ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನಿವೃತ್ತ ಶಿಕ್ಷಕಿ ಕರಿಬಸಮ್ಮ ರಾಜ್ಯದ ಮೊದಲ ದಯಾಮರಣದ ಫಲಾನುಭವಿ  

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ • ರಾಜ್ಯ

• 1 ನಿಮಿಷದ ಓದು

ನಿವೃತ್ತ ಶಿಕ್ಷಕಿ ಕರಿಬಸಮ್ಮ ರಾಜ್ಯದ ಮೊದಲ ದಯಾಮರಣದ ಫಲಾನುಭವಿ  

ದಾವಣಗೆರೆ : ರೋಗಿಯ ಘನತೆಯಿಂದ ಸಾಯುವ ಹಕ್ಕಿಗಾಗಿ ಸುಪ್ರೀಂ ಕೋರ್ಟ್‌ ನೀಡಿರುವ ನಿರ್ದೇಶನವನ್ನು ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ದಾವಣಗೆರೆಯ 85 ವರ್ಷದ ನಿವೃತ್ತ ಶಿಕ್ಷಕಿ ಹೆಚ್ ಬಿ ಕರಿಬಸಮ್ಮ ಈ ಯೋಜನೆಯ ಮೊದಲ ಫಲಾನುಭವಿಯಾಗುವ ಸಾಧ್ಯತೆ ಇದೆ.

 ಚಿಕಿತ್ಸೆಯ ಸಂದರ್ಭದಲ್ಲಿ ಚೇತರಿಕೆ ಸಾಧ್ಯವಿಲ್ಲದ ಸ್ಥಿತಿಗೆ ತಲುಪಿದರೆ ಆ ಸ್ಥಿತಿಯಲ್ಲಿ ಬದುಕಲು ಇಷ್ಟ ಇಲ್ಲದವರು ತಾವು ಚಿಕಿತ್ಸೆಗೆ ಒಳಪಡುವ ಮೊದಲೇ ಈ ರೀತಿಯ ಉಯಿಲು ಬರೆಯಬಹುದು. ಇಂತಹ ಉಯಿಲು ಇದ್ದರೆ ಅದನ್ನು ಜಾರಿಮಾಡುವುದು ವೈದ್ಯರು ಹಾಗೂ ಬಂಧುಗಳ ಕರ್ತವ್ಯವಾಗುತ್ತದೆ ಎಂದು ಇತ್ತೀಚೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದರು. 3 ದಶಕಗಳಿಂದ ಸ್ಲಿಪ್ ಡಿಸ್ಕ್ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಕರಿಬಸಮ್ಮ ಅವರಿಗೆ ಇತ್ತೀಚೆಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ದಿನದಿಂದ ದಿನಕ್ಕೆ ಆರೋಗ್ಯ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಘನತೆಯಿಂದ ಸಾಯುವ ಹಕ್ಕು ಪಡೆಯಲು 24 ವರ್ಷಗಳಿಂದ ಪ್ರಧಾನಿ, ರಾಷ್ಟ್ರಪತಿ, ಸುಪ್ರೀಂ ಕೋರ್ಟ್, ರಾಷ್ಟ್ರಪತಿಗಳಿಗೆ ಪತ್ರ ಬರೆಯುತ್ತಿದ್ದರು. 

ದಯಾಮರಣವನ್ನು 2018 ರಲ್ಲೇ ಸುಪ್ರೀಂ ಕೋರ್ಟ್ ಕಾನೂನುಬದ್ಧಗೊಳಿಸಿತ್ತು ಆದರೂ ಕರ್ನಾಟಕ ಸರ್ಕಾರ ಮಾತ್ರ ಇದನ್ನು ಜಾರಿಗೊಳಿಸಲು ಮುಂದಾಗಿದೆ.ರಾಜ್ಯ ಸರ್ಕಾರ ದಯಾಮರಣವನ್ನು ಜಾರಿಗೆ ತರಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ಮಾತನಾಡಿರುವ ಕರಿಬಸಮ್ಮ, ಹಲವರು ಈ ಹಕ್ಕು ಪಡೆಯಲು ಕಾಯುತ್ತಿದ್ದಾರೆ. ಆದರೆ ಈ ಪೈಕಿ ನಾನು ಮೊದಲ ವ್ಯಕ್ತಿಯಾಗಿರುತ್ತೇನೆ ಎಂದು ಭಾವಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಪತಿಯ ಜೊತೆಯಲ್ಲಿ ವಾಸಿಸುತ್ತಿರುವ ಕರಿಬಸಮ್ಮ, ತಮ್ಮ ಅನಾರೋಗ್ಯದ ಕಾರಣದಿಂದಾಗಿ ಆಸ್ತಿ, ಹಣ, ಸಂಬಂಧಗಳನ್ನು ಕಳೆದುಕೊಂಡಿದ್ದಾರೆ. 20 ವರ್ಷಗಳಿಂದ ಕೇರ್ ಹೋಮ್ ನಲ್ಲಿರುವ ಅವರು ತಮ್ಮ ಎಲ್ಲಾ ಆಸ್ತಿಯನ್ನು ಕೊನೆಯದಾಗಿ ಉಳಿಸಿಕೊಂಡಿದ್ದ 6 ಲಕ್ಷ ರೂಪಾಯಿಗಳನ್ನೂ ಬಿಎಸ್ಎಫ್ ನ ಸಿಬ್ಬಂದಿಗಳ ಕ್ಷೇಮಾಭಿವೃದ್ಧಿಗೆ ದಾನ ನೀಡಿದ್ದಾರೆ.ಸಂಬಂಧಿಕರಿಂದಲೂ ದೂರವಾಗಿರುವ ಕರಿಬಸಮ್ಮ ಅವರು ಈಗ ದಯಾಮರಣಕ್ಕಾಗಿ ಎದುರು ನೋಡುತ್ತಿದ್ದಾರೆ

ವಿಷಯಗಳು: #karnataka #news #peepal #politics
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು