ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಒಳಮೀಸಲಾತಿ ಕಲ್ಪಿಸಲು ಚಳಿಗಾಲದ ಅಧಿವೇಶನದಲ್ಲಿ ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ಮನವಿ: ಗೃಹ ಸಚಿವ ಪರಮೇಶ್ವರ

PPeepal Media Desk

Peepal Media Desk • ರಾಜ್ಯ

• 1 ನಿಮಿಷದ ಓದು

ಬೆಂಗಳೂರು: ಒಳಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಚಳಿಗಾಲದ ಅಧಿವೇಶನದಲ್ಲಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಕರ್ನಾಟಕ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಮಂಗಳವಾರ ತಿಳಿಸಿದರು.

ಒಳಮೀಸಲಾತಿ ಕುರಿತು ಪರಿಶಿಷ್ಟ ಜಾತಿಗೆ ಸೇರಿದ ಸಚಿವರು ಮತ್ತು ಶಾಸಕರ ಗುಂಪು ನಡೆಸಿದ ಸಭೆಯ ಕುರಿತು ಅವರು ಮಾತನಾಡುತ್ತಿದ್ದರು.

”ಚುನಾವಣೆ ಸಂದರ್ಭದಲ್ಲಿ ಒಳಮೀಸಲಾತಿ ಕುರಿತು ಚಿತ್ರದುರ್ಗ ನಗರದಲ್ಲಿ ಎಸ್‌ಸಿ-ಎಸ್‌ಟಿ ಸಮಾವೇಶ ನಡೆಸಲಾಗಿತ್ತು. ಆಗ ಹತ್ತು ಹಲವು ಘೋಷಣೆಗಳನ್ನು ಮಾಡಿದ್ದೆವು. ಅದರಲ್ಲಿ ಸದಾಶಿವ ಆಯೋಗದ ವರದಿಯನ್ನು ಮೊದಲ ಅಧಿವೇಶನದಲ್ಲಿಯೇ ಸದನದ ಮುಂದಿಡಲಾಗುವುದು ಎಂದು ಭರವಸೆ ನೀಡಲಾಯಿತು. ಆದರೆ, ಕಾರಣಾಂತರಗಳಿಂದ ಅದು ಸಾಧ್ಯವಾಗಿಲ್ಲ” ಎಂದು ಹೇಳಿದರು.

ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಸದಾಶಿವ ಆಯೋಗದ ವರದಿಯನ್ನು ಸದನದ ಮುಂದೆ ಮಂಡಿಸುವಂತೆ ಸಿದ್ದರಾಮಯ್ಯ ಅವರಿಗೆ ಸೂಚಿಸಲಾಗಿದೆ ಎಂದು ಪರಮೇಶ್ವರ ತಿಳಿಸಿದರು.

ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ನಮ್ಮಲ್ಲಿ ಕೆಲವರು ಈ ವಿಷಯವನ್ನು ಸಿಎಂ ಗಮನಕ್ಕೆ ತಂದಿದ್ದೇವೆ ಎಂದು ಅವರು ವಿವರಿಸಿದರು. ಈ ಬಗ್ಗೆ ಸಮಾಜದ ಮುಖಂಡರ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ ಎಂದು ಪರಮೇಶ್ವರ ತಿಳಿಸಿದರು.

ಒಳಮೀಸಲಾತಿ ಕುರಿತ ಸದಾಶಿವ ಆಯೋಗದ ವರದಿಯನ್ನು ಸಚಿವ ಸಂಪುಟದಲ್ಲಿ ಮಂಡಿಸಿ ವಿಧಾನಮಂಡಲದ ಮುಂದೆ ಇರಿಸಲು ಸರಕಾರದ ಮೇಲೆ ಒತ್ತಡ ತರಬೇಕು ಎಂದು ಸಚಿವ ಮುನಿಯಪ್ಪ ಸೋಮವಾರ ಮಾದಿಗ ಸಮುದಾಯದ ಮುಖಂಡರನ್ನು ಒತ್ತಾಯಿಸಿದರು.

ಸದಾಶಿವ ಆಯೋಗದ ಶಿಫಾರಸು ಜಾರಿಗಾಗಿ ತೀವ್ರ ಆಂದೋಲನದ ಅಗತ್ಯವಿದೆ. ನಿಮ್ಮ ಸ್ಥಳೀಯ ಶಾಸಕರ ಮನೆಗೆ ಮುತ್ತಿಗೆ ಹಾಕಿ. ಅವರಿಗೆ ಕಾರ್ಯಕ್ರಮಗಳನ್ನು ನಡೆಸಲು ಬಿಡಬೇಡಿ. ಸಚಿವನಾಗಿ ನಾನು ನಿಮಗೆ ಹೇಳುತ್ತಿದ್ದೇನೆ ಎಂದು ಕರ್ನಾಟಕ ಆದಿಜಾಂಬವ ಸಾಂಸ್ಕೃತಿಕ ಸಮಿತಿಯ ಮುಖಂಡರ ಸಭೆಯಲ್ಲಿ ಮುನಿಯಪ್ಪ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು