ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಮಾಜಿ ದೇವದಾಸಿ ಮಹಿಳೆಯರ ಮರುಸಮೀಕ್ಷೆ ; ಅರ್ಜಿ ತುಂಬಲು ಈ ಮಾದರಿ ಅನುಸರಿಸಿ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಮಾಜಿ ದೇವದಾಸಿ ಮಹಿಳೆಯರ ಮರುಸಮೀಕ್ಷೆ ; ಅರ್ಜಿ ತುಂಬಲು ಈ ಮಾದರಿ ಅನುಸರಿಸಿ

ಬಳ್ಳಾರಿ: ಜಿಲ್ಲೆಯಲ್ಲಿ ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ ಕೈಗೊಳ್ಳಲಾಗಿದ್ದು, ಸಮೀಕ್ಷೆಗೆ ಸಂಬಂಧಿಸಿದಂತೆ ಸರ್ಕಾರದ ಆದೇಶದನ್ವಯ ಮೂರು ವಿವಿಧ ರೀತಿಯ ಅರ್ಜಿ ನಮೂನೆಗಳಲ್ಲಿ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆಯ ಜಿಲ್ಲಾ ಮಟ್ಟದ ಸಮಿತಿಯ ಸದಸ್ಯ ಕಾರ್ಯದರ್ಶಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ನಮೂನೆ-1: ಈಗಾಗಲೇ ಸರ್ಕಾರದಿಂದ 1993-94 ಮತ್ತು 2007-08ನೇ ಸಾಲಿನಲ್ಲಿ ನಡೆಸಲಾದ ಸಮೀಕ್ಷೆಯಲ್ಲಿ ಹೆಸರು ನೋಂದಣಿಯಾಗಿದ್ದು, ಮರಣ ಹೊಂದಿರುವ ಮಹಿಳೆಯ ಕುಟುಂಬದ ಅಧೀಕೃತ ಸದಸ್ಯರು ಮಾಹಿತಿ ಭರ್ತಿ ಮಾಡಿ ಕೊಡಬೇಕಾದ ಅರ್ಜಿ ನಮೂನೆ-1 ರಲ್ಲಿ ಸಲ್ಲಿಸಬೇಕು.

ನಮೂನೆ-2: ಈ ಹಿಂದೆ 1993-94 ಮತ್ತು 2007-08ನೇ ಸಾಲಿನಲ್ಲಿ ನಡೆಸಲಾದ ಸಮೀಕ್ಷೆಯಲ್ಲಿ ಹೆಸರು ನೋಂದಣಿಯಾಗದೇ ಹೊರಗುಳಿದ, ಹಾಲಿ ಜೀವಂತವಿರುವ ಹೊಸದಾಗಿ ದೇವದಾಸಿ ಪಟ್ಟಿಗೆ ಸೇರ್ಪಡೆಗೊಳ್ಳ ಬಯಸುವ ಮಾಜಿ ದೇವದಾಸಿ ಮಹಿಳೆಯರು ಮಾಹಿತಿ ಭರ್ತಿ ಮಾಡಿ ಕೊಡಬೇಕಾದ ಅರ್ಜಿ ನಮೂನೆ-2ರಲ್ಲಿ ಸಲ್ಲಿಸಬೇಕು.

ನಮೂನೆ-3: ಈ ಹಿಂದೆ 1993-94 ಮತ್ತು 2007-08ನೇ ಸಾಲಿನಲ್ಲಿ ನಡೆಸಲಾದ ಸಮೀಕ್ಷೆಯಲ್ಲಿ ಹೆಸರು ನೊಂದಣಿಯಾಗದೇ ಹೊರಗುಳಿದ ಮತ್ತು ಪ್ರಸ್ತುತ ಮರಣ ಹೊಂದಿರುವ ಮಹಿಳೆಯರ ಕುಟುಂಬದ ಅಧೀಕೃತ ಸದಸ್ಯರು ಮಾಹಿತಿ ಭರ್ತಿ ಮಾಡಿ ಕೊಡಬೇಕಾದ ಅರ್ಜಿ ನಮೂನೆ-3 ರಲ್ಲಿ ಸಲ್ಲಿಸಬೇಕು.

ಈ ಮೇಲ್ಕಂಡ ಅರ್ಜಿಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳಾದ ಮಹಿಳೆಯ ಆಧಾರ್ ಕಾರ್ಡ್ (ಮೊಬೈಲ್ ನಂಬರ್ ಲಿಂಕ್ ಇರುವ ಆಧಾರ್ ಕಾರ್ಡ್ ಸಂಖ್ಯೆ), ಮಹಿಳೆಯ ಮರಣ ಪ್ರಮಾಣ ಪತ್ರ, ವಂಶವೃಕ್ಷ, ಕುಟುಂಬದ ಅಧೀಕೃತ ಸದಸ್ಯರ ಆಧಾರ್ ಕಾರ್ಡ್, ಹೊಸ ಸೇರ್ಪಡೆ ಬಯಸುವ ಮಹಿಳೆಯರ ವಯಸ್ಸಿನ ದೃಢೀಕರಣ, ವೈದ್ಯಕೀಯ ದೃಢೀಕರಣ ಪತ್ರ, ಶಾಲಾ ದಾಖಲಾತಿ ಪತ್ರ, ಬ್ಯಾಂಕ್ ಪಾಸ್ ಪುಸ್ತಕ, ಪಡಿತರ ಚೀಟಿ, ಜಾತಿ ಆದಾಯ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರಗಳೊಂದಿಗೆ ಅರ್ಜಿಗಳನ್ನು ಸಂಬಂಧಿಸಿದ ಆಯಾ ತಾಲ್ಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳಿಗೆ ಅಕ್ಟೋಬರ್ 04 ರೊಳಗೆ ಅರ್ಜಿ ಸಲ್ಲಿಸಬೇಕು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು