ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅತಿ ತುರ್ತು ಸುದ್ದಿ:ಸತತ ಮಳೆಯಿಂದಾಗಿ ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಾಳೆ ಶಾಲೆಗಳಿಗೆ ರಜೆ : ಡಿಸಿ ಜಗದೀಶ್

P

Peepal Media • ರಾಜ್ಯ

• 1 ನಿಮಿಷದ ಓದು

ಅತಿ ತುರ್ತು ಸುದ್ದಿ:ಸತತ ಮಳೆಯಿಂದಾಗಿ ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಾಳೆ ಶಾಲೆಗಳಿಗೆ ರಜೆ : ಡಿಸಿ ಜಗದೀಶ್

ಬೆಂಗಳೂರು ನಗರ ಜಿಲ್ಲೆ, ಅಕ್ಟೋಬರ್ 22 : ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ನಾಳೆ ದಿನಾಂಕ 23.10.2024 ರಂದು ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗೀ / ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ ಜಿ ರವರು ಆದೇಶಿಸಿದ್ದಾರೆ.

ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.

ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.

ಮುಂಜಾಗೃತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸುವುದು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version