ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮತದಾರರ ಪಟ್ಟಿ ಪರಿಷ್ಕರಣೆ ಅರ್ಜಿಗಳ ಪರಿಶೀಲನೆ ಕ್ರಮಬದ್ಧವಾಗಿರಲಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಮತದಾರರ ಪಟ್ಟಿ ಪರಿಷ್ಕರಣೆ ಅರ್ಜಿಗಳ ಪರಿಶೀಲನೆ ಕ್ರಮಬದ್ಧವಾಗಿರಲಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ (ಕವಾ): ಜಿಲ್ಲೆಯಲ್ಲಿ ನವೆಂಬರ್ 9 ರಿಂದ ಡಿಸೆಂಬರ್ 8 ರವರೆಗೆ ನಡೆದಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಸಂದರ್ಭದಲ್ಲಿ ಸಾರ್ವಜನಿಕರಿಂದ ಸ್ವೀಕರಿಸಿರುವ ಎಲ್ಲಾ ಅರ್ಜಿಗಳ ಪರಿಶೀಲನೆಯಲ್ಲಿ ಯಾವುದೇ ಅರ್ಜಿಗಳು ತಪ್ಪಿ ಹೋಗದಂತೆ ಅತ್ಯಂತ ವ್ಯವಸ್ಥಿತ ಮತ್ತು ಕ್ರಮಬದ್ಧವಾಗಿ ಅರ್ಜಿಗಳನ್ನು ವಿಲೇವಾರಿ ಮಾಡುವಂತೆ ಎಲ್ಲಾ ತಹಸೀಲ್ದಾರ್‌ಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು.

ಶುಕ್ರವಾರದಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವೀಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮತದಾರರ ಪಟ್ಟಿಗೆ ಸೇರ್ಪಡೆ, ತಿದ್ದುಪಡಿ, ವರ್ಗಾವಣೆ, ಕುರಿತಂತೆ ಸಾರ್ವಜನಿಕರಿಂದ ಸ್ವೀಕರಿಸಿರುವ ಅರ್ಜಿಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿ, ಆನ್ಲೈನ್ ಹೊರತುಪಡಿಸಿ ನೇರವಾಗಿ ಅರ್ಜಿ ನೀಡಿರುವವರಿಗೆ ಅರ್ಜಿ ಪಡೆದ ಬಗ್ಗೆ ಸ್ವೀಕೃತಿ ನೀಡಿ ಪಾರದರ್ಶಕತೆ ಕಾಯ್ದುಕೊಂಡು, ಅರ್ಜಿಗಳನ್ನು ನಿಗಧಿತ ಅವಧಿಯೊಳಗೆ ವಿಲೇವಾರಿ ಮಾಡುವಂತೆ ಸೂಚಿಸಿದ ಅವರು, ಹೊಸ ಮತದಾರರಿಗೆ ಶೀಘ್ರದಲ್ಲಿ ಎಪಿಕ್ ಕಾರ್ಡ್ ದೊರೆಯುವಂತೆ ಅಗತ್ಯ ಕ್ರಮ ಕೈಗೊಳ್ಳಿ ಎಂದರು.

ಮತದಾರರ ಪಟ್ಟಿ ಪರಿಷ್ಕರಣೆ ಅವಧಿಯಲ್ಲಿನ, ಮತದಾರರ ಪಟ್ಟಿಯಲ್ಲಿನ ಸೇರ್ಪಡೆ, ಆಕ್ಷೇಪಣೆ ಮತ್ತು ತಿದ್ದುಪಡಿಗಳ ಕುರಿತಂತೆ ಸಂಪೂರ್ಣ ವಿವರಗಳನ್ನು ವಿಧಾನಸಭಾ ಕ್ಷೇತ್ರವಾರು ಎಲ್ಲಾ ರಾಜಕೀಯ ಪಕ್ಷಗಳಿಗೆ ನೀಡುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಪ್ರಸ್ತುತ ನಡೆದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂದರ್ಭದಲ್ಲಿ, 16804 ಹೊಸ ಮತದಾರರು ಸೇರ್ಪಡೆಗೆ ಅರ್ಜಿ ಸಲ್ಲಿಸಿದ್ದು, ಮತದಾರರ ಪಟ್ಟಿಯಿಂದ ಹೆಸರು ತೆಗೆಯಲು 5783 ಹಾಗೂ ಮತದಾರರ ಪಟ್ಟಿಯಲ್ಲಿ ಅಗತ್ಯ ಬದಲಾವಣೆಗಳಿಗಾಗಿ 13320 ಅರ್ಜಿಗಳು ಸೇರಿದಂತೆ ಒಟ್ಟು 35907 ಅರ್ಜಿಗಳು ಸಲ್ಲಿಕೆಯಾಗಿವೆ ಎಂದರು.

ಮತದಾರರ ಪಟ್ಟಿಗೆ ಹೊಸದಾಗಿ ಸೇರ್ಪಡೆಯಾಗಲು ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ  3348, ಕುಂದಾಪುರ 2984, ಉಡುಪಿ 3893, ಕಾಪು 2852 ಹಾಗೂ ಕಾರ್ಕಳ 3726 ಸೇರಿದಂತೆ ಒಟ್ಟು 16804 ಅರ್ಜಿ ಸಲ್ಲಿಕೆಯಾಗಿವೆ.

ಮತದಾರರ ಪಟ್ಟಿಯಿಂದ ಹೆಸರು ತೆಗೆಯಲು ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 789, ಕುಂದಾಪುರ 1285, ಉಡುಪಿ 1270, ಕಾಪು 916, ಕಾರ್ಕಳ 1523 ಸೇರಿದಂತೆ ಒಟ್ಟು 5783 ಅರ್ಜಿ ಸಲ್ಲಿಕೆಯಾಗಿವೆ.

ಮತದಾರರ  ಪಟ್ಟಿಯಲ್ಲಿ  ಅಗತ್ಯ ಬದಲಾವಣೆಗಳಿಗಾಗಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ  2274, ಕುಂದಾಪುರ 2287, ಉಡುಪಿ 2466, ಕಾಪು 2411, ಕಾರ್ಕಳ 3882 ಸೇರಿದಂತೆ ಒಟ್ಟು 13320 ಅರ್ಜಿ ಸಲ್ಲಿಕೆಯಾಗಿವೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಭವಿಷ್ಯ ನಿಧಿ ಇಲಾಖೆಯ ಆಯುಕ್ತ ಅಭಿಷೇಕ್ ಮತ್ತು ವಿವಿಧ ಅನುಷ್ಠಾನಾಧಿಕಾರಿಗಳು ಇದ್ದರು. ವೀಡಿಯೋ ಸಂವಾದದಲ್ಲಿ ಕುಂದಾಪುರ ಉಪ ವಿಭಾಗಾಧಿಕಾರಿ ರಾಜು ಹಾಗೂ ಎಲ್ಲಾ ತಾಲೂಕುಗಳ ತಹಸೀಲ್ದಾರ್ಗಳು ಭಾಗವಹಿಸಿದ್ದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು