೆ ಅಗತ್ಯವಾದರೂ, ಶತಮಾನಗಳಿಂದ ಪಶ್ಚಿಮಘಟ್ಟ ಹಾಗೂ ಮಲೆನಾಡಿನಲ್ಲಿ ಬದುಕು ಕಟ್ಟಿಕೊಂಡಿರುವ ಜನರ ಹಕ್ಕುಗಳು ಮತ್ತು ಜೀವನೋಪಾಯಕ್ಕೆ ಧಕ್ಕೆಯಾಗದ ರೀತಿಯಲ್ಲಿ ಸಂರಕ್ಷಣಾ ನೀತಿ ರೂಪಿಸಬೇಕು ಎಂಬ ಒತ್ತಾಯ ಸದನದಲ್ಲಿ ಕೇಳಿಬಂದಿತು.

ಈ ಹಿನ್ನೆಲೆಯಲ್ಲಿ ಕರಡು ಅಧಿಸೂಚನೆಗೆ ರಾಜ್ಯದ ಆಕ್ಷೇಪಣೆಗಳನ್ನು ಸಮಗ್ರವಾಗಿ ದಾಖಲಿಸಿ, ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು