ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಂಡೂರು ವಿಧಾನಸಭೆ ಉಪಚುನಾವಣೆ 2024 ಶಾಂತಿಯುತ ಮತದಾನ, ಮತ ಹಕ್ಕು ಚಲಾಯಿಸಿದ ಮತದಾರರು

P

Peepal Media • ರಾಜ್ಯ

• 1 ನಿಮಿಷದ ಓದು

ಸಂಡೂರು ವಿಧಾನಸಭೆ ಉಪಚುನಾವಣೆ 2024 ಶಾಂತಿಯುತ ಮತದಾನ, ಮತ ಹಕ್ಕು ಚಲಾಯಿಸಿದ ಮತದಾರರು

ಬಳ್ಳಾರಿ,ನ.13: ಸಂಡೂರು ವಿಧಾನಸಭೆ ಉಪಚುನಾವಣೆಗೆ ನ.13 ರ ಬುಧವಾರದಂದು ಬೆಳಿಗ್ಗೆ 07 ಗಂಟೆಯಿಂದ ಸಂಡೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ವಿವಿಧೆಡೆ ಮತದಾನ ಬಹುತೇಕ ಶಾಂತಿಯುತವಾಗಿ ಜರುಗಿತು.


ಸಂಡೂರು ತಾಲ್ಲೂಕಿನ ಸಂಡೂರು ಪಟ್ಟಣ, ಕುಡತಿನಿ, ತೋರಣಗಲ್ಲು ಮತ್ತು ವಡ್ಡು ಗ್ರಾಮಗಳಲ್ಲಿ ಮತದಾರರು ಸರತಿ ಸಾಲಿನಲ್ಲಿ ಬಂದು ತಮ್ಮ ಮತ ಹಕ್ಕು ಚಲಾಯಿಸಿದ್ದು ಕಂಡುಬಂದಿತು.


ಕುಡತಿನಿ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದೇ ಕಡೆ ಇರುವ 186, 187, 188 ಮತ್ತು 189 ಮತಗಟ್ಟೆ ಕೇಂದ್ರಗಳಲ್ಲಿ ಮಹಿಳೆಯರು ಸಾಲಾಗಿ ಬಂದು ತಮ್ಮ ಮತ ಚಲಾವಣೆ ಮಾಡಿದರು. ಸುಶೀಲಾನಗರ ಗ್ರಾಮದಲ್ಲಿಯೂ ಮಹಿಳೆಯರು ಸಾಲು ನಿಂತು ಮತ ಚಲಾಯಿಸುವುದು ಕಂಡುಬಂದಿತು.
ಗಮನ ಸೆಳೆದ ಸಖಿ ಮತಗಟ್ಟೆ:


ಸಂಡೂರು ವಿಧಾನಸಭೆ ಉಪಚುನಾವಣೆ ಹಿನ್ನಲೆಯಲ್ಲಿ ಮತದಾರರನ್ನು ಆಕರ್ಷಿಸಲು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ತೋರಣಗಲ್ಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಖಿ ಮತಗಟ್ಟೆ ಸ್ಥಾಪಿಸಲಾಗಿತ್ತು.
ಮತದಾರರು ಸಖಿ ಮತಗಟ್ಟೆಗೆ ಆಗಮಿಸಿ ತಮ್ಮ ಮತ ಚಲಾಯಿದರು. ಬಳಿಕ ಅಲ್ಲಿಯೇ ಸ್ಥಾಪಿಸಲಾಗಿದ್ದ ಪಿಂಕ್ ಸೆಲ್ಫಿ ಬೂತ್‌ನಲ್ಲಿ ನಿಂತುಕೊAಡು ಮತಶಾಹಿ ಬೆರಳು ತೋರಿಸಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ಮೂಲಕ ಸಂಭ್ರಮಿಸಿದ್ದು ಕಂಡುಬಂತು.


ಮೊದಲ ಬಾರಿ ಮತ ಚಲಾಯಿಸಿದ ಯುವತಿ:


ಜಿಲ್ಲಾಡಳಿತವು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅವಕಾಶ ನೀಡಿತ್ತು. ಮತದಾರರ ಪಟ್ಟಿಯಲ್ಲಿ ಪ್ರಥಮ ಬಾರಿಗೆ ನೊಂದಾಯಿಸಿಕೊAಡಿದ್ದ ಸಂಡೂರು ಪಟ್ಟಣದ ಯುವತಿ ಅವನಿತ್ ಅವರು ಸಂಡೂರು ತಾಪಂ ಕಚೇರಿಯ ಮತಗಟ್ಟೆ ಸಂಖ್ಯೆ 67 ರಲ್ಲಿ ಮೊದಲ ಬಾರಿಗೆ ತಮ್ಮ ಮತದಾನ ಹಕ್ಕನ್ನು ಚಲಾಯಿಸಿದ್ದು, ಇದೇ ಮೊದಲ ಬಾರಿ ಮತ ಚಲಾಯಿಸಿದ್ದಕ್ಕಾಗಿ ಹರ್ಷ ವ್ಯಕ್ತಪಡಿಸಿದರು.


ಹಿರಿಯ ವಯಸ್ಕರಿಂದ ಮತದಾನ:


ಸಂಡೂರು ವಿಧಾನಸಭೆ ಉಪಚುನಾವಣೆ ಅಂಗವಾಗಿ ಸಂಡೂರು ವ್ಯಾಪ್ತಿಯಲ್ಲಿ ವಿವಿಧೆಡೆ ಹಿರಿಯ ವಯಸ್ಕರು ತಮ್ಮ ಮತದಾನ ಹಕ್ಕು ಚಲಾಯಿಸಿ ಪ್ರಜಾಪ್ರಭುತ್ವದ ಕರ್ತವ್ಯ ಮೆರೆದರು.


ಸಂಡೂರು ಪಟ್ಟಣದ ಮತಗಟ್ಟೆ ಸಂಖ್ಯೆ 51 ರಲ್ಲಿ 91 ವರ್ಷದ ವಯೋವೃದ್ಧೆ ಹುಲಿಗೆಮ್ಮ ಉತ್ಸಾಹದಿಂದ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸಿದರು. ಕೃಷ್ಣಾನಗರ ಬಡಾವಣೆಯ ಸರ್ಕಾರಿಯ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 13 ರಲ್ಲಿ 78 ವರ್ಷದ ಲಥೀಫ್ ಸಾಬ್ ವೀಲ್‌ಚೇರ್ ಸಹಾಯದೊಂದಿಗೆ ಆಗಮಿಸಿ ಮತದಾನ ಮಾಡಿದರು.


ಮತದಾರರಿಗೆ ಮತ್ತು ಮತಗಟ್ಟೆ ಸಿಬ್ಬಂದಿಗಳಿಗೆ ಆರೋಗ್ಯ ಸಮಸ್ಯೆ ಕಂಡುಬAದಲ್ಲಿ ನಿಭಾಯಿಸಲು ಆರೋಗ್ಯ ಇಲಾಖೆಯ ತಂಡದ ಜೊತೆಗೆ ವಿವಿಧ ಅಗತ್ಯದ ಔಷಧಿಗಳ ಮೆಡಿಕಲ್ ಕಿಟ್ ಜೊತೆಗೆ ಆಶಾ, ಅಂಗನವಾಡಿ ಕಾರ್ಯಕರ್ತರನ್ನು ನಿಯೋಜಿಸಲಾಗಿತ್ತು.


ಜಿಲ್ಲಾಡಳಿತದಿಂದ ನೆರಳಿನ ಸೌಲಭ್ಯ ಇಲ್ಲದ ಕಡೆ ಶ್ಯಾಮಿಯಾನ ವ್ಯವಸ್ಥೆ ಕಲ್ಪಿಸಲಾಗಿತ್ತು. ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ವಯಸ್ಕರಿಗೆ ಹಾಗೂ ವಿಶೇಷಚೇತನರಿಗೆ ವೀಲ್‌ಚೇರ್ ವ್ಯವಸ್ಥೆ ಮಾಡಲಾಗಿತ್ತು.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version