ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಶಾಲೆಗಳಲ್ಲಿ ಜಾತ್ಯತೀತತೆ ಮತ್ತು ವೈಜ್ಞಾನಿಕ ಮನೋಭಾವದ ಶಿಕ್ಷಣ ನೀಡಬೇಕು: ಸಿದ್ದರಾಮಯ್ಯ

P

Peepal Media Desk • ರಾಜ್ಯ

• 1 ನಿಮಿಷದ ಓದು

ಶಾಲೆಗಳಲ್ಲಿ ಜಾತ್ಯತೀತತೆ ಮತ್ತು ವೈಜ್ಞಾನಿಕ ಮನೋಭಾವದ  ಶಿಕ್ಷಣ ನೀಡಬೇಕು: ಸಿದ್ದರಾಮಯ್ಯ

ಬೆಂಗಳೂರು: ಶಾಲೆಗಳಲ್ಲಿನ ಮಕ್ಕಳಿಗೆ ಜಾತ್ಯಾತೀತತೆ ಮತ್ತು ವೈಜ್ಞಾನಿಕ ಮನೋಭಾವದ ಅರಿವು ಮೂಡಿಸುವ ಶಿಕ್ಷಣ ನೀಡಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿಂದು ಅಜೀಂಪ್ರೇಮ್ ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ ಉಚಿತ 6 ದಿನ ಪೂರಕ ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಈಗ ಅಜೀಂ ಪ್ರೇಮ್ ಜಿ ಫೌಂಡೇಷನ್ ಅವರು ವಾರದಲ್ಲಿ ನಾಲ್ಕು ದಿನವೂ ಮಕ್ಕಳಿಗೆ ಮೊಟ್ಟೆ ನೀಡಲು ಮತ್ತು ಪೂರಕ ಪೌಷ್ಠಿಕ ಆಹಾರ ಒದಗಿಸುವ ಪುಣ್ಯದ ಕಾರ್ಯಕ್ಕೆ ಸರ್ಕಾರದ ಜೊತೆಗೆ ಕೈಜೋಡಿಸಿದ್ದಾರೆ. ಒಳ್ಳೆಯ ಕೆಲಸಕ್ಕೆ ಕೈಜೋಡಿಸಿ ಅವರಿಗೆ ಅಭಿನಂದನೆಗಳು ಎಂದರು.

ಉಪಹಾರ ಇಲ್ಲದೆ ಶಾಲೆಗೆ ಬಂದು, ಊಟ ಇಲ್ಲದೆ ಮಧ್ಯಾಹ್ನದವರೆಗೂ ಶಾಲೆಯಲ್ಲಿರುವ ಮಕ್ಕಳನ್ನು ನಾನು ನೋಡಿದ್ದೇನೆ. ಹೀಗಾಗಿ ವಾರದಲ್ಲಿ ಎರಡು ದಿನ ಊಟ ಮತ್ತು ಮೊಟ್ಟೆ ಕೊಡಲು ಮುಂದಾಗಿದ್ದೇವೆ. ಮುಂದಿನ ದಿನಗಳಲ್ಲಿ ಎಲ್ಲ ಶಾಲೆಗಳಿಗೂ ವಿಸ್ತರಿಸುವ ಚಿಂತನೆ ಇದೆ ಎಂದರು.

ವೈಜ್ಞಾನಿಕವಾಗಿ, ವೈಚಾರಿಕವಾಗಿ ಮಕ್ಕಳು ವಿಕಾಸ ಹೊಂದುವ ವಾತಾವರಣವನ್ನು ಶಾಲೆಗಳಲ್ಲಿ ನಿರ್ಮಿಸಬೇಕು. ಆಗ ಮಾತ್ರ ಮಕ್ಕಳು ಸಮಾಜಮುಖಿ ಆಗುತ್ತಾರೆ ಎಂದರು.

ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ. ಈ ಕಾರಣಕ್ಕೆ ಸಮವಸ್ತ್ರ, ಶೂ, ಸಾಕ್ಸ್ ಕೊಡುವ ಜೊತೆಗೆ ಹೆಚ್ಚೆಚ್ಚು ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಪ್ರೋ ಮುಖ್ಯಸ್ಥರಾದ ಅಜೀಂ ಪ್ರೇಮ್ ಜಿ, ಯಾಸ್ಮಿನ್ ಪ್ರೆಮ್ ಜಿ, ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅಹಮದ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಮೆಹರೂಜ್ ಸೇರಿ, ಶಾಸಕ ರಿಜ್ವಾನ್ ಆರ್ಷದ್, ಅನುರಾಗ ಮೆಹರ್ ಹಾಜರಿದ್ದರು.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version