ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಂವಿಧಾನದ ಹೆಸರಲ್ಲಿ ಆಳುವವರು ಇಂದು ಮನುಸ್ಮತಿಯನ್ನು ಹೇರುತ್ತಿದ್ದಾರೆ : ಇಂದೂಧರ ಹೊನ್ನಾಪುರ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಸಂವಿಧಾನದ ಹೆಸರಲ್ಲಿ ಆಳುವವರು ಇಂದು ಮನುಸ್ಮತಿಯನ್ನು ಹೇರುತ್ತಿದ್ದಾರೆ : ಇಂದೂಧರ ಹೊನ್ನಾಪುರ

ಬೆಂಗಳೂರು: ಅಂಬೇಡ್ಕರ್ ಅಂದು ಮನುಸ್ಮೃತಿಯನ್ನು ಸುಟ್ಟರು. ಆದರೆ ಸಂವಿಧಾನದ ಹೆಸರಲ್ಲಿ ಆಳುವವರು ಇಂದು ಮನುಸ್ಮತಿ ಮತ್ತು ಪಂಚಾಂಗವನ್ನು ಹೇರುತ್ತಿದ್ದಾರೆ ಎಂದು ಹಿರಿಯ ದಲಿತ ಹೋರಾಟಗಾರ ಇಂದೂಧರ ಹೊನ್ನಾಪುರ ಇಂದು ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ದಲಿತರ ಸಾಂಸ್ಕೃತಿಕ ಪ್ರತಿರೋಧ ಕಾರ್ಯಕ್ರಮದಲ್ಲಿ ಮಾತನಾಡಿ ತಮ್ಮ ಆಕ್ರೋಶವನ್ನು ವ್ಯಕ್ತ ಪಡಿಸಿದ್ದಾರೆ.

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ 66ನೇ ಪರಿನಿಬ್ಬಾಣ ದಿನದ ಅಂಗವಾಗಿ ಡಿಸೆಂಬರ್‌ 6, ಮಂಗಳವಾರದಂದು “ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶ” ಹಮ್ಮಿಕೊಂಡಿದ್ದು, ಕಾರ್ಯಕ್ರಮದಲ್ಲಿ ಹಿರಿಯ ದಲಿತ ಹೋರಾಟಗಾರ ಇಂದೂಧರ ಹೊನ್ನಾಪುರ ಸಮುದಾಯದ ಒಗ್ಗಟಿನ ಬಗ್ಗೆ ಸಾರಿ ಹೇಳಿದ್ದಾರೆ.

ದಲಿತರ ಸಾಂಸ್ಕೃತಿಕ ಪ್ರತಿರೋಧ ಸಮಾವೇಶದ ಪ್ರಾಸ್ತವಿಕ ಮಾತುಗಳನ್ನಾಡಿದ ಅವರು, ʼಇಂದು ಬಾಬಾ ಸಾಹೇಬರ 66ನೇ ಪರಿನಿಬ್ಬಾಣದ ದಿನ. ಬಾಬಾ ಸಾಹೇಬರು, ಬುದ್ಧ, ಬಸವಣ್ಣರ ಆರಾಧಿಯಾಗಿ ದಲಿತ ಬಂಧುಗಳ ವಿಮುಕ್ತಗಾಗಿ ಪ್ರಾಣಾರ್ಪಣೆ ಮಾಡಿದವರಿಗೆ ಈ ಸಮಾವೇಶವನ್ನು ಅರ್ಪಿಸುತ್ತೇವೆ. ದಲಿತರೆಂದರೆ ಕೇವಲ ಅಸ್ಪಶ್ಯತೆರಲ್ಲ, ಈ ನಾಡಿನ ಎಲ್ಲಾ ನೊಂದವರು. ಎಲ್ಲ ನೊಂದವರ ಪರ ಡಿಎಸ್‌ಎಸ್‌ ಹೋರಾಟ ಮಾಡಿದೆ. ಹಿಂದುಳಿದ ವರ್ಗದ ಅನುಸೂಯಮ್ಮನವರ ಪರ ಹೋರಾಡಿತ್ತುʼ ಎಂದರು.

ದಲಿತ ಚಳವಳಿ ನಮ್ಮ ಕಾಲಮಾನದಲ್ಲಿ ದೊಡ್ಡ ಸಾಧನೆಗಳನ್ನು ಮಾಡಿದೆ. ನಾವು ಹೋರಾಟಗಳ ಮೂಲಕ ಕಟ್ಟಿಕೊಟ್ಟಂತಹ ವಿಚಾರಗಳು ಲಕ್ಷಾಂತರ ದಲಿತರ ಹೃದಯದಲ್ಲಿ ಸ್ವಾಭಿಮಾನಿದ ಕಿಚ್ಚು ಹತ್ತಿಸಿದೆ. DSS ಬೀದಿಯಲ್ಲಿ ಕೂಗಿದ ಘೋಷಣೆಗಳು ಇಂದು ಸರ್ಕಾರದ ಕಾರ್ಯಕ್ರಮವಾಗಿವೆ ಎಂದು ತಿಳಿಸಿದರು.

ದಲಿತ ಚಳವಳಿ ಆರಂಭವಾಗಿ ಐವತ್ತು ವರ್ಷಗಳಾಗಿವೆ. ದಲಿತರು ಕೂಗುತ್ತಿರುವ ಘೋಷಣೆಗಳು ಕಾರ್ಯಕ್ರಮಗಳಾಗಿವೆ. ಇವೆಲ್ಲವೂ ನಮ್ಮ ಹೆಮ್ಮೆ. ದಲಿತ ಸಂಘಟನೆ ವಿಘಟನೆಯಾಗಿವೆ, ಆಯಾಸವಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸೇರಿರುವ ಜನಸ್ತೋಮ ನಮ್ಮ ಒಗ್ಗಟ್ಟನ್ನು ಸಾರಿ ಹೇಳಿದೆ ಎಂದು ಕೂಗಿ ಹೇಳಿದರು.

ಹಂಚಿಕೊಂಡು ತಿಂದು ಬೆಳೆದ ದೇಶವಿದು. ಈ ದೇಶ ಯಾವ ಸ್ಥಿತಿ ಹೋಗಿದೆ ನೋಡುತ್ತಿದ್ದೇವೆ. ನಮ್ಮ ಸಂಸ್ಕೃತಿ, ಆಹಾರ, ಉದ್ಯೋಗ, ಉಡುಗೆ ತೊಡುಗೆಯನ್ನು ಕಿತ್ತುಕೊಂಡಿದ್ದಾರೆ. ನಮ್ಮ ದೇಶ ಅಕ್ಕಪಕ್ಕದ ದೇಶಕ್ಕಿಂತ ಕೆಳಗೆ ಇಳಿಯುತ್ತಿದೆ. ಸಂವಿಧಾನದ ಹೆಸರಲ್ಲಿ ವಂಚನೆ ಮಾಡುತ್ತಿದ್ದಾರೆ. ಸ್ಕಾಲರ್‌ಶಿಪ್ ನಿಲ್ಲಿಸಿ, ಲಕ್ಷಾಂತರ ರೂಪಾಯಿ ಕಾರ್ಪೊರೇಟರ್‌ಗಳ ಸಾಲ ಮನ್ನಾ ಮಾಡುತ್ತಿದ್ದಾರೆ. ಅಂಕಿ- ಅಂಶಗಳನ್ನು ತಡೆದು ಬಡತನ ಇಲ್ಲ ಎನ್ನುತ್ತಿದ್ದಾರೆ ಎಂದು ಆಕ್ರೋಶ  ವ್ಯಕ್ತ ಪಡಿಸಿದರು.

ಅಂಬೇಡ್ಕರ್ ಅಂದು ಮನುಸ್ಮೃತಿಯನ್ನು ಸುಟ್ಟರು. ಆದರೆ ಸಂವಿಧಾನದ ಹೆಸರಲ್ಲಿ ಆಳುವವರು ಇಂದು ಮನುಸ್ಮತಿ ಮತ್ತು ಪಂಚಾಂಗವನ್ನು ಹೇರುತ್ತಿದ್ದಾರೆ. ಅದರ ವಿರುದ್ಧ ದಲಿತರು ಇವತ್ತು ಬೀದಿಗಿಳಿದಿದ್ದಾರೆ. ಸಂಘಟನೆಗಳು ಒಂದಾಗಿದ್ದಾರೆ. ಇದಕ್ಕೆ ಕಾರಣವಾದ ಸರ್ಕಾರಕ್ಕೆ ಧನ್ಯವಾದ ಹೇಳಬೇಕು ಎಂದು ಕಾರ್ಯಕ್ರಮದಲ್ಲಿ ಮಾತನಾಡಿದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು