ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಲ್ಯಾಣ ಕರ್ನಾಟಕಕ್ಕೆ11770 ಕೋಟಿ ರೂ. ಅನುಮೋದನೆ. ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ನಿರ್ಣಯ – ಮುಖ್ಯಮಂತ್ರಿ ಸಿದ್ದರಾಮಯ್ಯ

P

Peepal Media • ರಾಜ್ಯ

• 2 ನಿಮಿಷದ ಓದು

ಕಲ್ಯಾಣ ಕರ್ನಾಟಕಕ್ಕೆ11770 ಕೋಟಿ ರೂ. ಅನುಮೋದನೆ. ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ನಿರ್ಣಯ – ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲಬುರಗಿ, ಸೆಪ್ಟೆಂಬರ್ 17: ಕಲಬುರಗಿಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ 46 ವಿಷಯಗಳಿಗೆ ಒಟ್ಟು 11770 ಕೋಟಿ ರೂ. ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಬೀದರ್ ಮತ್ತು ರಾಯಚೂರು ಪಟ್ಟಣಗಳನ್ನು ನಗರಪಾಲಿಕೆಯಾಗಿ ಮಾಡುವ ಹಾಗೂ ಬೀದರ್ ಮತ್ತು ಕಲಬುರಗಿಯಲ್ಲಿ ಬರುವ ಹಳ್ಳಿಗಳಿಗೆ ಕುಡಿಯುವ ನೀರು ಯೋಜನೆಯನ್ನು 7200 ಕೋಟಿ ರೂಗಳ ಯೋಜನೆಗೆ ಅನುಮತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಇಂದು ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಭಾಗಕ್ಕೆ 56 ವಿಷಯಗಳನ್ನು ಚರ್ಚಿಸಲಾಗಿದೆ. ಇವುಗಳಲ್ಲಿ 46 ವಿಷಯಗಳು ಕಲ್ಯಾಣ ಕರ್ನಾಟಕದ ಭಾಗಕ್ಕೆ ಸಂಬಂಧಪಟ್ಟ ವಿಷಯಗಳಾಗಿತ್ತು. ಸಭೆಯಲ್ಲಿ ಮಂಡಿಸಲಾಗಿದ್ದ 56 ವಿಷಯಗಳ 12692 ಕೋಟಿ ರೂ.ಗಳ ಯೋಜನೆಗಳ ಪ್ರಸ್ತಾವನೆ ಮಾಡಲಾಯಿತು. ನಾರಾಯಣಪುರ ಡ್ಯಾಂ ನಿಂದ ನೀರು ತರುವ ಯೋಜನೆ ಕೇಂದ್ರ ಸರ್ಕಾರದ ಪಾಲುದಾರಿಕೆ ಯೋಜನೆಯಿದಾಗಿದ್ದು, 7200 ಕೋಟಿ ರೂ.ಗಳಲ್ಲಿ ಅರ್ಧ ಭಾಗದ ಅನುದಾನವನ್ನು ಕೇಂದ್ರ ಸರ್ಕಾರ ನೀಡಬೇಕಿದೆ ಎಂದರು.

ಕೇಂದ್ರದಿಂದ 5000 ಕೋಟಿ ರೂ. ಕೋರಲು ನಿರ್ಣಯ

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರ ಈ ಭಾಗಕ್ಕೆ ಒಂದು ರೂಪಾಯಿ ಕೂಡ ನೀಡಿಲ್ಲ. ಸಂವಿಧಾನ ತಿದ್ದುಪಡಿಗೊಂಡು 371 ಜೆ ಬಂದ ನಂತರ ಈವರೆಗೆ ಅನುದಾನ ನೀಡಿಲ್ಲ. ಆದ್ದರಿಂದ ಕೇಂದ್ರ ಸರ್ಕಾರವೂ ಕೂಡ ಈ ಭಾಗದ ಅಭಿವೃದ್ಧಿಗೆ 5000 ಕೋಟಿ ರೂ. ನೀಡಲು ಕೇಂದ್ರಕ್ಕೆ ಮನವಿ ಮಾಡಲು ನಿರ್ಣಯ ಕೈಗೊಳ್ಳಲಾಯಿತು ಎಂದರು.

ಖಾಲಿ ಹುದ್ದೆಗಳ ಭರ್ತಿಗೆ ಕ್ರಮ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿಯಿರುವ 17439 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿಯವರು ತಿಳಿಸಿದರು.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 371ಜೆ ಜಾರಿ

ಇಂದು ಕಲ್ಯಾಣ ಕರ್ನಾಟಕದ ವಿಮೋಚನಾ ದಿನವಾದ್ದರಿಂದ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲಾಯಿತು. 2013 ರಿಮದ 2018 ವರೆಗೆ ನಮ್ಮ ಸರ್ಕಾರದ ಅವಧಿಯಲ್ಲಿ 2014 ರಲ್ಲಿ ಕಲಬುರಗಿಯಲ್ಲಿ ಸಚಿವ ಸಂಪುಟ ನಡೆಸಲಾಗಿತ್ತು. ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ಇಂದು ನಡೆಸಲಾಗಿದೆ. 2012 ರಲ್ಲಿ ಮನಮೋಹನ್ ಸಿಂಗ್ ಪ್ರಧಾನ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಂವಿಧಾನ ತಿದ್ದುಪಡಿ ಮಾಡಲಾಯಿತು. ರಾಜ್ಯದ ಮಲ್ಲಿಕಾರ್ಜುನ ಖರ್ಗೆ, ಧರಂಸಿಂಗ್ ಅವರ ಹೋರಾಟದಿಂದ 371 ಜೆ ಜಾರಿಗೆ ತರಲಾಯಿತು. ವಿಶೇಷ ಸವಲತ್ತುಗಳನ್ನು ಕಲ್ಯಾಣ ಕರ್ನಾಟಕದ ಭಾಗಕ್ಕೆ ನೀಡುವ ಉದ್ದೇಶದಿಂದ 2013 ರಲ್ಲಿ ಸಂವಿಧಾನ ತಿದ್ದುಪಡಿಯಾದ ನಂತರ ನಮ್ಮ ಸರ್ಕಾರದ ಅವಧಿಯಲ್ಲಿ ಈ ಕಾನೂನಿನ ಜಾರಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಯಿತು ಎಂದರು.

ಹಿಂದುಳಿದ ತಾಲ್ಲೂಕುಗಳ ಸ್ಥಿತಿಗತಿ ಪರಿಶೀಲನೆಗೆ ಸಮಿತಿ

2002 ರಲ್ಲಿ ನಂಜುಂಡಪ್ಪ ವರದಿಯಂತೆ ಪ್ರಾದೇಶಿಕ ಅಸಮತೋಲನವನ್ನು ಪರಿಹರಿಸಲು ಸಮಿತಿ ರಚಿಸಲಾಗಿತ್ತು. ಪ್ರಸ್ತುತ ಈ ಭಾಗದ ತಾಲ್ಲೂಕುಗಳ ಸ್ಥಿತಿಗತಿಯ ಪರಿಶೀಲನೆ ನಡೆಸಲು ಡಾ.ಗೋವಿಂದ ರಾವ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಪ್ರಾದೇಶಿಕ ಅಸಮತೋಲನ ಹೋಗಲಾಡಿಸಲು ಈ ಸಮಮಿಯನ್ನು ರಚಿಸಲಾಗಿದ್ದು, ಸಮಿತಿ ವರದಿ ಬಂದ ನಂತರ ಹಿಂದುಳಿದ ತಾಲ್ಲೂಕುಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

45 ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ತೀರ್ಮಾನ

ಕಲ್ಯಾಣ ಕರ್ನಾಟಕ ಭಾಗದಲ್ಲಿ 45 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಹಾಗೂ 31 ಸಮುದಾಯ ಆರೋಗ್ಯ ಕೇಂದ್ರಗಳನ್ನು ಪ್ರಾರಂಭಿಸಲು , 9 ತಾಲ್ಲೂಕು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ಹಾಗೂ 2 ತಾಲ್ಲೂಕು ಆಸ್ಪತ್ರೆಗಳನ್ನು ಜಿಲ್ಲಾ ಆಸ್ಪತ್ರೆಗಳನ್ನಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಅನುಮೋದನೆ ನೀಡಲಾಗಿದ್ದು, ಇದಕ್ಕೆ 890 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುವುದು ಎಂದರು.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version