ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಬೆಂಗಳೂರು: ಹೊಸಕೋಟೆ ಬಳಿ ಸರಣಿ ರಸ್ತೆ ಅಪಘಾತ; ಬೈಕ್ ಸವಾರ ಸೇರಿ ಏಳು ಮಂದಿ ಸಾವು

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಬೆಂಗಳೂರು: ಹೊಸಕೋಟೆ ಬಳಿ ಸರಣಿ ರಸ್ತೆ ಅಪಘಾತ; ಬೈಕ್ ಸವಾರ ಸೇರಿ ಏಳು ಮಂದಿ ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸಮೀಪದ ಎಂ. ಸತ್ಯವಾರ ಗ್ರಾಮದ ಬಳಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದ ಸರಣಿ ಅಪಘಾತದಲ್ಲಿ ಏಳು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಹೊಸಕೋಟೆಯಿಂದ ದೇವನಹಳ್ಳಿ ಕಡೆಗೆ ಅತಿವೇಗವಾಗಿ ಚಲಿಸುತ್ತಿದ್ದ ಎಕ್ಸ್‌ಯುವಿ 700 (XUV 700) ಕಾರು ಮೊದಲು ತನ್ನ ಮುಂದೆ ಹೋಗುತ್ತಿದ್ದ ಮೋಟಾರ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಈ ಡಿಕ್ಕಿಯ ರಭಸಕ್ಕೆ ನಿಯಂತ್ರಣ ತಪ್ಪಿದ ಕಾರಿಗೆ ಹಿಂಬದಿಯಿಂದ ಬರುತ್ತಿದ್ದ ಇತರ ಎರಡು ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದಿವೆ. ಈ ಭೀಕರ ಅಪಘಾತದಲ್ಲಿ ಎಕ್ಸ್‌ಯುವಿ ಕಾರಿನಲ್ಲಿದ್ದ ಆರು ಪ್ರಯಾಣಿಕರು ಹಾಗೂ ಬೈಕ್ ಸವಾರ ಸೇರಿ ಒಟ್ಟು ಏಳು ಮಂದಿ ಸಾವನ್ನಪ್ಪಿದ್ದಾರೆ.

ಮೃತರನ್ನು ಬೆಂಗಳೂರಿನ ಕೊತ್ತನೂರು ನಿವಾಸಿಗಳು ಎಂದು ಶಂಕಿಸಲಾಗಿದ್ದು, ಪೊಲೀಸರು ಅವರ ಗುರುತು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ. ಅಪಘಾತದ ನಂತರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಹೊಸಕೋಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಹೊಸಕೋಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು